Weather Report: ಮಾರ್ಚ್‌ 28ರವರೆಗೂ ದೇಶದ ಈ ಭಾಗಗಳಲ್ಲಿ ಭಾರೀ ಮಳೆ ಮುನ್ಸೂಚನೆ

Weather Report: ದೇಶದ ಬಹುತೇಕ ರಾಜ್ಯಗಳಲ್ಲಿ ಬಿಸಿಲಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲಿದೆ. ಮತ್ತೊಂದೆಡೆ ಕೆಲವೇ ಕೆಲವು ರಾಜ್ಯಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಹಾಗೆಯೇ ಮಾರ್ಚ್‌ 28ರವರೆಗೂ ಹಲವು ರಾಜ್ಯಗಳಲ್ಲಿ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಎಲ್ಲೆಲ್ಲಿ ಮಳೆ ಮುನ್ಸೂಚನೆ?: ಚಂಡಮಾರುತದ ಪರಿಣಾಮ, ಈಶಾನ್ಯ ಅಸ್ಸಾಂ ಸೇರಿದಂತೆ ಅದರ ಅಕ್ಕಪಕ್ಕದ ರಾಜ್ಯದಗಳಲ್ಲಿ ಉಷ್ಣಾಂಶದ ಪ್ರಮಾಣ ಕಡಿಮೆಯಾಗಿದೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 26ರ ವರೆಗೆ ಪ್ರತ್ಯೇಕವಾಗಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

Weather Report Heavy rainfall forecast in this parts of india till March 28

ಮಾರ್ಚ್ 23, 25, 26ರಂದು ಅರುಣಾಚಲ ಪ್ರದೇಶದಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಇದೇ ವೇಲೆ ಸಿಕ್ಕಿಂ ಅಸ್ಸಾಂ ಮತ್ತು ಮೇಘಾಲಯದಲ್ಲಿ ಪ್ರತ್ಯೇಕವಾಗಿ ಅಲ್ಲಲಿ ಭಾರೀ ಮಳೆಯಾಗುತ್ತದೆ. ಇದಲ್ಲದೆ, ಮಾರ್ಚ್ 23 ಮತ್ತು 24ರಂದು ಬಿಹಾರದಲ್ಲಿ ಗುಡುಗು, ಮಿಂಚು ಸಹಿತ ಚದುರಿದ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಮಾರ್ಚ್ 28 ರವರೆಗೆ ಮಳೆ: ಮಾರ್ಚ್‌ 26ರಂದು ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು-ಕಾಶ್ಮೀರ-ಲಡಾಖ್-ಗಿಲ್ಗಿಟ್ ಬಾಲ್ಟಿಸ್ತಾನ್-ಮುಜಫರಾಬಾದ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗುಡುಗು, ಮಿಂಚು ಸಹಿತ ಅಲ್ಲಲ್ಲಿ ಚದುರಿದ ಲಘು ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಮಾರ್ಚ್ 26, 27 ಮತ್ತು 28ರಂದು ಜಮ್ಮು-ಕಾಶ್ಮೀರ-ಲಡಾಖ್-ಗಿಲ್ಗಿಟ್ ಬಾಲ್ಟಿಸ್ತಾನ್-ಮುಜಾಫರಾಬಾದ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚದುರಿದ ಲಘು ಮಳೆ ತೀವ್ರಗೊಳ್ಳುವ ನಿರೀಕ್ಷೆಯಿದೆ.

ಉತ್ತರಾಖಂಡದಲ್ಲಿ ಇಂದಿನಿಂದ ಮಾರ್ಚ್ 28 ರವರೆಗೆ ಪ್ರತ್ಯೇಕವಾದ ಲಘು ಮಳೆಯಾಗುವ ನಿರೀಕ್ಷೆಯಿದೆ. ಇನ್ನು ಪಂಜಾಬ್, ಹರಿಯಾಣ ಮತ್ತು ಉತ್ತರ ರಾಜಸ್ಥಾನಗಳು ಮಾರ್ಚ್ 2024ರಲ್ಲಿ ವಿವಿಧ ದಿನಾಂಕಗಳಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಸಹಿತ ಪ್ರತ್ಯೇಕವಾದ ಲಘು ಮಳೆಯನ್ನು ಎದುರಿಸಬಹುದು.

ಮಾರ್ಚ್ 22ರಿಂದ ಮಾರ್ಚ್ 26ರ ಅವಧಿಯಲ್ಲಿ ಸೌರಾಷ್ಟ್ರ ಮತ್ತು ಕಚ್‌ನ ಪ್ರತ್ಯೇಕ ಪ್ರದೇಶಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿಗಳು ಸಂಭವಿಸುವ ನಿರೀಕ್ಷೆಯಿದೆ ಎಂದು IMD ಹೇಳಿದೆ.

ತಾಪಮಾನ ದಾಖಲೆಯ ವಿವರ: ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು ಪ್ರಸ್ತುತ ಸಾಮಾನ್ಯಕ್ಕಿಂತ 8-10°C ಕಡಿಮೆಯಾಗಿದೆ, ಪೂರ್ವ ಉತ್ತರ ಪ್ರದೇಶ, ಬಿಹಾರ, ಉತ್ತರ ಒಡಿಶಾ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್ , ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 4-8°C ಕಡಿಮೆಯಾಗಿದೆ ಎಂದು ತಿಳಿಸಿದೆ.

ಜಮ್ಮು-ಕಾಶ್ಮೀರ, ಲಡಾಖಖ್‌, ಗಿಲ್ಗಿಟ್‌, ಬಾಲ್ಟಿಸ್ತಾನ್‌, ಮುಜಫರಾಬಾದ್, ಹಿಮಾಚಲ ಪ್ರದೇಶ, ಪಶ್ಚಿಮ ರಾಜಸ್ಥಾನ, ಸೌರಾಷ್ಟ್ರ, ಕಚ್, ಕೊಂಕಣ ಮತ್ತು ಗೋವಾದಂತಹ ಪ್ರದೇಶಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಲಿದೆ. ಇನ್ನು ಮುಂದಿನ 4-5 ದಿನಗಳಲ್ಲಿ ಪೂರ್ವ ಭಾರತವು 4-6°C, ಮಧ್ಯ ಭಾರತದಲ್ಲಿ 2-4 °C ಮತ್ತು ವಾಯುವ್ಯ ಭಾರತದಲ್ಲಿ 2-4 °C ತಾಪಮಾನದಲ್ಲಿ ಕ್ರಮೇಣ ಏರಿಕೆಯಾಗಲಿದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+