ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮಂದಿನ ನಾಲ್ಕೈದು ದಿನ ಭಾರಿ ಮಳೆ ನಿರೀಕ್ಷೆ
ನವದೆಹಲಿ, ಸೆಪ್ಟೆಂಬರ್ 3: ಮುಂದಿನ ನಾಲ್ಕರಿಂದ ಐದು ದಿನಗಳ ಕಾಲ ಭಾರತದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ ದಕ್ಷಿಣ ಪೆನಿನ್ಸುಲರ್ ಮತ್ತು ಈಶಾನ್ಯ ಭಾರತದಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಮುಂದಿನ ಮೂರು ದಿನಗಳಲ್ಲಿ ಬಿಹಾರ ಮತ್ತು ಉಪ-ಹಿಮಾಲಯ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಮುಂದಿನ ಐದು ದಿನಗಳಲ್ಲಿ ವಾಯುವ್ಯ ಭಾರತದ ಬಯಲು ಪ್ರದೇಶ ಮತ್ತು ಮಧ್ಯ ಭಾರತದ ಮೇಲೆ ಕಡಿಮೆ ಮಳೆಯ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ.
ಅಸ್ಸಾಂ, ಮೇಘಾಲಯ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ತನ್ನ ಹವಾಮಾನ ಬುಲೆಟಿನ್‌ನಲ್ಲಿ, "ಮುಂದಿನ 4 ದಿನಗಳಲ್ಲಿ ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ." ಸೆಪ್ಟೆಂಬರ್ 4 ರಂದು ಅರುಣಾಚಲ ಪ್ರದೇಶದ ಮೇಲೆ ಪ್ರತ್ಯೇಕವಾದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಸೆಪ್ಟೆಂಬರ್ 7ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ
ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾದ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಕರ್ನಾಟಕ, ಉತ್ತರ ಒಳನಾಡಿನ ಕರ್ನಾಟಕ ಭಾಗಗಳಲ್ಲಿ ಸೆಪ್ಟೆಂಬರ್ 7 ರವರೆಗೆ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹೇಳಿದೆ.

ಪೂರ್ವ ಭಾರತದಲ್ಲಿ ವ್ಯಾಪಕ ಮಳೆ ನಿರೀಕ್ಷೆ
ಸೆಪ್ಟೆಂಬರ್ 7 ರವರೆಗೆ ಪೂರ್ವ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಇದೆ. ಬಿಹಾರ ಮತ್ತು ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಸೆಪ್ಟೆಂಬರ್ 5ರವರೆಗೆ ವ್ಯಾಪಕ ಮಳೆ ಬೀಳುವ ನಿರೀಕ್ಷೆಯಿದೆ. ಸೆಪ್ಟೆಂಬರ್ 4 ರಂದು ಜಾರ್ಖಂಡ್ ಮತ್ತು ಗಂಗಾನದಿ ಪಶ್ಚಿಮ ಬಂಗಾಳದ ಮೇಲೆ ಪ್ರತ್ಯೇಕವಾದ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.
ಸೆಪ್ಟೆಂಬರ್ 5 ಮತ್ತು 6ರಂದು ಒಡಿಶಾ, ಪೂರ್ವ ಮಧ್ಯಪ್ರದೇಶ; ಸೆಪ್ಟೆಂಬರ್ 7ರವರೆಗೆ ಛತ್ತೀಸ್‌ಗಢ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ತಮಿಳುನಾಡಿನಲ್ಲೂ ಮಳೆ ಆರ್ಭಟ
ಮುಂದಿನ ಐದು ದಿನಗಳಲ್ಲಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಾಲ್‌ನಲ್ಲಿ ಪ್ರತ್ಯೇಕವಾದ ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಕೇರಳ ಮತ್ತು ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಸೆಪ್ಟೆಂಬರ್ 7 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಯಲಸೀಮಾ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ ಮೇಲೆ ಸೆಪ್ಟೆಂಬರ್ 5ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಕೇರಳ ಮತ್ತು ಮಾಹೆಯಲ್ಲಿ ಸೆಪ್ಟೆಂಬರ್ 6 ಮತ್ತು 7 ರಂದು, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಮತ್ತು ರಾಯಲಸೀಮಾದಲ್ಲಿ ಸೆಪ್ಟೆಂಬರ್ 6 ರಂದು ಪ್ರತ್ಯೇಕವಾದ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆ ನಿರೀಕ್ಷೆ
ಸೆಪ್ಟೆಂಬರ್ 4 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ, ಹಿಮಾಚಲ ಪ್ರದೇಶದ ಮೇಲೆ ಮತ್ತು ಸೆಪ್ಟೆಂಬರ್ 5 ರವರೆಗೆ ಉತ್ತರಾಖಂಡದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ನೆರೆಯ ಪಾಕಿಸ್ತಾನದಲ್ಲಿ ಈಗಾಗಲೇ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಕಣಿವೆ ರಾಜ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಈಗಾಗಲೇ ಮಳೆಯಿಂದಾಗಿ ಭಾರೀ ಹಾನಿ ಸಂಭವಿಸಿದೆ. ರಾಜ್ಯದ ಎಲ್ಲಾ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಜಲಾಶಯಗಳು ಭರ್ತಿಯಾಗಿದ್ದು ಭಾರೀ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಭಾರೀ ಮಳೆಗೆ ರಸ್ತೆಗಳು, ಗುಡ್ಡ ಕುಸಿತದಿಂದ ಸಾರ್ವಜನಿಕರು ಭಾರೀ ತೊಂದರೆ ಅನುಭವಿಸಿದ್ದಾರೆ.












Click it and Unblock the Notifications