Weather Report: ನವೆಂಬರ್‌ 13ರ ವರೆಗೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಮುನ್ಸೂಚನೆ

Weather Report: ಈಗಾಗಲೇ ದೇಶಾದ್ಯಂತ ಮುಂಗಾರು ಮಳೆ ಆರ್ಭಟಿಸಿ ಬಹುತೇಕ ರಾಜ್ಯಗಳಲ್ಲಿ ದೊಡ್ಡ ದೊಡ್ಡ ಅವಾಂತರಗಳನ್ನೇ ಸೃಷ್ಟಿಸಿದ್ದಾನೆ. ಇದೀಗ ಮತ್ತೆ ಕೆಲವೇ ರಾಜ್ಯಗಳಲ್ಲಿ ಮಾತ್ರ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ನವೆಂಬರ್‌ 13ರ ವರೆಗೆ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ನವೆಂಬರ್ 11ರ ವರೆಗೆ ತಮಿಳುನಾಡು ಮತ್ತು ಕೇರಳದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ಅದರಲ್ಲೂ ಪುದುಚೇರಿ, ಮಾಹೆ ಮತ್ತು ಕಾರೈಕಲ್‌ನಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಈ ಭಾಗಗಳಿಗೆ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ.

Weather Report Heavy rainfall forecast in these states till November 13 IMD

ಇದರ ನಡುವೆಯೂ ತಮಿಳುನಾಡಿನ ಕಾರೈಕಲ್ ಮತ್ತು ಪುದುಚೇರಿಯಲ್ಲಿ ನವೆಂಬರ್ 13ರವರೆಗೆ ಮತ್ತು ನವೆಂಬರ್ 8, 12 ಮತ್ತು 13ರ ವರೆಗೆ ಕೇರಳದಲ್ಲಿ ಪ್ರತೇಕವಾಗಿ ಅಲ್ಲಲ್ಲಿ ಭಾರೀ ಮಳೆ ಮುಂದುರೆಯುವ ಸಾಧ್ಯತೆಯಿದೆ. ಇನ್ನು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಂಕಿಅಂಶಗಳ ಪ್ರಕಾರ, ನಡೆಯುತ್ತಿರುವ ಛತ್ ಪೂಜೆ ಆಚರಣೆಯ ಸಮಯದಲ್ಲಿ ನವದೆಹಲಿಯಲ್ಲಿ ಮಾಲಿನ್ಯವು ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ವಾಯುವ ಮಾಲಿನ್ಯ ಹೆಚ್ಚಳ: ಅಶೋಕ್ ವಿಹಾರ್, ಬವಾನಾ, ಮುಂಡ್ಕಾ, ಆನಂದ್ ವಿಹಾರ್, ಜಹಾಂಗೀರ್ಪುರಿ, ರೋಹಿಣಿ, ಓಖ್ಲಾ ಹಂತ 2, ರೋಹಿಣಿ, ಸೋನಿಯಾ ವಿಹಾರ್, ಪತ್ಪರ್ಗಂಜ್ ಸೇರಿದಂತೆ ಮುಂತಾದ ಸ್ಥಳಗಳಲ್ಲಿ ಹೆಚ್ಚು ವಾಯು ಮಾಲಿನ್ಯ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನ ಎಲ್ಲೆಲ್ಲಿ ಹೆಚ್ಚಳ: ಹವಾಮಾನ ಇಲಾಖೆ ಪ್ರಕಾರ, ಪಶ್ಚಿಮ ರಾಜಸ್ಥಾನದ ಹಲವಾರು ಭಾಗಗಳಲ್ಲಿ ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗಿದೆ. ಮತ್ತೊಂದೆಡೆ ಉತ್ತರ ಪ್ರದೇಶ, ಬಿಹಾರ, ಜಮ್ಮು-ಕಾಶ್ಮೀರ, ಗಿಲ್ಗಿಟ್, ಪಂಜಾಬ್, ಹರಿಯಾಣ, ಗುಜರಾತ್, ಬಾಲ್ಟಿಸ್ತಾನ್, ಮುಜಫರಾಬಾದ್, ಹರಿಯಾಣ, ಉತ್ತರಾಖಂಡ ಮತ್ತು ಲಡಾಖ್‌ನಂತಹ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸರಾಸರಿ 4.5 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾಗಿದೆ ಎಂದು ತಿಳಿಸಿದೆ.

ನವದೆಹಲಿ ಹವಾಮಾನದ ವಿವರ: ರಾಷ್ಟ್ರೀಯ ರಾಜಧಾನಿಯಲ್ಲಿ ಇಂದು (ನವೆಂಬರ್ 08) ಬೆಳ್ಳಂಬೆಳಗ್ಗೆ ಮಂಜು ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಇನ್ನು ಮಧ್ಯಾಹ್ನದ ವೇಳಗೆ ಇಲ್ಲಿ ತಾಪಾಮನ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆಯಿದೆ. ಮತ್ತೆ ಸಂಜೆ ವೇಳೆಗೆ ಮಂಜು ಮುಸುಕಿದ ವಾತಾವರಣ ಇರಲಿದ್ದು, ರಾತ್ರಿ ವೇಳೆಗೆ ಗಾಳಿಯ ಗುಣಮಟ್ಟ ಕಳಪಡೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+