Weather Report: ಮುಂದಿನ 7 ದಿನಗಳಲ್ಲಿ ಈ ಭಾಗಗಳಲ್ಲಿ ಆರ್ಭಟಿಸಲಿದ್ದಾನೆ ಮಳೆರಾಯ, ಎಲ್ಲೆಲ್ಲಿ ತಾಪಮಾನ ಏರಿಕೆ?
Weather Report: ದೇಶದ ಬಹುತೇಕ ಭಾಗಗಳಲ್ಲಿ ಮಳೆಯಿಲ್ಲದೆ ತಾಪಮಾನದ ಪ್ರಮಾಣ ಏರಿಕೆಯಾಗುತ್ತಲೇ ಇದ್ದು, ಬಿಲಿನ ಝಳಕ್ಕೆ ತಾಳಲಾರದೇ ಜನರು ಬೇಸತ್ತು ಬೆಂದು ಬೆವರಿಳಿಸುವಂತಾಗಿದೆ. ಮತ್ತೊಂದೆಡೆ ಭಾರತೀಯ ಹವಾಮಾನ ಇಲಾಖೆ ಮುಂದಿನ ಏಳು ದಿನಗಳಲ್ಲಿ ದೇಶದ ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ಹಾಗಾದರೆ ಇಂದು ಹಾಗೂ ಮುಂದಿನ ದಿನಗಳಲ್ಲಿ ಯಾವೆಲ್ಲ ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ದೇಶದ ಕೆಲವು ರಾಜ್ಯಗಳಲ್ಲಿ ಬಿಸಿಗಾಳಿ ಪರಿಸ್ಥಿತಿಗಳು ಕಂಡುಬರುತ್ತಿದ್ದು, ಈಶಾನ್ಯ ಭಾರತದ ರಾಜ್ಯಗಳಲ್ಲಿ ಮಳೆ ಚಟುವಟಿಕೆಗಳು ಮುಂದುವರೆದಿದೆ. ಅಲ್ಲದೆ ಮುಂದಿನ ಏಳು ದಿನಗಳಲ್ಲಿ ಉತ್ತರ ಭಾರತದ ಗುಡ್ಡಗಾಡು ಪ್ರದೇಶಗಳಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಇಂದು (ಏಪ್ರಿಲ್ 06) ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ, ರಾಜಸ್ಥಾನದ ಕೆಲವು ಪ್ರದೇಶಗಳಲ್ಲಿ ಮಳೆ ಸುರಿಯಲಿದೆ. ದೇಶದ ರಾಜಧಾನಿ ನವದೆಹಲಿಯಲ್ಲಿ ಇಂದು ಕನಿಷ್ಠ ತಾಪಮಾನ 19 ಡಿಗ್ರಿ ಮತ್ತು ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯೆತೆಯಿದೆ. ಅಲ್ಲದೆ ಜೊತೆಗೆ ಇಲ್ಲಿ ಹಗಲಿನ ವೇಳೆ ಬಿರುಗಾಳಿ ಬೀಸುವ ಸಾಧ್ಯತೆಯೂ ಹೆಚ್ಚಿದೆ. ಇನ್ನು ಏಪ್ರಿಲ್ 7ರಂದು ಗಾಳಿಯ ಪ್ರಮಾಣ ಮತ್ತೆ ಹೆಚ್ಚಾಗಲಿದ್ದು, ತಾಪಮಾನದಲ್ಲಿ ಯಾವುದೇ ಬದಲಾವಣೆ ಕಂಡುಬರುವುದಿಲ್ಲ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಇಂದು (ಏಪ್ರಿಲ್ 06) ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 38 ಡಿಗ್ರಿ ದಾಖಲಾಗಬಹುದು. ಗಾಜಿಯಾಬಾದ್‌ನಲ್ಲಿ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದ್ದು, ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಹವಾಮಾನ ಮುನ್ಸೂಚನೆ ಸಂಸ್ಥೆ ಸ್ಕೈಮೆಟ್ ಪ್ರಕಾರ, ಇಂದು ಪೂರ್ವ ಅಸ್ಸಾಂ ಮತ್ತು ಹಿಮಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಬಹುದು. ಈಶಾನ್ಯ ಭಾರತ ಮತ್ತು ಕೇರಳದ ಉಳಿದ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಗುಜರಾತ್, ಪಶ್ಚಿಮ ಮಧ್ಯಪ್ರದೇಶ ಮತ್ತು ಹರಿಯಾಣದಲ್ಲಿ ಹಗುರದಿಂದ ಅತಿ ಕಡಿಮೆ ಮಳೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ ಇದೇ ಸಮಯದಲ್ಲಿ, ಉತ್ತರ ಕರ್ನಾಟಕ, ಒಡಿಶಾ, ಪಶ್ಚಿಮ ಬಂಗಾಳ, ಜಾರ್ಖಂಡ್, ಕರಾವಳಿ ಆಂಧ್ರಪ್ರದೇಶ, ರಾಯಲಸೀಮಾ, ತೆಲಂಗಾಣದಲ್ಲಿ ತಾಪಮಾನ ಪ್ರಮಾಣ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಅದರಲ್ಲೂ ಕರ್ನಾಟಕದ ಕೆಲವು ಜಿಲ್ಲಗಳಲ್ಲಿ ಮಾತ್ರ ಮಳೆ ಸುರಿಯಲಿದ್ದು, ಇನ್ನುಳಿದ ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎಂದು ತಿಳಿಸಿದೆ.












Click it and Unblock the Notifications