Weather Report: ಈ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ
Weather Report: ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಲಿನ ಧಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇನ್ನು ಕೆಲವೇ ಕಲವು ಕಡೆಗಳಲ್ಲಿ ಮಾತ್ರ ಮೋಡ ಮುಚ್ಚಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಮಂಜಿನ ಹಂನಿಯಂತೆ ಮಳೆಯಾಗುತ್ತಿದೆ. ಹಾಗೆಯೇ ಮುಂದಿನ ಎರಡು ದಿನಗಳ ಕಾಲ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ. ಹಾಗಾದರೆ ಎಲ್ಲೆಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮಾರ್ಚ್ 20ರವರೆಗೆ ಮಳೆ: ಭಾರತ ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮಾರ್ಚ್ 20ರವರೆಗೆ ಗುಡುಗು, ಮಿಂಚು, ಆಲಿಕಲ್ಲು ಸಹಿತ ಮಳೆಯಾಗಲಿದೆ. ಬಳಿ ಲಘುವಾಗಿ ಸಾಧಾರಭ ಮಳೆಯಾಗುವ ಮುನ್ಸೂಚನೆ ಇದೆ. ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ, ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್-ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಮಾರ್ಚ್ 21ರವರೆಗೆ ಸಾಧರಣ ಮಳೆ: ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 21ರವರೆಗೆ ಸಾಧರಣ ಮಳೆಯಾಗಲಿದೆ. ಮಾರ್ಚ್ 20ರಂದು ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ, ಮಾರ್ಚ್ 21ರಂದು ಬಿಹಾರದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಾರ್ಚ್ 19ರಂದು ಪೂರ್ವ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ, ಜಾರ್ಖಂಡ್ ಮತ್ತು ಒಡಿಶಾದಲ್ಲಿ ಪ್ರತ್ಯೇಕವಾದ ಸ್ಥಳಗಳಲ್ಲಿ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇನ್ನು ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ 23ರಂದು ಗುಡುಗು, ಮಿಂಚು ಸಹಿತ ಲಘುವಾಗಿ ಸಾಧಾರಭ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.
ತೆಲಂಗಾಣದಲ್ಲಿ ಭಾರೀ ಮಳೆ ಮುನ್ಸೂಚನೆ: ಮಾರ್ಚ್ 21ರವರೆಗೆ ತೆಲಂಗಾಣದಲ್ಲಿ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂನಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ದಕ್ಷಿಣ ಭಾರತದ ಹಲವು ಕರ್ನಾಟಕ ಸೇರಿದಂತೆ ಹಲವು ಭಾಗಗಳಲ್ಲಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸಿಹಿಸುದ್ದಿಯನ್ನು ನೀಡಿದೆ.
ಹವಾಮಾನ ಇಲಾಖೆ ಹಿಗೆ ಭವಿಷ್ಯ ನುಡಿಯುತ್ತಲಿದ್ದು, ಕರ್ನಾಟಕದಲ್ಲಿ ಇದೀಗ ಹೇಳಿರುವ ಈ ಭವಿಷ್ಯವಾದ್ರೂ ಮಾರ್ಚ್‌ನಲ್ಲಿ ಭಾರೀ ಮಳೆ ಸುರಿಯುವ ಮೂಲಕ ನಿಜವಾಗಲಿದ್ಯಾ ಎಂದು ಕಾದುನೋಡಬೇಕಿದೆ.












Click it and Unblock the Notifications