Weather Update: ಅಕ್ಟೋಬರ್ 16 ರ ವರೆಗೆ ಭಾರತದ ಈ ರಾಜ್ಯಗಳಲ್ಲಿ ಭಾರೀ ಮಳೆ- ಕರ್ನಾಟಕದಲ್ಲೂ ವರುಣನ ಆರ್ಭಟ
ಅಕ್ಟೋಬರ್ 16 ರ ವರೆಗೆ ವಾಯುವ್ಯ, ದಕ್ಷಿಣ ಮತ್ತು ಪೂರ್ವ ಭಾರತದ ಕೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕರ್ನಾಟಕದ ಒಳನಾಡಿನಲ್ಲಿ ಮಳೆಯಾಗ ಇನ್ನು ಕೆಲ ದಿನಗಳ ಕಾಲ ಗುಡುಗು ಸಹಿತ ಮಳೆಯಾಗಲಿದೆ ಐಎಂಡಿ ಮಾಹಿತಿ ನೀಡಿದೆ.
ಅಕ್ಟೋಬರ್ 13 ಮತ್ತು 16 ರಂದು ತಮಿಳುನಾಡು ಮತ್ತು ಕೇರಳದಲ್ಲಿಯೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ಕೇರಳದಲ್ಲಿ ಈಗಾಗಲೇ ಭಾರೀ ಮಳೆಯಾಗುತ್ತಿರುವುದರಿಂದ ರಾಜ್ಯದ ಹದಿನಾಲ್ಕು ಜಿಲ್ಲೆಗಳ ಪೈಕಿ ಮೂರಕ್ಕೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ ಮತ್ತು ಇಡುಕ್ಕಿ ಸೇರಿದಂತೆ ಕೇರಳದ ಏಳು ಹೆಚ್ಚುವರಿ ಜಿಲ್ಲೆಗಳಲ್ಲಿ ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕಾಶ್ಮೀರ-ಗಿಲ್ಗಿಟ್-ಬಾಲ್ಟಿಸ್ತಾನ್-ಮುಜಫರಾಬಾದ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪೂರ್ವ ರಾಜಸ್ಥಾನಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.
ಮುಂದಿನ ಐದು ದಿನಗಳವರೆಗೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಾದ್ಯಂತ ಹಲವಾರು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಪಂಜಾಬ್, ಹಿಮಾಚಲ ಪ್ರದೇಶ, ಗುಜರಾತ್ ಪ್ರದೇಶ, ಕೊಂಕಣ-ಗೋವಾ, ಕರಾವಳಿ ಆಂಧ್ರಪ್ರದೇಶ-ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಭಾಗದಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಿಹಾರ, ಜಾರ್ಖಂಡ್, ಒಡಿಶಾ, ಛತ್ತೀಸ್‌ಗಢ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಹೆಚ್ಚಿನ ಭಾಗಗಳಿಂದ ಶುಕ್ರವಾರ ನೈಋತ್ಯ ಮಾನ್ಸೂನ್ ಹಿಂದೆಗೆದುಕೊಂಡಿದೆ.
ಮುಂದಿನ ಐದು ದಿನಗಳ ಅವಧಿಯಲ್ಲಿ ಹಿಮಾಲಯ ಭಾಗದ ಪಶ್ಚಿಮ ಬಂಗಾಳದಲ್ಲಿ ಪ್ರತ್ಯೇಕವಾಗಿ ಅಥವಾ ಸ್ವಲ್ಪಮಟ್ಟಿಗೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹಮಾವಾನ ಇಲಾಖೆ ನೀಡಿದೆ. ಆ ನಂತರ ಭಾರತದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಶ್ರೀನಗರ ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ಟೋಬರ್ 14 ಮತ್ತು 18 ರ ನಡುವೆ ವ್ಯಾಪಕ ಮಳೆ ಹಾಗೂ ಹಿಮಪಾತವಾಗಲಿದೆ ಎಂದು ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ಕರ್ನಾಟಕದಲ್ಲಿ ನಿನ್ನೆ ಸುರಿದ ಮಳೆ
*ಬೆಳ್ತಂಗಡಿ: 35.2 ಮಿ.ಮೀ
*ಉಪ್ಪಿನಂಗಡಿ: 24.2ಮಿ.ಮೀ
*ಸಿದ್ಧಾಪುರ: 22 ಮಿ.ಮೀ
*ಸಕಲೇಶಪುರ: 21.8 ಮಿ.ಮೀ
*ಬಾಳೆಹೊನ್ನೂರು: 20 ಮಿ.ಮೀ
*ಜೋಯಿಡಾ: 18 ಮಿ.ಮೀ
*ಕೊಟ್ಟಿಗೆಹಾರ: 17.8 ಮಿ.ಮೀ
*ಮಂಕಿ: 17.4 ಮಿ.ಮೀ
*ಪುತ್ತೂರು: 17 ಮಿ.ಮೀ
*ಚಿಕ್ಕಮಗಳೂರು: 16 ಮಿ.ಮೀ
*ಧರ್ಮಸ್ಥಳ: 15.2 ಮಿ.ಮೀ
*ಸಿಆರ್ ಪಟಾನಾ: 14 ಮಿ.ಮೀ
*ಭಾಗಮಂಡಲ: 12 ಮಿ.ಮೀ











Click it and Unblock the Notifications