Weather Forecast: ಈ ಭಾಗಗಳಲ್ಲಿ ಒಂದು ವಾರ ಭಾರೀ ಮಳೆ ಮುನ್ಸೂಚನೆ-ಎಲ್ಲೆಲ್ಲಿ?

Weather Report: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಆರ್ಭಟದಿಂದ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿದೆ. ಇನ್ನು ಇದೀಗ ಚಳಿಗಾಲ ಆರಂಭವಾಗಿದ್ದು, ಇದರ ನಡುವೆಯೇ ಹಲವು ರಾಜ್ಯಗಳಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ. ಹಾಗೆಯೇ ಮುಂದಿನ ಒಂದು ವಾರ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ದೇಶದ ಹಲವೆಡೆ ಮಂಜು ಕವಿದ ವಾತಾವರಣ ನಿರ್ಮಾಣವಾಗಲಿದೆ. ಇನ್ನು ಕೆಲವೆಡೆ ಮಾತ್ರ ಮಳೆಯಾಗವ ಸಾಧ್ಯತೆಯಿದೆ. ಇಂದು (ನವೆಂಬರ್ 21) ಕೇರಳ, ತಮಿಳುನಾಡಿನ ಕಾರೈಕಲ್, ಪುದುಚೇರಿಯಲ್ಲಿ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Weather Report Heavy rainfall forecast in these states for Next one week from November 21

ನವೆಂಬರ್ 21 ಮತ್ತು ನವೆಂಬರ್ 22ರಂದು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಾದ್ಯಂತ ಇದೇ ರೀತಿಯ ಹವಾಮಾನವು ಇರಲಿದೆ. ಇನ್ನು ಈ ವಾರವಿಡೀ ಮೇಘಾಲಯ ಮತ್ತು ಅಸ್ಸಾಂನಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಮಿಳುನಾಡಿನ ಕಾರೈಕಲ್ ಮತ್ತು ಪುದುಚೇರಿಯಲ್ಲಿ ನವೆಂಬರ್ 21ರಿಂದ 26ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 26ರಂದು ಕರಾವಳಿ ಆಂಧ್ರ ಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ. ನಿಕೋಬಾರ್ ದ್ವೀಪಗಳು, ಕೇರಳದ ಹಲವೆಡೆ ನವೆಂಬರ್ 21ರಿಂದ 26ರ ವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಎಲ್ಲೆಲ್ಲಿ ಚಳಿ ಹೆಚ್ಚಿರಲಿದೆ?: ನವೆಂಬರ್ 21 ಬೆಳಗ್ಗೆ ಮತ್ತು ಸಂಜೆ ವೇಳೆಗೆ ಪೂರ್ವ ಉತ್ತರ ಪ್ರದೇಶದಲ್ಲಿ ದಟ್ಟವಾದ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ. ನವೆಂಬರ್ 22ರಿಂದ 22ರ ವರೆಗೂ ಪಂಜಾಬ್, ಹರಿಯಾಣ ಮತ್ತು ಚಂಡೀಗಢಗಳಲ್ಲಿ ದಟ್ಟವಾದ ಮಂಜಿನ ಜೊತೆ ಚಳಿಯ ವಾತಾವರಣ ಇರಲಿದೆ. ನವೆಂಬರ್ 23ರಿಂದ 25ರ ವರೆಗೆ ಹಿಮಾಚಲ ಪ್ರದೇಶದಲ್ಲಿಯೂ ಇದೇ ರೀತಿಯ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನವದೆಹಲಿಯ ಹವಾಮಾನದ ವಿವರ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈಗಾಗಲೇ ದಟ್ಟವಾದ ಮಂಜಿನ ಜೊತೆಗೆ ಗಾಳಿಯ ಗುಣಮಟ್ಟ ಹದಗೆಡುತ್ತಿದೆ. ಅಲ್ಲದೆ, ಮುಂದಿನ ದಿನಗಳಲ್ಲಿ ಗಾಳಿಯ ಗುಣಮಟ್ಟ ಮತ್ತಷ್ಟು ಹದಗೆಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಜಿನ ಜೊತೆಗೆ ತೀವ್ರ ಚಳಿ ಇರಲಿದ್ದು, ಇದರಿಂದ ಇಲ್ಲಿನ ಜನರು ಬೆಳಗ್ಗೆ 10 ಗಂಟೆಯಾದರೂ ಮನೆಯಿಂದ ಹೊರಬರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ದಟ್ಟವಾಗಿ ಮಂಜು ಕವಿದ ವಾತಾವರಣ ಇರಲಿದ್ದು, ಇದರಿಂದ ಹೆಚ್ಚಾಗಿ ವಾಹನ ಸವಾರರ ಮೇಲೆ ಹೆಚ್ಚಿನ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ತಾಪಮಾನ ವಿಚಾರಕ್ಕೆ ಬಂದರೆ, ಬಿಹಾರ, ಪಶ್ಚಿಮ ಬಂಗಾಳ, ಸಿಕ್ಕಿಂ, ಜಮ್ಮು ಮತ್ತು ಕಾಶ್ಮೀರ ಮತ್ತು ಈಶಾನ್ಯ ರಾಜ್ಯಗಳಂತಹ ಕೆಲವು ರಾಜ್ಯಗಳಲ್ಲಿ 2-5 ಡಿಗ್ರಿ ಸೆಲ್ಸಿಯಸ್‌ವರೆಗಿನ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+