Weather Report: ದೇಶದ ಈ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯೋ.. ಮಳೆ..

Weather Report: ದೇಶದ ಬಹುತೇಕ ಭಾಗಗಳಲ್ಲಿ ಇದೀಗ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದರ ನಡುವೆಯೂ ಕೆಲವೆಡೆ ಮಾತ್ರ ಮಳೆರಾಯ ದರ್ಶನ ಕೊಡುತ್ತಿದ್ದಾನೆ. ಹಾಗೆಯೇ ಇಂದಿನಿಂದ ಎರಡು ದಿನಗಳ ಕಾಲ ಹಲವು ಭಾಗಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮುಂದಿನ 2 ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್ ಮತ್ತು ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹಲವೆಡೆ ಗುಡುಗು, ಮಿಂಚು ಸಹಿತ ವ್ಯಾಪಕ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Weather Report Heavy rain alert for next two days in this parts of india

ಅಷ್ಟೇ ಅಲ್ಲದೆ ಹಿಮಾಚಲ ಪ್ರದೇಶ, ಪಂಜಾಬ್, ಹರಿಯಾಣ, ಚಂಡೀಗಢ, ಅರುಣಾಚಲ ಪ್ರದೇಶ, ಉತ್ತರಾಖಂಡದಲ್ಲೂ ಆಲಿಕಲ್ಲು ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಇನ್ನು ಅಸ್ಸಾಂ, ಮೇಘಾಲಯದಲ್ಲಿ ಮಾರ್ಚ್ 31ರಿಂದ ಏಪ್ರಿಲ್ 1ರವರೆಗೆ ಅಬ್ಬರದ ಮಳೆ ಸುರಿಯುವ ಸಾಧ್ಯತೆಯಿದೆ. ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಏಪ್ರಿಲ್ 1ರಂದು ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ ಅಂತಾ ಹವಾಮಾನ ಇಲಾಖೆ ತಿಳಿಸಿದೆ.

ನವದೆಹಲಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪುವ ಸಾಧ್ಯತೆ ಇದೆ. ಇಲ್ಲಿ ತಾಪಾಮಾನ ಪ್ರಮಾಣ ಹೆಚ್ಚಾಗುತ್ತಲೇ ಇದೆ. ಮತ್ತೊಂದೆಡೆ ಒಡಿಶಾದಲ್ಲಿ ಮುಂದಿನ ಕೆಲವು ದಿನಗಳವರೆಗೆ ಬಿಸಿಗಾಳಿ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ವಿಶೇಷವಾಗಿ ಮಧ್ಯ ಮತ್ತು ವಾಯುವ್ಯ ಭಾರತದಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಸಾಮಾನ್ಯ ದಿನಗಳಿಗಿಂತ ಹೆಚ್ಚಿನ ಬಿಸಿಗಾಳಿ ದಾಖಲಾಗುವ ಎಚ್ಚರಿಕೆ ಸಂದೇಶವನ್ನು ರವಾಸಿದೆ.

ಮಧ್ಯಪ್ರದೇಶ, ಕರ್ನಾಟಕದ ಹಲವೆಡೆ, ರಾಯಲಸೀಮಾ ಮತ್ತು ತೆಲಂಗಾಣದ ಪ್ರತ್ಯೇಕ ಪ್ರದೇಶಗಳಲ್ಲಿ ತಾಪಮಾನದಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆಯಿದೆ. ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದ ಪ್ರತ್ಯೇಕ ಭಾಗಗಳಲ್ಲಿಯೂ ತಾಪಮಾನದಲ್ಲಿ ಏರಿಕೆಯಾಗಲಿದೆ ಎಂದು ತಿಳಿಸಿದೆ.

ಸ್ಕೈಮೆಟ್ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಪಶ್ಚಿಮ ಹಿಮಾಲಯದಲ್ಲಿ ಸಾಧಾರಣ ಮಳೆಯಾಗಲಿದೆ. ಇನ್ನು ಮುಂದಿನ 2 ದಿನಗಳಲ್ಲಿ ಸಿಕ್ಕಿಂ ಮತ್ತು ಅರುಣಾಚಲ ಪ್ರದೇಶ, ಉತ್ತರ ಪಂಜಾಬ್, ಹರಿಯಾಣ, ಮಧ್ಯಪ್ರದೇಶ, ಛತ್ತೀಸ್‌ಗಢ, ಕೇರಳದಲ್ಲಿ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+