Weather Report: ಈ ಮಹಾನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಸುರಿಯಲಿದೆ ಭರ್ಜರಿ ಮಳೆ-ಮಾಹಿತಿ ವಿವರ
ನವದೆಹಲಿ, ಫೆಬ್ರವರಿ, 19: ಇದೀಗ ಚಳಿಗಾಲದ ನಡುವೆಯೂ ದೇಶದ ಬಹುತೇಕ ಭಾಗಗಳಲ್ಲಿ ರಣಭೀಕರಕ ಬಿಸಿಲಿನ ವಾತಾವರಣ ನಿರ್ಮಾಣವಾಗುತ್ತಿದೆ. ಅಲ್ಲದೆ ಕೆಲವೆಡೆ ಮಾತ್ರ ಮೋಡ ಕವಿದ ವಾತಾವರಣ ನಿರ್ಮಾಣವಾಗುತ್ತಿದ್ದು, ಮಂಜಿನ ಪ್ರಮಾಣ ಹೆಚ್ಚಾಗಿ ಕಂಡುಬರುತ್ತಿದೆ, ಇನ್ನು ಮುಂದಿನ ಎರಡು ದಿನಗಳ ಕಾಲ ದೇಶದ ಈ ಭಾಗದಲ್ಲಿ ಗುಡುಗು, ಮಿಂಚು ಸಹಿತ ರಣಭೀಕರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ನವದೆಹಲಿ ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಸೋಮವಾರ (ಫೆಬ್ರವರಿ 19) ರಾತ್ರಿಯ ವೇಳೆಗೆ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು IMD ಹೇಳಿದೆ. ಮಂಗಳವಾರ ಮತ್ತು ಬುಧವಾರದಂದು ಈ ಪ್ರದೇಶದಲ್ಲಿ ತುಂತುರು ಮಳೆ ಮತ್ತು ಭಾಗಶಃ ಮೋಡ ಕವಿದ ಆಕಾಶ ಇರಲಿದೆ ಎಂದು ಹೇಳಿದೆ. ಮುಂದಿನ ಒಂದೆರಡು ದಿನಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನವು ಕ್ರಮವಾಗಿ 12-14 ಡಿಗ್ರಿ ಸೆಲ್ಸಿಯಸ್ ಮತ್ತು 27-28 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ.

ಫೆಬ್ರವರಿ 21ರವರೆಗೆ ನವದೆಹಲಿ ಎನ್‌ಸಿಆರ್‌ನ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇತರ ರಾಜ್ಯಗಳಾದ ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಸೋಮವಾರದಿಂದ ಬುಧವಾರದವರೆಗೆ ಲಘು ಮಳೆಯಾಗುವ ಸಾಧ್ಯೆಯಿದೆ ಎಂದು ಮುನ್ಸೂಚನೆ ನೀಡಿದೆ.
ನವದೆಹಲಿ ಹವಾಮಾನ: ಸೋಮವಾರ ಬೆಳಗ್ಗೆ ದೆಹಲಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಮತ್ತು ಮಂಜು ಕವಿದ ವಾತಾವರಣ ಇತ್ತು. ಕನಿಷ್ಠ ತಾಪಮಾನವು 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿದೆ ಎಂದು ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆಯ ಬುಲೆಟಿನ್ ಪ್ರಕಾರ ಬೆಳಿಗ್ಗೆ 8:30 ರ ಸಾಪೇಕ್ಷ ಆರ್ದ್ರತೆಯು ಶೇಕಡಾ 74 ರಷ್ಟಿತ್ತು.
ಮುಂದಿನ ಒಂದೆರಡು ದಿನಗಳಲ್ಲಿ ಕನಿಷ್ಠ ಮತ್ತು ಗರಿಷ್ಠ ತಾಪಮಾನವು ಕ್ರಮವಾಗಿ 12-14 ಡಿಗ್ರಿ ಸೆಲ್ಸಿಯಸ್ ಮತ್ತು 27-28 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ. ಇನ್ನು ದೇಶದ ರಾಜಧಾನಿ ಮತ್ತು ಅಕ್ಕಪಕ್ಕದ ಜಿಲ್ಲೆಗಳಲ್ಲಿ ಬುಧವಾರದವರೆಗೆ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. IMD ಸಹ ಸೋಮವಾರ ರಾತ್ರಿಯ ಕಡೆಗೆ ಜೋರಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಿದೆ.
ಫೆಬ್ರವರಿ 21ರವರೆಗೆ ಪಂಜಾಬ್‌ನಲ್ಲಿ ಪ್ರತ್ಯೇಕವಾದ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯೆತೆಯಿದೆ, ಫೆಬ್ರವರಿ 19-21ರವರೆಗೆ ಹರಿಯಾಣ, ನವದೆಹಲಿ, ಚಂಡೀಗಢ ಮತ್ತು ಪಶ್ಚಿಮ ಯುಪಿ, ಫೆಬ್ರವರಿ 19-20ರವರೆಗೆ ರಾಜಸ್ಥಾನ, ಫೆಬ್ರವರಿ 20-22ರವರೆಗೆ ಪೂರ್ವ ಯುಪಿಯಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.












Click it and Unblock the Notifications