Weather Forecast: ಈ ಭಾಗಗಳಲ್ಲಿ ಭೀಕರ ಚಳಿ ನಡುವೆಯೂ ಜನವರಿ 6ರ ವರೆಗೆ ಭಾರೀ ಮಳೆ ಮುನ್ಸೂಚನೆ
Weather Forecast: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಸಿವೆ. ಇದೀಗ ರಣಭೀಕರ ಚಳಿ ನಡುವೆಯೂ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ 2025ರ ಜನವರಿ 6ರ ವರೆಗೂ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಲ್ಲಿದೆ ಮಾಹಿತಿ.
ಉತ್ತರ ಭಾರತದಲ್ಲಿ ಇದೀಗ ಚಳಿಯ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಈ ನಡುವೆಯೂ ಈ ಭಾಗದಲ್ಲಿ ಕೆಲವೆಡೆ ಮಳೆಯಾಗುತ್ತಿದೆ. ಇನ್ನು ಭಾರತೀಯ ಹವಾಮಾನ ಇಲಾಖೆಯಿ ಡಿಸೆಂಬರ್ 30 ಮತ್ತು 31ರಂದು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ತೀವ್ರ ಕುಸಿತ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.

ಡಿಸೆಂಬರ್ 29ರಿಂದ 2025ರ ಜನವರಿ 3ರ ವರೆಗೆ ಪಂಜಾಬ್, ರಾಜಸ್ಥಾನ, ಹರಿಯಾಣ ಮತ್ತು ಚಂಡೀಗಢದ ಕೆಲವು ಭಾಗಗಳಲ್ಲಿ ಚಳಿಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಇನ್ನು ಡಿಸೆಂಬರ್ 30 ಮತ್ತು 31ರಂದು ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್‌ನಲ್ಲಿ ಇದೇ ರೀತಿಯ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆ ಮುನ್ಸೂಚನೆ: ಜನವರಿ 1ರಿಂದ 6ರ ವರೆಗೆ ಪಶ್ಚಿಮ ಹಿಮಾಲಯ ಪ್ರದೇಶದ ಹಲವೆಡೆ ಹಿಮದ ಜೊತೆ ಭೀಕರ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಇನ್ನು ಡಿಸೆಂಬರ್ 29ರಿಂದ 31ರ ಅವಧಿಯಲ್ಲಿ ಹಿಮಾಚಲ ಪ್ರದೇಶದ ಪ್ರತ್ಯೇಕ ಭಾಗಗಳಲ್ಲಿ ಹಿಮ ಹೆಚ್ಚಿನ ಪ್ರಮಾಣದಲ್ಲಿ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ದಟ್ಟ ಮಂಜು ಕವಿಯುವ ಮುನ್ಸೂಚನೆ: ಹವಾಮಾನ ಇಲಾಖೆ ಮಾಹಿತಿಯ ಪ್ರಕಾರ, ಡಿಸೆಂಬರ್ 30ರ ವರೆಗೆ ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ರಾಜಸ್ಥಾನದಲ್ಲಿ ತಡರಾತ್ರಿ ಮತ್ತು ಮುಂಜಾನೆ ವೇಳೆ ದಟ್ಟವಾದ ಮಂಜು ಕವಿದಿರಲಿದೆ. ಇದರಿಂದ ವಾಹಾನ ಸವಾರರಿಗೆ ಅಡಚಣೆ ಉಂಟಾಗುವ ಸಾಧ್ಯತೆ ಹೆಚ್ಚಿದೆ ಎಂದು ಮುನ್ಸೂಚನೆ ನೀಡಿದೆ.
ಡಿಸೆಂಬರ್ 31ರವರೆಗೆ ಉತ್ತರ ಪ್ರದೇಶ, ಜಾರ್ಖಂಡ್ ಮತ್ತು ಮಧ್ಯಪ್ರದೇಶದಲ್ಲಿಯೂ ದಟ್ಟ ಮಂಜು ಕವಿಯುವ ಸಾಧ್ಯತೆಯಿದೆ. ಡಿಸೆಂಬರ್ 30ರಿಂದ ಜನವರಿ 2ರ ವರೆಗೆ ಉಪ-ಹಿಮಾಲಯ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರದಲ್ಲಿ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ನವದೆಹಲಿಯ ಹವಾಮಾನದ ವಿವರ: ಕಳೆದ 24 ಗಂಟೆಗಳಲ್ಲಿ ನವದೆಹಲಿಯಲ್ಲಿ ಕನಿಷ್ಠ ತಾಪಮಾನವು 02°C ವರೆಗೆ ಏರಿಕೆಯಾಗಿದೆ. ದೆಹಲಿಯಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 14 ರಿಂದ 15°C ಮತ್ತು 12 ರಿಂದ 14° C ವರೆಗೂ ದಾಖಲಾಗಿದೆ. ಇನ್ನು ಇಂದು (ಡಿಸೆಂಬರ್ 29) ನವದೆಹಲಿಯಲ್ಲಿ ಗಾಳಿಯ ಗುಣಮಟ್ಟ ಅತ್ಯಂತ ಕಳಪೆಯಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶ ನೀಡಿದೆ.












Click it and Unblock the Notifications