Weather Report: ಈ ಭಾಗಗಳಲ್ಲಿ ಚಳಿಯ ನಡುವೆಯೂ ಭಾರೀ ಮಳೆ ಮುನ್ಸೂಚನೆ

Weather Report: ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಮುಂಗಾರು ಮಳೆ ಆರ್ಭಟಿಸಿದ ಪರಿಣಾಮ ದೊಡ್ಡ ದೊಡ್ಡ ಅವಾಂತರಗಳೇ ಸೃಷ್ಟಿಯಾಗಿವೆ. ಇನ್ನು ಇದೀಗ ಚಳಿಯ ನಡುವೆಯೂ ಹಲವೆಡ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಇಂದು (ನವೆಂಬರ್ 18) ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವಚ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಮುಂದಿನ ಐದು ದಿನಗಳಲ್ಲಿ ವಾಯುವ್ಯ ಭಾರತದ ಬಹುತೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರ ಸೆಲ್ಸಿಯನ್ಸ್‌ನಷ್ಟು ಕುಸಿಯುವ ಸಾಧ್ಯತೆಯಿದೆ.
ಪಂಜಾಬ್, ಹರಿಯಾಣ, ಉತ್ತರ ರಾಜಸ್ಥಾನ, ಉತ್ತರ ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ಹಲವು ಭಾಗಗಳಲ್ಲಿ ತಪಮಾನ ಪ್ರಮಾಣದಲ್ಲಿ ಕುಸಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Weather Report Heavy rainfall forecast in these states on November 18 IMD

ಇನ್ನು ಈ ರಾಜ್ಯಗಳಲ್ಲಿ ಮುಂದಿನ ಎರಡು ದಿನಗಳವರೆಗೆ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ದಟ್ಟವಾದ ಮಂಜಿನ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ. ಅದರಲ್ಲೂ ಹಿಮಾಚಲ ಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಮುಂದಿನ 5 ದಿನ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಎಲ್ಲೆಲ್ಲಿ ಮಳೆ?: ನವೆಂಬರ್ 18ರಂದು ತಮಿಳುನಾಡಿನ ಪುದುಚೇರಿ, ಕಾರೈಕಲ್, ಕೇರಳದಲ್ಲಿ ಚಳಿಯ ನಡುವೆಯೂ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪ್ರತ್ಯೇಕ ಸ್ಥಳಗಳಲ್ಲಿ ಈ ವಾರ ಪೂರ್ತಿ ಸಾಧಾರಭ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ತಾಪಮಾನದಲ್ಲಿ ಕುಸಿತ: ಮಧ್ಯ ಭಾರತದಲ್ಲಿ ಮುಂದಿನ ಮೂರು ದಿನಗಳವರೆಗೆ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ. ಬಳಿಕ 2-3 ಡಿಗ್ರಿ ಸೆಲ್ಸಿಯಸ್ ಇಳಿಯುವ ಸಾಧ್ಯತೆ ಹೆಚ್ಚಿದೆ. ಮಹಾರಾಷ್ಟ್ರದಲ್ಲಿ ಮುಂದಿನ 5 ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ 2-4 ಗ್ರಿ ಸೆಲ್ಸಿಯಸ್ ಕುಸಿಯುವ ಸಾಧ್ಯತೆಯಿದೆ. ಆದರೆ ಗುಜರಾತ್‌ನಲ್ಲಿ ಮುಂದಿನ ಎರಡು ದಿನಗಳವರೆಗೂ ಕನಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ. ಬಳಿಕ ಇಳಿಕೆಯಾಗಲಿದೆ ಎಂದು ತಿಳಿಸಿದೆ.

ನವದೆಹಲಿಯ ಹವಾಮಾನ: ನವದೆಹಲಿಯಲ್ಲಿ ದಿನದಿಂದ ದಿನಕ್ಕೆ ಮಂಜಿನ ಜೊತೆಗೆ ಗಾಳಿಯ ಗುಣಮಟ್ಟವು ಕೂಡ ಹದಗೆಡುತ್ತಲೇ ಇದೆ. ಇನ್ನು ಇಂದು (ನವೆಂಬರ್ 18) ನವದೆಹಲಿಯಲ್ಲಿ ಗಾಳಿಯ ಗುಣಮಟ್ಟವು ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ. ಅಲ್ಲದೆ ರಾಜ್ಯದಲ್ಲಿ ಸಂಜೆ ವೇಳೆಗೆ ಮಂಜಿನ ಜೊತೆಗೆ ರಣಭೀಕರ ಚಳಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ನಿನ್ನೆ ನವದೆಹಲಿಯಲ್ಲಿ ಕನಿಷ್ಠ ತಾಪಮಾನ 16.2 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 3.9 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗಿದೆ. ಇನ್ನು ಇಂದು ಗರಿಷ್ಠ ತಾಪಮಾನ ಸುಮಾರು 27 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ. ಇದರ ನಡುವೆಯೂ ದಿನವಿಡೀ ತುಂಬಾ ದಟ್ಟವಾದ ಮಂಜು ಕವಿದ ವಾತಾವರಣ ಇರಲುದೆ ಎಂದು ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+