Weather Forecast: ಈ ಭಾಗಗಳಲ್ಲಿ ಜನವರಿ 12ರ ವರೆಗೂ ಭೀಕರ ಚಳಿ ನಡುವೆಯೂ ಭಾರೀ ಮಳೆ ಮುನ್ಸೂಚನೆ
Weather Forecast: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟಿಸಿ ಅವಾಂತರಗಳನ್ನೇ ಸೃಷ್ಟಿಸಿದೆ. ಇನ್ನು ಇದೀಗ ಭೀಕರ ಚಳಿ, ತಂಡಿ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 6 ದಿನ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎಂದು ಇಲ್ಲಿ ತಿಳಿಯಿರಿ.
2025ರ ಜನವರಿಯ ಮೊದಲ ವಾರದಲ್ಲಿಯೇ ಚಳಿಯ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಬಂದಿದೆ. ಇನ್ನು ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜನವರಿ 12ರ ವರೆಗೆ ವಾಯುವ್ಯ ಭಾರತದಲ್ಲಿ ಹಲವೆಡೆ ಭೀಕರ ಚಳಿ, ದಟ್ಟ ಮಂಜಿನ ನಡುವೆಯೂ ಮಳೆಯಾಗುವ ಸಾಧ್ಯತೆಯಿದೆ. ಇಂದು (ಜನವರಿ 06) ನವದೆಹಲಿಯ ಹಲವೆಡೆ ಲಘು ಮಳೆಯಾಗುವ ಮುನ್ಸೂಚನೆ ಇದೆ.

ಪಶ್ಚಿಮ ಹಿಮಾಲಯ ಪ್ರದೇಶದ ಹವಾಮಾನ: ಇಂದು (ಜನವರಿ 06) ಹಿಮಾಚಲ ಪ್ರದೇಶದಲ್ಲಿ ಭಾರೀ ಹಿಮಪಾತದೊಂದಿದೆ ಮಳೆ ಸುರಿಯುವ ಸಾಧ್ಯತೆಯಿದೆ. ಇದೇ ಅವಧಿಯಲ್ಲಿ ಜಮ್ಮು-ಕಾಶ್ಮೀರ, ಮುಜಫರಾಬಾದ್, ಲಡಾಖ್, ಬಾಲ್ಟಿಸ್ತಾನ್, ಗಿಲ್ಗಿಟ್ ಮತ್ತು ಹಿಮಾಚಲ ಪ್ರದೇಶದಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜನವರಿ 7 ಮತ್ತು 8ರಂದು ಈಶಾನ್ಯ ರಾಜ್ಯಗಳ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆಯ ತೀವ್ರವಾಗಿರದಿದ್ದರೂ ಚಳಿ ಮತ್ತು ತಾಪಮಾನದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುವ್ಯ ಭಾರತದ ಹವಾಮಾನ: ಜನವರಿ 10ರಿಂದ ಜನವರಿ 12ರ ವರೆಗೆ ವಾಯುವ್ಯ ಭಾರತದ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಹಿಮಾಲಯ ಪ್ರದೇಶದಾದ್ಯಂತ ದಟ್ಟ ಮಂಜಿನ ನಡುವೆಯೂ ಲಘು ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ವಾಯುವ್ಯ ಭಾರತದ ಹಲವೆಡೆಯೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ದಟ್ಟ ಮಂಜು: ಉತ್ತರ ಭಾರತದ ಕೆಲವು ಭಾಗಗಳಲ್ಲಿ ಜನವರಿ 9ರ ವರೆಗೆ ತಡರಾತ್ರಿ ಮತ್ತು ಮುಂಜಾನೆ ವೇಳೆ ದಟ್ಟ ಮಂಜು ಮುಂದುವರಿಯುವ ಸಾಧ್ಯತೆ ಹೆಚ್ಚಿದೆ. ಪರಿಣಾಮ ವಾಹನ ಸವಾರರು ಹಾಗೂ ವಿಮಾನ ಹಾರಾಟಕ್ಕೆ ಅಡಚಣೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಜನವರಿ 6ರಿಂದ 9ರ ವರೆಗೆ ಹರಿಯಾಣ, ಚಂಡೀಗಢ ಮತ್ತು ಪಂಜಾಬ್‌ನ ಪ್ರತ್ಯೇಕ ಭಾಗಗಳಲ್ಲಿ ತಾಪಮಾನದಲ್ಲಿ ಇಳಿಕೆಯಾಗಲಿದ್ದು, ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಇದೇ ವೇಳೆ ಉತ್ತರ ಪ್ರದೇಶ ಮತ್ತು ರಾಜಸ್ಥಾನ, ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಸಿಕ್ಕಿಂ. ಈಶಾನ್ಯ ಪ್ರದೇಶಗಳಾದ ಮಣಿಪುರ, ತ್ರಿಪುರ, ಮೇಘಾಲಯ, ಮಿಜೋರಾಂ, ಅಸ್ಸಾಂ, ಮತ್ತು ನಾಗಾಲ್ಯಾಂಡ್‌ನಲ್ಲಿಯೂ ಇದೇ ರೀತಿಯ ಹವಾಮಾನ ಇರಲಿದೆ ಎಂದು ತಿಳಿಸಿದೆ.
ನವದೆಹಲಿ ಹವಾಮಾನದ ವಿವರ: ಇಂದು (ಜನವರಿ 6) ನವದೆಹಲಿಯಲ್ಲಿನ ಬಹುತೇಕ ಭಾಗಗಳಲ್ಲಿ ಮೋಡ ಕವಿದ ವಾತಾವರ ಇದ್ದು, ಲಘು ಮಳೆಯಾಗುವ ಸಾಧ್ಯತೆಯಿದೆ. ಇನ್ನು ಇಂದಿ ದಿನವಿಡೀ ಮಂಜು ಕವಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications