Weather Forecast: ಈ ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಜನವರಿ 13ರ ವರೆಗೆ ಭಾರೀ ಮಳೆ ಮುನ್ಸೂಚನೆ

Weather Forecast: ಇದೀಗ ದೇಶಾದ್ಯಂತ ಭೀಕರ ಚಳಿ ಮುಂದುವರೆದಿದೆ. ಇದರ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಜನವರಿ 13ರ ವರೆಗೂ ದಕ್ಷಿಣದ ಭಾರತದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಇಂದು (ಜನವರಿ 10) ನವದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ ನೋಯ್ಡಾ ಮತ್ತು ಗಾಜಿಯಾಬಾದ್ ಸೇರಿದಂತೆ ಕೆಲವು ಸ್ಥಳಗಳಲ್ಲಿ ದಟ್ಟ ಮಂಜು ಕವಿದ ವಾತಾವರಣ ಮುಂದುವರೆದಿದೆ. ಇನ್ನು ನವದೆಲ್ಲಿಯ ಗಾಳಿ ಗುಣಮಟ್ಟ ಹದಗೆಟ್ಟಿದ್ದು, ಇದರೊಂದಿಗೆ ಮಂಜು ಕವಿದ ವಾತಾವರಣ ವಾಹನ ಸವಾರರಿಗೆ ಅಡಚಣೆ ಉಂಟು ಮಾಡಿದ ಘಟನೆ ನಡೆದಿದೆ. ಇನ್ನೂ ಭೀಕರ ಚಳಿ ನಡುವೆಯೂ ಕೆಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Weather Forecast Heavy rainfall forecast in these states till January 13

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಜನವರಿ 10 ರಿಂದ 12ರ ವರೆಹೆ ಗಂಗಾ ಬಯಲು ಪ್ರದೇಶಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ಇನ್ನು ಶಿಮ್ಲಾ ಹವಾಮಾನ ಇಲಾಖೆ ಪ್ರಕಾರ, ಶಿಮ್ಲಾ ಮತ್ತು ಹಿಮಾಚಲ ಪ್ರದೇಶದ ಹಲವೆಡೆ ಈ ವಾರಾಂತ್ಯದಲ್ಲಿ ಹಿಮಪಾತ ಸಂಭವಿಸುವ ಸಾಧ್ಯತೆಯಿದೆ. ಇಂದು ಉನಾ, ಬಿಲಾಸ್‌ಪುರ್, ಹಮೀರ್‌ಪುರ್, ಕಾಂಗ್ರಾ ಮತ್ತು ಮಂಡಿ ಜಿಲ್ಲೆಗಳ ಪ್ರತ್ಯೇಕ ಭಾಗಗಳಲ್ಲಿ ದಟ್ಟ ಮಂಜಿನ ಜೊತೆ ಭೀಕರ ಚಳಿ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಶನಿವಾರ ಸಂಜೆಯಿಂದ ಭಾನುವಾರ ಮಧ್ಯರಾತ್ರಿಯವರೆಗೆ ಶಿಮ್ಲಾ ಸೇರಿದಂತೆ ಇಲ್ಲಿನ ಪಗ್ರತ್ಯೇಕ ಭಾಗಗಳಲ್ಲಿ ದಟ್ಟ ಮಂಜಿನ ಜೊತೆ ಭೀಕರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಿನ್ನೆ ಉನಾದಲ್ಲಿ ರಾತ್ರಿ ತಾಪಮಾನ -0.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹಗಲಿನಲ್ಲಿ ಗರಿಷ್ಠ 22.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ತಿಳಿದುಬಂದಿದೆ.

ಜಮ್ಮು ಮತ್ತು ಕಾಶ್ಮೀರದ ಹವಾಮಾನದ ವಿವರ: ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಜಮ್ಮು-ಕಾಶ್ಮೀರದ ಪ್ರತ್ಯೇಕ ಪ್ರದೇಶಗಳಲ್ಲಿ ದಟ್ಟ ಮಂಜಿನ ನಡುವೆಯೇ ಲಘು ಮಳೆಯಾಗುವ ಸಾಧ್ಯತೆಯಿದೆ. ಇಲ್ಲಿನ ಕನಿಷ್ಠ ತಾಪಮಾನವು ಮತ್ತಷ್ಟು ಕಡಿಮೆಯಾಗುವ ಸಾಧ್ಯತೆಯಾಗಲಿದ್ದು, ಶೀತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಎಲ್ಲೆಲ್ಲಿ ಮಳೆ?: ಜನವರಿ 11 ರಿಂದ 13ರ ವರೆಗೆ ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್‌ನ ಕೆಲವು ಪ್ರದೇಶಗಳಲ್ಲಿ ಮತ್ತು ಜನವರಿ 12 ಮತ್ತು 13ರಂದು ಕೇರಳ ಮತ್ತು ಮಾಹೆಯಲ್ಲಿ ಗುಡುಗು, ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜನವರಿ 13ರಂದು ಈಶಾನ್ಯ ರಾಜ್ಯಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಈಗಾಗಲೇ ಮುಂಗಾರು ಮಳೆಯಿಂದ ದಕ್ಷಿಣ ಭಾರತದ ಬಹುತೇಕ ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನೂ ಇದೀಗ ಭೀಕರ ಚಳಿ ನಡುವೆಯೂ ಈ ಭಾಗದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+