Karnataka Weather : ಮೇ 8ರವರೆಗೆ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ!

ಮೇ 8ರವರೆಗೆ ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳಲ್ಲಿ ಬಿರುಗಾಳಿ, ಗುಡುಗು-ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ ಮತ್ತು ಲಕ್ಷದ್ವೀಪ ಪ್ರದೇಶದಲ್ಲಿ 40 ರಿಂದ 55 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಮೇ5 ರಂದು ಕರ್ನಾಟಕದ ದಕ್ಷಿಣ ಒಳನಾಡು ಸೇರಿದಂತೆ ರಾಜಸ್ಥಾನ, ಪಂಜಾಬ್, ಹಿಮಾಲಯ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಸ್ಸಾ, ಅಸ್ಸಾಂ, ಮೇಘಾಲಯ, ಕೊಂಕಣ, ಗೋವಾ, ಮಧ್ಯ ಪ್ರದೇಶ, ಮರಾಠವಾಡ, ಗುಜರಾತ್, ಆಂಧ್ರದ ಕರಾವಳಿ ಪ್ರದೇಶ, ತೆಲಂಗಾಣ, ನಾಗಲ್ಯಾಂಡ್, ಮಣಿಪುರ, ತೆಲಂಗಾಣ, ಕೇರಳ, ಮಾಹೆ, ತಮಿಳುನಾಡು, ಪುದುಚೆರಿ, ಕಾರೈಕಲ್‌, ರಾಯಲಸೀಮಾ ಪ್ರದೇಶದಲ್ಲಿ ಮಿಂಚು ಸಹಿತ ಭಾರಿ ಮಳೆ ಬೀಳುವ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ಮೇ 5ರಂದು 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಬಗ್ಗೆ ಕೂಡ ಹವಾಮಾನ ಇಲಾಖೆ ಸೂಚನೆ ನೀಡಿದೆ.

 Weather Reoprt: Many states in India, Including Karnataka, Will Receive Heavy Rain Until May 8th

ಮೇ 6ರಂದು ಮಳೆ ಮತ್ತು ಗಾಳಿಯ ಪ್ರಮಾಣ ಮತ್ತಷ್ಟು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಮ್ಮು ಮತ್ತಯ ಕಾಶ್ಮೀರ, ಗಿಲ್ಗಿಟ್, ಬಲ್ತಿಸ್ತಾನ್, ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ, ಉತ್ತರಾಖಂಡ, ಅಂಡಮಾನ್ & ನಿಕೋಬಾರ್, ಕೇರಳ ಮತ್ತು ಮಾಹೆ, ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರವಾಳಿ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ ಎಂದು ಹೇಳಿದ್ದು, 30 ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತದೆ ಎಂದು ತಿಳಿಸಿದೆ. ಈಶಾನ್ಯ ಬಂಗಾಳಕೊಲ್ಲಿ ಪ್ರದೇಶದಲ್ಲಿ 40 ರಿಂದ 45 ಕಿಲೋ ಮೀಟರ್ ಗಾಳಿ ಬೀಸುವ ಮುನ್ಸೂಚನೆ ಇದ್ದು ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಮೇ 7ರಂದು ಕರ್ನಾಟಕದ ದಕ್ಷಿಣ ಒಳನಾಡು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರಿ ಗುಡುಗು-ಮಿಂಚು ಮತ್ತು 40-50 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವ ಬಗ್ಗೆ ಕೂಡ ಮುನ್ಸೂಚನೆ ನೀಡಿದೆ. ಪಂಜಾಬ್, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ತಮಿಳುನಾಡು, ಪುದುಚೆರಿ, ರಾಯಲಸೀಮಾ, ಉತ್ತರ ಪ್ರದೇಶದಲ್ಲಿ ಕೂಡ ಮಳೆಯಾಗಲಿದೆ ಎಂದು ಹೇಳಿದೆ. ಈಶಾನ್ಯ ಬಂಗಾಳಕೊಲ್ಲಿ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ಪ್ರದೇಶದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಮೇ 8ರಂದು ಅಂಡಮಾನ, ನಿಕೋಬಾರ್, ಕರ್ನಾಟಕದ ಕೆಲವು ಪ್ರದೇಶ, ಕೇರಳ ಮತ್ತು ಮಾಹೆಗಳಲ್ಲಿ ವ್ಯಾಪಕ ಮಳೆಯಾಗುತ್ತದೆ ಎಂದು ಮುನ್ಸೂಚನೆ ನೀಡಿದೆ. 50 ರಿಂದ 60 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರದ ಪ್ರದೇಶಗಳಲ್ಲಿ ಇದು 70 ಕಿಲೋಮೀಟರ್ ಗೆ ಹೆಚ್ಚಾಗಲಿದೆ, ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+