Weather Forecast: ಈ ಭಾಗಗಳಲ್ಲಿ ಜನವರಿ 6ರ ವರೆಗೆ ಭಾರೀ ಮಳೆ ಮುನ್ಸೂಚನೆ
Weather Forecast: ಇದೀಗ ರಣಭೀಕರ ಚಳಿ ನಡುವೆಯೂ ದೇಶದ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ ಒಂದು ವಾರ ಹಿಮಾಲಯ ಪ್ರದೇಶದಲ್ಲಿ ದಟ್ಟ ಮಂಜಿನ ನಡುವೆ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಇನ್ನೂ ಕೆಲವೆಡೆ ದಟ್ಟ ಮಂಜು, ಭೀಕರ ಚಳಿ ನಡುವೆಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 1ರಿಂದ ಜನವರಿ 3ರ ವರೆಗೆ ಪಶ್ಚಿಮ ಹಿಮಾಲಯದ ಪ್ರದೇಶದಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜನವರಿ 4ರಿಂದ ಜನವರಿ 6ರ ವರೆಗೆ ವಾಯುವ್ಯ ಭಾರತದ ಪ್ರತ್ಯೇಕ ಭಾಗಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಬಹುದು. ಜನವರಿ 5ರಂದು ಜಮ್ಮು-ಕಾಶ್ಮೀರ, ಮುಜಫರಾಬಾದ್, ಗಿಲ್ಗಿಟ್ ಮತ್ತು ಬಾಲ್ಟಿಸ್ತಾನ್‌ನಲ್ಲಿ ದಟ್ಟ ಮಂಜಿನ ನಡುವೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಟ್ಟ ಮಂಜು ಮುನ್ಸೂಚನೆ: ಜನವರಿ 1ರಿಂದ ಹಿಮಾಚಲ ಪ್ರದೇಶ, ಪಂಜಾಬ್, ಪೂರ್ವ ಉತ್ತರ ಪ್ರದೇಶ ಮತ್ತು ಚಂಡೀಗಢದ ಪ್ರತ್ಯೇಕ ಪ್ರದೇಶಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು 5 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜನವರಿ 5 ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್, ಉತ್ತರಾಖಂಡ, ರಾಜಸ್ಥಾನ, ಚಂಡೀಗಢ, ಹರಿಯಾಣ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ಬುಧವಾರ ನವದೆಹಲಿಯಲ್ಲಿ ಬೆಳಗ್ಗೆ ಮಂಜಿನ ಜೊತೆ ಮೋಡ ಕವಿದ ವಾತಾವರಣ ಇದ್ದು, ಮತ್ತೆ ಸಂಜೆ ವೇಳೆಗೆ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಬಾರಿ ಅಂದರೆ 2024ರಲ್ಲಿ ಮುಂಗಾರು ಮೊದಲು ಕೇರಳಕ್ಕೆ ಎಂಟ್ರಿ ಕೊಟ್ಟು ಬಳಿಕ ಕರ್ನಾಟಕಕ್ಕೆ ಆಗಮಿಸಿತು. ಬಳಿಕ ದೇಶಾದ್ಯಂತ ಆವರಿಸಿ ಅವಾಂತರಗಳನ್ನೇ ಸೃಷ್ಟಿಸಿತು. ಮತ್ತೊಂದೆಡೆ ನೋಡುವುದಾದರೆ ಬರದ ಬೇಗೆಯಿಂದ ಬೆಂದಿದ್ದ ರೈತರ ಹೊಟ್ಟೆ ತಣ್ಣಗಾಗುವಂತೆ ಈ ಬಾರಿ ಸುರಿದ ಮುಂಗಾರು ಮಳೆ ಮಾಡಿದೆ.












Click it and Unblock the Notifications