Rain in South India: ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಮಳೆ ಸಾಧ್ಯತೆ- ಮಾಹಿತಿ, ವಿವರ
ಬೆಂಗಳೂರು, ಅಕ್ಟೋಬರ್ 18: ಚಂಡಮಾರುತದ ಪರಿಣಾಮವಾಗಿ ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಕೇರಳ, ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನ ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಅಂಡಮಾನ್-ನಿಕೋಬಾರ್ ದ್ವೀಪಗಳು, ಕೇರಳ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ ಎಂದು ಐಎಂಡಿ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಕಾರಣ ಕರಾವಳಿ ಕರ್ನಾಟಕದ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಉಪ ಹಿಮಾಲಯದ ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾ, ಉತ್ತರಾಖಂಡ, ಹಿಮಾಚಲ ಪ್ರದೇಶ, ಕೊಂಕಣ-ಗೋವಾ, ಕರಾವಳಿ ಆಂಧ್ರಪ್ರದೇಶ, ಯಾನಂ, ರಾಯಲಸೀಮಾ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರ್ನಾಟಕದಲ್ಲಿ ಮಳೆ
ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಮಂಡ್ಯ, ತುಮಕೂರು, ರಾಮನಗರ, ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆ ಜಿಲ್ಲೆಗಳ ಪ್ರತ್ಯೇಕವಾದ ಸ್ಥಳಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಸುರಿದ ಮಳೆ ಪ್ರಮಾಣ
ದಕ್ಷಿಣ ಕನ್ನಡ: 84.5 ಮಿ.ಮೀ
ಉಡುಪಿ: 68.5 ಮಿ.ಮೀ
ಹಾಸನ: 62.5 ಮಿ.ಮೀ
ಚಿಕ್ಕಮಗಳೂರು: 58 ಮಿ.ಮೀ
ಉತ್ತರ ಕನ್ನಡ: 44.5 ಮಿ.ಮೀ
ಹಾವೇರಿ: 43 ಮಿ.ಮೀ
ಮೈಸೂರು: 35.5 ಮಿ.ಮೀ
ಮಂಡ್ಯ: 31.5 ಮಿ.ಮೀ
ಧಾರವಾಡ: 28.5 ಮಿ.ಮೀ
ಶಿವಮೊಗ್ಗ: 27.5 ಮಿ.ಮೀ
ಕೊಡಗು: 27 ಮಿ.ಮೀ
ಬೆಳಗಾವಿ: 27 ಮಿ.ಮೀ
ತುಮಕೂರು: 20.5 ಮಿ.ಮೀ
ಹೆಚ್ಚು ಮಳೆ ಬಿದ್ದ ಸ್ಥಳಗಳು
ಕೊಡಿಯಾಲ, ದಕ್ಷಿಣ ಕನ್ನಡ: 84.5 ಮಿ.ಮೀ
ನಲ್ಲೂರು, ಉಡುಪಿ: 68.5 ಮಿ.ಮೀ
ಸನ್ಯಾಸಿಹಳ್ಳಿ, ಹಾಸನ: 62.5 ಮಿ.ಮೀ
ಮಾಳ, ಉಡುಪಿ: 61.5 ಮಿ.ಮೀ
ಕೊಳ್ತಿಗೆ, ದಕ್ಷಿಣ ಕನ್ನಡ: 59.5 ಮಿ.ಮೀ

ಕೇರಳದಲ್ಲಿ ಭಾರೀ ಮಳೆ: ಆರೇಂಜ್ ಅಲರ್ಟ್
ಕೇರಳದ ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್ ಮತ್ತು ಮಲಪ್ಪುರಂನಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೊಲ್ಲಂ, ಪತ್ತನಂತಿಟ್ಟ, ಆಲಪ್ಪುಳ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಹವಾಮಾನ ಸಂಸ್ಥೆ ಆರೆಂಜ್ ಅಲರ್ಟ್ ಘೋಷಿಸಿದೆ. ಇತರ ಎಂಟು ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಹೇಳಿದೆ.
'ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಲಕ್ಷದ್ವೀಪ ಪ್ರದೇಶದ ಮೇಲೆ ಚಂಡಮಾರುತದ ಪರಿಚಲನೆ ಇದೆ. ಇದು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿಮೀ ವರೆಗೆ ವಿಸ್ತರಿಸಿದೆ. ಇದರ ಪ್ರಭಾವದಿಂದಾಗಿ, ಮುಂದಿನ 48 ಗಂಟೆಗಳ ಅವಧಿಯಲ್ಲಿ ಆಗ್ನೇಯ ಮತ್ತು ಪೂರ್ವ ಅರೇಬಿಯನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ನಿರ್ಮಾಣವಾಗುವ ಸಾಧ್ಯತೆ ಇದೆ. ಇದು ಪಶ್ಚಿಮ, ವಾಯವ್ಯದ ಕಡೆಗೆ ಚಲಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ' ಎಂದು ಹವಾಮಾನ ಇಲಾಖೆ ಹೇಳಿದೆ.
ಬುಧವಾರ ಹಾಗೂ ಗುರುವಾರವೂ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು, ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಮುದ್ರಕ್ಕೆ ತೆರಳದಂತೆ ಮೀನುಗಾರರಿಗೆ ಸೂಚಿಸಲಾಗಿದೆ.












Click it and Unblock the Notifications