Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್‌ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?

Weather Report: ದೇಶದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆದಿದೆ. ಹಾಗೆಯೇ ಏಪ್ರಿಲ್‌ 3ರವರೆಗೆ ಈ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಮಾರ್ಚ್ 29 ಮತ್ತು 30ರಂದು ಪಶ್ಚಿಮ ಹಿಮಾಲಯ ಪ್ರದೇಶದ ಪ್ರತ್ಯೇಕವಾಗಿ ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಮಾರ್ಚ್ 29 ರಿಂದ 31 ರವರೆಗೆ ವಾಯುವ್ಯ ಮತ್ತು ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಸಾಧರಾಣ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

Weather Report Heavy rainfall forecast in this parts of india till April 3 2024

ಚಂಡಮಾರುತದ ಪರಿಣಾಮದಿಂದಾಗಿ, ಬಿಹಾರದ, ದಕ್ಷಿಣ ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಚದುರಿದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡದೆ.

ಅಲ್ಲದೆ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಸಿಕ್ಕಿಂನಲ್ಲಿ ಮಾರ್ಚ್ 30ರಿಂದ ಏಪ್ರಿಲ್ 3ರವರೆಗೆ ಆರ್ದ್ರ ವಾತಾವರಣವನ್ನು ನಿರೀಕ್ಷಿಸಲಾಗಿದೆ. ಬಿಹಾರ ಮತ್ತು ಜಾರ್ಖಂಡ್‌ಗಳು ಮುಂದಿನ ಕೆಲವು ದಿನಗಳವರೆಗೆ ಪ್ರತ್ಯೇಕವಾದ ಮಧ್ಯಮ ಮಳೆಯನ್ನು ಪಡೆಯುತ್ತವೆ. ಮಾರ್ಚ್ 31ರಂದು ಹಿಮಾಲಯ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ವ್ಯಾಪಕವಾದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಮುಂದಿನ ಕೆಲವು ದಿನಗಳವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪ್ರತ್ಯೇಕ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ, ಅರುಣಾಚಲ ಪ್ರದೇಶದದಲ್ಲಿ ಏಪ್ರಿಲ್ 1ರಂದು ಅಲ್ಲಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ನವದೆಹಲಿಯ ತಾಪಮಾನದ ವರದಿ: IMD ಪ್ರಕಾರ, ರಾಷ್ಟ್ರೀಯ ರಾಜಧಾನಿ ನವದೆಹಲಿಯಲ್ಲಿ ಗುರುವಾರ (ಮಾರ್ಚ್‌ 28) ಕನಿಷ್ಠ ತಾಪಮಾನ 21.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+