Weather report update: ದೇಶದ ಈ ಭಾಗಗಳಲ್ಲಿ ಮೂರು ದಿನಗಳ ಕಾಲ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?-ಇಲ್ಲಿದೆ ಮಾಹಿತಿ
ಕರ್ನಾಟಕ, ಮಾರ್ಚ್, 08: ಉತ್ತರ ಭಾರತದ ಕಡೆ ಹಿಮಪಾತವಾಗುತ್ತಿರುವುದು ಬಿಟ್ಟರೆ ದೇಶದ ಬಹುತೇಕ ರಾಜ್ಯಗಳಲ್ಲಿ ಭೀಕರ ಬರದ ವಾತಾವರಣ ನಿರ್ಮಾಣವಾಗಿದೆ. ಇನ್ನು ಹವಾಮಾನ ಇಲಾಖೆ ಮಾರ್ಚ್ ಮೊದಲ ವಾರದಲ್ಲೇ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯನ್ನು ನೀಡುತ್ತಲೇ ಬಂದಿದೆ.
ಹಾಗೆಯೇ ಈಗಲೂ ಕೂಡ ಕರ್ನಾಟಕದ ಕೆಲವು ಭಾಗಗಳು ಸೇರಿದಂತೆ ದೇಶದ ಈ ಭಾಗಗಳಲ್ಲಿ ಮಳೆಯಾಗಲಿದೆ ಎನ್ನುವ ಮುನ್ಸೂಚನೆಯೂ ಇದೆ. ಹಾಗಾದರೆ ಯಾವ್ಯಾವ ಕಡೆ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಈಗಾಗಲೇ ಹವಾಮಾನ ಇಲಾಖೆ ಮಾರ್ಚ್ ಮೊದಲ ವಾರದಲ್ಲೇ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಆದರೆ ಈ ಭವಿಷ್ಯ ಇದೀಗ ಸುಳ್ಳಾಗಿದ್ದು, ಜನರು ಇದರ ವಿರುದ್ಧ ರೊಚ್ಚಿಗೆದ್ದು ಕೆಟ್ಟ ಕೆಟ್ಟದಾಗಿ ಪ್ರತಿಕ್ರಿಯರಗಳನ್ನು ನೀಡುತ್ತಿದ್ದಾರೆ. ಹಾಗೆಯೇ ಮುಂದಿನ ಮೂರು ದಿನಗಳ ಕಾಲ ದೇಶದ ಈ ಭಾಗಗಳಲ್ಲಿ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ. ಹಾಗಾದರೆ ಇದಾದ್ರೂ ನಿಜವಾಗಲಿದ್ಯಾ ಅಂತಿದ್ದಾರೆ ನಮ್ ಜನ.
ಮಾರ್ಚ್ 11-13ರವರೆಗೆ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಲಘುವಾಗಿ ಮಧ್ಯಮ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಅದೇ ಅವಧಿಯಲ್ಲಿ ಪಕ್ಕದ ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 10 ಮತ್ತು ಮಾರ್ಚ್ 12ರಂದು ವಾಯುವ್ಯ ಭಾರತದ ಮೇಲೆ ಎರಡು ಪಾಶ್ಚಿಮಾತ್ಯ ಅಡಚಣೆಗಳು ಶೀಘ್ರವಾಗಿ ಪರಿಣಾಮ ಬೀರುವ ಸಾಧ್ಯತೆಯಿದೆ. ಈ ಪ್ರಭಾವದಿಂದ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.












Click it and Unblock the Notifications