Rain Alert: ಕರ್ನಾಟಕದಲ್ಲಿ ಭಾರಿ ಮಳೆಯ ಮುನ್ಸೂಚನೆ- ಮಹಾರಾಷ್ಟ್ರ, ಗುಜರಾತ್‌ಗೆ ರೆಡ್ ಅಲರ್ಟ್

ನವದೆಹಲಿ, ಜುಲೈ 22: ಮಹಾರಾಷ್ಟ್ರ ಹಾಗೂ ಗುಜರಾತ್‌ಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಎರಡೂ ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದ ಘಾಟ್ ಪ್ರದೇಶಗಳಲ್ಲಿ ಮುಂದಿನ 3 ದಿನಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯ ಮುನ್ಸೂಚನೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

Weather Update: Heavy rain in Karnataka- Red alert for Maharashtra, Gujarat- Know the details

ಹವಾಮಾನ ಇಲಾಖೆಯು ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಬುಲೆಟಿನ್ ಪ್ರಕಾರ, ಜುಲೈ 22 ರಿಂದ ಜುಲೈ 25 ರ ವರೆಗೆ ಹಿಮಾಚಲ ಮತ್ತು ಪೂರ್ವ ರಾಜಸ್ಥಾನದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದ ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ಕೇರಳ, ಕರ್ನಾಟಕ, ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ ಮತ್ತು ತೆಲಂಗಾಣದಲ್ಲಿ ಭಾರೀ ಮಳೆಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಜುಲೈ 25 ರಂದು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.

Weather Update: Heavy rain in Karnataka- Red alert for Maharashtra, Gujarat- Know the details

ಮಧ್ಯಪ್ರದೇಶ, ಒಡಿಶಾದಲ್ಲಿ ಭಾರಿ ಮಳೆ

ಮುಂದಿನ 5 ದಿನಗಳಲ್ಲಿ ಮಧ್ಯ ಭಾರತದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಜುಲೈ 25 ರಂದು ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈಶಾನ್ಯ ರಾಜ್ಯಗಳಾದ ಅಸ್ಸಾಂ ಮತ್ತು ಮೇಘಾಲಯದಲ್ಲಿ ಜುಲೈ 25 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳದಲ್ಲೂ ಸುರಿಯಲಿದೆ ಮಳೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರಭಾವದಿಂದ ಕೇರಳದಲ್ಲಿ ಇನ್ನೂ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮುಂದಿನ ಮೂರು ದಿನಗಳಲ್ಲಿ ಆರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

Weather Update: Heavy rain in Karnataka- Red alert for Maharashtra, Gujarat- Know the details

ಇಡುಕ್ಕಿ, ಮಲಪ್ಪುರಂ, ಕೋಯಿಕ್ಕೋಡ್, ವಯನಾಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸೋಮವಾರದವರೆಗೆ ಭಾರೀ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಜುಲೈ 25ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೇರಳದಲ್ಲಿ ಶೇ.39 ರಷ್ಟು ಮಳೆ ಕೊರತೆಯಾಗಿದೆ. ಜುಲೈ 21ರ ವರೆಗೆ ರಾಜ್ಯದಲ್ಲಿ 1106.6 ಮಿ.ಮೀ ಮಳೆಯಾಗಬೇಕಿತ್ತು. ಆದರೆ ಈ ವರೆಗೆ 677.2 ಮಿ.ಮೀ ಮಾತ್ರ ಮಳೆಯಾಗಿದೆ.

ಶುಕ್ರವಾರ ಕೇರಳದಲ್ಲಿ ಮುಂಗಾರು ದುರ್ಬಲವಾಗಿತ್ತು. ವಯನಾಡು ಜಿಲ್ಲೆಯ ವೈತಿರಿಯಲ್ಲಿ 7 ಸೆಂಟಿಮೀಟರ್‌ಗಳಷ್ಟು ಭಾರೀ ಮಳೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+