IMD Weather Forecast: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಈ ಭಾಗಗಳಲ್ಲಿ ಜನವರಿ 20ರ ವರೆಗೆ ಭಾರೀ ಮಳೆ ಮುನ್ಸೂಚನೆ

IMD Weather Forecast: ಇದೀಗ ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಚಳಿಯ ವಾತಾವರಣ ನಿರ್ಮಾಣವಾಗಿದೆ. ಈ ನಡುವೆಯೇ ಜನವರಿ 20ರ ವಗೆರೆ ದೇಶದ ಹಲವು ಭಾಗಗಳಲ್ಲಿ ರಣಭೀಕರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಭಾರತದ ಬಹುತೇಕ ಭಾಗಗಳಲ್ಲಿ ದಟ್ಟ ಮಂಜಿನ ಜೊತೆಗೆ ಚಳಿಯ ಪ್ರಮಾಣ ತೀವ್ರಗೊಳ್ಳುತ್ತಲೇ ಇದೆ. ಪರಿಣಾಮ ಜನರು ಮನೆಯಿಂದ ಹೊರಬರಲು ಯೋಚನೆ ಮಾಡುತ್ತಿದ್ದರೆ, ಮತ್ತೊಂದೆಡೆ ವಾಹನ ಸವಾರರು ಮಂಜಿನ ಅಡಚಣೆಯಿಂದಾಗಿ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಉತ್ತರ ಭಾರತದ ಬಹುತೇಕ ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ದಟ್ಟ ಮಂಜಿನ ಜೊತೆ ಭೀಕರ ಚಳಿ ಮುಂದುವರೆಯುವ ಸಾಧ್ಯತೆಯಿದೆ. ಈ ನಡುವೆಯೇ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Weather Forecast Heavy rainfall forecast in these states till January 20

ಮುಂದಿನ ಹಲವು ದಿನಗಳವರೆಗೆ ಹಿಮಾಚಲ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ದಟ್ಟ ಮಂಜಿ ನಡುವೆ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಜನವರಿ 18 ರವರೆಗೆ ಹರಿಯಾಣ, ಚಂಡೀಗಢ, ಪಂಜಾಬ್, ಪೂರ್ವ ರಾಜಸ್ಥಾನ, ಉತ್ತರ ಪ್ರದೇಶ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ರಾತ್ರಿ ಮತ್ತು ಮುಂಜಾನೆ ಸಮಯದಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಭಾರೀ ಮಳೆ ಎಚ್ಚರಿಕೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಜನವರಿ 16ರಂದು ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಅಲ್ಲಲ್ಲಿ ಮಂಜಿನ ಜೊತೆ ಚದುರಿದದಂತೆ ಮಳೆಯಾಗುವ ಸಾಧ್ಯತೆಯಿದೆ. ಇದೇ ವೇಳೆ ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ಪ್ರದೇಶ ಮತ್ತು ಪೂರ್ವ ರಾಜಸ್ಥಾನದಲ್ಲಿಯೂ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಚಂಡಮಾರುತದ ಪರಿಚಲನೆಯ ಪರಿಣಾಮ, ದಕ್ಷಿಣ ಭಾರತದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಜನವರಿ 18ರಂದು ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜನವರಿ 18 ರಿಂದ 20ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದ ಹಲವೆಡೆ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ರವಾನಿಸಿದೆ.

ಜನವರಿ 14ರಂದು ಹಿಮಾಚಲ ಪ್ರದೇಶ ಮತ್ತು ರಾಜಸ್ಥಾನದ ಪ್ರತ್ಯೇಕ ಭಾಗಗಳಲ್ಲಿ ಭೀಕರ ಚಳಿ ಮುಂದುವರೆದಿತ್ತು. ಅದರಲ್ಲೂ ಉತ್ತರದ ಬಹುತೇಕ ರಾಜ್ಯಗಳಲ್ಲಿ ಇದೇ ರೀಯ ವಾತಾವರಣ ಇತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ, ದೆಹಲಿಯಲ್ಲಿ ಇಂದು (ಜನವರಿ 15) ಬೆಳಗ್ಗೆ 6 ಗಂಟೆಗೆ ದಟ್ಟ ಮಂಜಿನ ವಾತಾವರಣ ಇದ್ದು, ವಾಹನ ಸವಾರರಿಗೆ ಅಡಚಣೆ ಉಂಟು ಮಾಡಿದೆ. ಅಲ್ಲದೆ, ಗಾಳಿಯ ಗುಣಮಟ್ಟ ತೀವ್ರ ಕಳಪೆ ಗುಣಮಮಟ್ಟದಿಂದ ಕೂಡಿದೆ ಎಂದು ತಿಳಿಸಿದೆ.

ಜನವರಿ 15 ಮತ್ತು 16ರಂದು ರಾಷ್ಟ್ರ ರಾಜಧಾನಿ ನವದೆಹಲಿ ಮತ್ತು ನೆರೆಯ ರಾಜ್ಯಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಪ್ರತ್ಯೇಕವಾಗಿ ಅಲ್ಲಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಕನಿಷ್ಠ ತಾಪಮಾನದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಚಳಿಯ ಪ್ರಮಾಣ ಹೆಚ್ಚಾಗಿದೆ. ಜನವರಿ 17ರಂದು ನವದೆಹಲಿಯಲ್ಲಿ ಯಾವುದೇ ಮಳೆ ಮುನ್ಸೂಚನೆ ಇರುವುದಿಲ್ಲ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+