Rain Alert: ಇಂದಿನಿಂದ ಮೂರು ದಿನಗಳ ಕಾಲ ಈ ಭಾಗದಲ್ಲಿ ಮಳೆಯ ಎಚ್ಚರಿಕೆ!
ದೆಹಲಿ, ಮಾರ್ಚ್ 05: ದೇಶದ ಹಲವು ರಾಜ್ಯಗಳಲ್ಲಿ ನಿರಂತರವಾಗಿ ಹವಾಮಾನ ಬದಲಾಗುತ್ತಿದೆ. ಅನೇಕ ಕಡೆಗಳಲ್ಲಿ ಮಳೆಯ ವಾತಾವರಣ ಎದುರಾಗಿದ್ದು, ಇನ್ನೂ ಕೆಲವೆಡೆ ಚಳಿಯ ವಾತಾವರಣ ಇದೆ. ಮತ್ತೆ ಕೆಲವೆಡೆ ಬಿರುಬಿಸಿಲು ಕಾಡುತ್ತಿದೆ. ದೇಶದ ಇಂದಿನ ಹವಾಮಾನ ವರದಿ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಮುಂದಿನ ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಮುನ್ಸೂಚನೆ ನೀಡಿದೆ. ಇಂದು ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಮತ್ತು ಮಾರ್ಚ್ 5 ರಿಂದ ಮಾರ್ಚ್ 7 ರ ರಾತ್ರಿ ಪಶ್ಚಿಮ ಹಿಮಾಲಯನ್ ಪ್ರದೇಶದಲ್ಲಿ ಮಳೆಯಾಗುತ್ತದೆ ಎಂದು ತಿಳಿಸಿದೆ.

ಅರುಣಾಚಲ ಪ್ರದೇಶದಲ್ಲಿ ಎರಡು ದಿನಗಳ ಕಾಲ ಭಾರೀ ಮಳೆ ಅಥವಾ ಹಿಮಪಾತವನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದು, ಪೂರ್ವ ಮತ್ತು ಈಶಾನ್ಯ ಭಾರತದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇಂದಿನಿಂದ ಎರಡು ಮೂರು ದಿನಗಳ ಕಾಲ ಉತ್ತರ ಪ್ರದೇಶ, ಬಿಹಾರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ದೆಹಲಿ, ನೋಯ್ಡಾ ಮತ್ತು ಎನ್‌ಸಿಆರ್ ಪ್ರದೇಶಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುವ ಸಾಧ್ಯತೆ ಇದೆ. ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಹಿಮಪಾತದ ಬಗ್ಗೆ IMD ಎಚ್ಚರಿಕೆ ನೀಡಿದ್ದು, ಹಿಮಾಚಲ, ಉತ್ತರಾಖಂಡದಲ್ಲಿ ಹಿಮಪಾತ ಮತ್ತು ಹರಿಯಾಣ, ಚಂಡೀಗಢ ಮತ್ತು ಪಂಜಾಬ್‌ನಲ್ಲಿ ಮಳೆ ಎಚ್ಚರಿಕೆಯನ್ನ ಹವಾಮಾನ ಇಲಾಖೆ ನೀಡಿದೆ.
ಇಂದು ಜಾರ್ಖಂಡ್, ಸಿಕ್ಕಿಂ ಮತ್ತು ಈಶಾನ್ಯದ ಹಲವು ಪ್ರದೇಶಗಳಲ್ಲಿ ಆಲಿಕಲ್ಲು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ದೆಹಲಿ-ಎನ್‌ಸಿಆರ್‌ನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ಡಿಗ್ರಿ ಸೆಲ್ಸಿಯಸ್ ಮತ್ತು ಒಂಬತ್ತು ಡಿಗ್ರಿ ಸೆಲ್ಸಿಯಸ್ ಆಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ.
ಸೋಮವಾರ ಮುಂಜಾನೆ, ಹಿಮಾಚಲ ಪ್ರದೇಶದಲ್ಲಿ, 5 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 601 ರಸ್ತೆಗಳನ್ನು ಮುಚ್ಚಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಲಭ್ಯವಿರುವ ಅಂಕಿಅಂಶಗಳ ಪ್ರಕಾರ, "5 ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 601 ರಸ್ತೆಗಳು ಮುಚ್ಚಲ್ಪಟ್ಟಿವೆ ಮತ್ತು 1436 ವಿದ್ಯುತ್ ಸರಬರಾಜು ಯೋಜನೆಗಳು ಅಡಚಣೆಯಾಗಿದೆ. ಅಲ್ಲದೇ 124 ನೀರು ಸರಬರಾಜು ಯೋಜನೆಗಳು ಈ ಪ್ರದೇಶದಲ್ಲಿ ಹಿಮಪಾತದಿಂದಾಗಿ ಅಡಚಣೆಯಾಗಿದೆ ಎಂದು ತಿಳಿದು ಬಂದಿದೆ. ಕಳೆದ ಮೂರು ದಿನಗಳಲ್ಲಿ, ದೆಹಲಿಯ ಕೆಲವು ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗಿದೆ, ಸೋಮವಾರ ಬೆಳಿಗ್ಗೆ 8:30 ಕ್ಕೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಮಳೆಯ ಕುರುಹುಗಳು ದಾಖಲಾಗಿವೆ.












Click it and Unblock the Notifications