Weather Report: ದೇಶದ ಈ ಭಾಗದಲ್ಲಿ ಡಿಸೆಂಬರ್‌ 11ರವರೆಗೂ ಗಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ನವದೆಹಲಿ, ಡಿಸೆಂಬರ್‌, 08: ಮೈಚಾಂಗ್‌ ಚಂಡಮಾರುತ ಪ್ರಭಾವ ಹಿನ್ನೆಲೆ ದೇಶದ ದಕ್ಷಿಣ ಭಾಗದಲ್ಲಿ ಕೆಲವು ದಿನಗಳಿಂದ ಅಬ್ಬರದ ಮಳೆಯಾಗುತ್ತಿದೆ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶದ ಕೆಲವೆಡೆ ಸುನಾಮಿಯಂತಹ ಮಳೆಯಾಗುತ್ತಿದೆ. ಹಾಗೆಯೇ ಇಂದಿನಿಂದ ಡಿಸೆಂಬರ್ 11ರವರೆಗೂ ಈ ಭಾಗದಲ್ಲಿ ಭಾರೀ ಮಳೆ ಮುಂದುವರೆಯಲಿದ್ದು, ಇನ್ನು ಕೆಲವು ರಾಜ್ಯಗಳಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ತಿಳಿಯಿರಿ.

ಇಂದು (ಡಿಸೆಂಬರ್‌ 08) ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಲಕ್ಷದ್ವೀಪಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಲಕ್ಷದ್ವೀಪದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.

Cyclone michaung: Heavy rainfall forecast till December 11 in these parts of India

ಅಂಡಮಾನ್-ನಿಕೋಬಾರ್ ದ್ವೀಪಗಳು, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ಕರಾವಳಿ ಆಂಧ್ರ ಪ್ರದೇಶ, ತಮಿಳುನಾಡಿಡಿನ ಹಲವೆಡೆ ಗುಡುಗು ಸಹಿತ ಮಳೆಯಾಗಬಹುದು. ಹಾಗೆಯೇ ಕರ್ನಾಟಕದ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯೆತೆಯಿದೆ. ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಪೂರ್ವ ಮಧ್ಯಪ್ರದೇಶ, ಪಶ್ಚಿಮ ಬಿಹಾರ, ಪಶ್ಚಿಮ ಜಾರ್ಖಂಡ್, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್‌ನಲ್ಲಿ ಪ್ರತೇಕ ಭಾಗಗಳಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಶನಿವಾರ (ಡಿಸೆಂಬರ್ 9)ರಂದು ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಲಕ್ಷದ್ವೀಪದಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಅಂಡಮಾನ್-ನಿಕೋಬಾರ್ ದ್ವೀಪಗಳು, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಶ್ಚಿಮ ಬಂಗಾಳ, ಕರಾವಳಿ ಆಂಧ್ರ ಪ್ರದೇಶ ಸೇರಿದಂತೆ ಕರ್ನಾಟಕದಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನ ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಪಂಜಾಬ್, ಹರಿಯಾಣ, ಚಂಡೀಗಢ, ಛತ್ತೀಸ್‌ಗಢ, ಉತ್ತರ ಪ್ರದೇಶ, ಒಡಿಶದ ಕೆಲವು ಭಾಗಗಳಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆಯಿದೆ ಅಂತಲೂ ತಿಳಿಸಿದೆ.

ಸೋಮವಾರದವರೆಗೆ ಮಳೆಯ ಮುನ್ಸೂಚನೆ

"ಮೈಚಾಂಗ್" ಎಂದು ಕರೆಯಲ್ಪಡುವ ಚಂಡಮಾರುತದ ಪ್ರಭಾವ ಪ್ರಸ್ತುತ ದಕ್ಷಿಣ ಛತ್ತೀಸ್‌ಗಢದ ಮೇಲೆ ಬೀಡಿದೆ. ಇದರ ಪ್ರಬಾವ ಕ್ರಮೇಣ ಕಡಿಮೆಯಾಗುವ ನಿರೀಕ್ಷೆಯಿದೆ. ಆದರೂ ಇದು ಮುಂದಿನ ಕೆಲವು ದಿನಗಳವರೆಗೆ ಪೂರ್ವ ಮತ್ತು ಈಶಾನ್ಯ ಭಾರತದ ಮೇಲೆ ಪ್ರಭಾವ ಬೀರಿ ಚದುರಿದ ಮಳೆಯನ್ನು ಸುರಿಸುತ್ತದೆ ಎಂದು ತಿಳಿಸಿದೆ.

ಅಷ್ಟೇ ಅಲ್ಲದೆ ಲಕ್ಷದ್ವೀಪ ಕರಾವಳಿಯ ಆಗ್ನೇಯ ಅರೇಬಿಯನ್ ಸಮುದ್ರದ ಭಾಗದಲ್ಲಿ ಇರುವ ಮತ್ತೊಂದು ಚಂಡಮಾರುತ ತಮಿಳುನಾಡು ಮತ್ತು ಕೇರಳದ ಪ್ರತ್ಯೇಕ ಸ್ಥಳಗಳಲ್ಲಿ ಶುಕ್ರವಾರದಿಂದ ಸೋಮವಾರದವರೆಗೂ ಭಾರೀ ಮಳೆಯನ್ನು ಸುರಿಯಬಹುದು. ಅಲ್ಲದೆ ಸೋಮವಾರದಿಂದ ಪಶ್ಚಿಮ ಹಿಮಾಲಯ ಪ್ರದೇಶದ ಮೇಲೆ ಇದರ ಪರಿಣಾಮ ಬೀರುವ ಸಾಧ್ಯತೆಯಿದೆ.

ಅಲ್ಲದೆ ಇದೇ ವೇಳೆ ದೇಶದ ಉಳಿದ ಭಾಗಗಳಲ್ಲಿ ಒಣಹವೆ ಮುಂದುವರೆಯುವ ನಿರೀಕ್ಷೆಯಿದೆ. ಮುಂದಿನ 5 ದಿನಗಳವರೆಗೆ ಗುಜರಾತ್ ಮತ್ತು ಪೂರ್ವ ಭಾರತದಾದ್ಯಂತ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ ಎಂದು ಮುನ್ಸೂಚನೆ ಇದ್ದು, ಆದರೆ ದೇಶದ ಉಳಿದ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಸ್ವಲ್ಪ ಹೆಚ್ಚಾಗಿರುತ್ತದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+