Get Updates
Get notified of breaking news, exclusive insights, and must-see stories!

India Weather update: ಕೆಲವು ಪ್ರದೇಶಗಳಿಗೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ನವದೆಹಲಿ, ಏಪ್ರಿಲ್. 27: ಭಾರತೀಯ ಹವಾಮಾನ ಇಲಾಖೆಯು ಪಶ್ಚಿಮ ಬಂಗಾಳ ಮತ್ತು ಒಡಿಶಾದ ಹಲವು ಸ್ಥಳಗಳಿಗೆ ರೆಡ್ ಅಲರ್ಟ್ ಘೋಷಿಸಿದ್ದು, ಇದು ತಿಂಗಳ ಅಂತ್ಯದವರೆಗೆ ಜಾರಿಯಲ್ಲಿರಲಿದೆ. ಇದರ ಜೊತೆಗೆ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಕರ್ನಾಟಕದ ಒಳಭಾಗಗಳಿಗೆ ಆರೆಂಜ್ ಅಲರ್ಟ್ ಅನ್ನು ಘೋಷಿಸಲಾಗಿದೆ.

ಮುಂದಿನ ಐದು ದಿನಗಳಲ್ಲಿ ಪೂರ್ವ ಮತ್ತು ದಕ್ಷಿಣ ಪರ್ಯಾಯದ್ವೀಪದ ಭಾರತದ ಮೇಲೆ 'ಉಷ್ಣ ಅಲೆಯಿಂದ ತೀವ್ರ ಶಾಖದ ಅಲೆ ' ಪರಿಸ್ಥಿತಿಗಳು ಮುಂದುವರಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

Weather update IMD issues Red Alert for extreme heatwave conditions in some parts of India

ಮುಂದಿನ ಎರಡು ದಿನಗಳಲ್ಲಿ ಪೂರ್ವ ಭಾರತದ ಮೇಲೆ ಮತ್ತು ನಂತರದ ಐದು ದಿನಗಳಲ್ಲಿ ಮಹಾರಾಷ್ಟ್ರ ಮತ್ತು ದಕ್ಷಿಣ ಪರ್ಯಾಯದ್ವೀಪದ ಭಾರತದ ಹಲವು ಭಾಗಗಳಲ್ಲಿ ಗರಿಷ್ಠ ತಾಪಮಾನವು 2-3 ° ಸೆಲ್ಸಿಯಸ್ ಅಷ್ಟು ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಏಪ್ರಿಲ್ 26 ರಿಂದ 29 ರವರೆಗೆ ಪಶ್ಚಿಮ ಹಿಮಾಲಯ ಪ್ರದೇಶದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಇದೇ ರೀತಿಯ ಹವಾಮಾನ ಪರಿಸ್ಥಿತಿಗಳು ವಾಯುವ್ಯ ಭಾರತದ ಬಯಲು ಪ್ರದೇಶಗಳಲ್ಲಿ ಏಪ್ರಿಲ್ 26 ರಿಂದ 28 ರವರೆಗೆ ಮತ್ತು ಪಕ್ಕದ ಮಧ್ಯ ಭಾರತದಲ್ಲಿ ಏಪ್ರಿಲ್ 26 ರಿಂದ 27 ರವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ.

Weather update IMD issues Red Alert for extreme heatwave conditions in some parts of India

ಭಾರತೀಯ ಹವಾಮಾನ ಇಲಾಖೆ ಮತ್ತು ವಿಶ್ವ ಹವಾಮಾನ ಸಂಸ್ಥೆ ಎರಡೂ 2024 ವರ್ಷ ಹೆಚ್ಚು ತಾಪಮಾನದ ವರ್ಷವಾಗಿ ದಾಖಲಾಗುವ ಸಾಧ್ಯತೆಯಿದೆ ಎಂದು ಒಪ್ಪಿಕೊಂಡಿದೆ. ದೇಸದಲ್ಲಿ ಬಿಸಿ ಗಾಳಿ, ಶಾಖದ ಲೆಗಳು ದಿನೇ ದಿನೇ ಹೆಚ್ಚಾಗುತ್ತಲೆ ಇವೆ. ಹವಾಮಾನ ಇಲಾಖೆಯು ಮೇ ವೇಳೆಗೆ ತಾಪಮಾನದಲ್ಲಿ ನಿರಂತರವಾಗಿ ಏರಿಕೆಯಾಗಲಿದೆ ಎಂದು ಭವಿಷ್ಯ ನುಡಿದಿದೆ. ಇದರ ಪರಿಣಾಮವಾಗಿ ತೀವ್ರ ಶಾಖದ ಅಲೆಗಳು ಉಂಟಾಗುತ್ತವೆ. ಉತ್ತರ ಮತ್ತು ಮಧ್ಯ ಭಾರತವನ್ನು ಕೇಂದ್ರೀಕರಿಸಿ ಮುಂಬರುವ ತಿಂಗಳುಗಳಲ್ಲಿ ಶಾಖದ ಅಲೆಗಳ ದಿನಗಳು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗುವ ನಿರೀಕ್ಷೆಯಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+