Weekend Weather: ಕರ್ನಾಟಕ, ಕೇರಳ, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಮಳೆ ಮುನ್ಸೂಚನೆ- ಮಾಹಿತಿ, ವಿವರ
ನವದೆಹಲಿ, ನವೆಂಬರ್ 25: ಕೇರಳ, ಲಕ್ಷದ್ವೀಪ, ತಮಿಳುನಾಡು, ಆಂಧ್ರಪ್ರದೇಶ, ಕರ್ನಾಟಕ, ಮಹಾರಾಷ್ಟ್ರ ಮತ್ತು ಅಂಡಮಾನ್-ನಿಕೋಬಾರ್ ದ್ವೀಪಗಳಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ.
ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ಗುಜರಾತ್ ಮತ್ತು ಪಶ್ಚಿಮ ರಾಜಸ್ಥಾನದಲ್ಲಿ ಮಿಂಚು ಸಹಿತ ಚದುರಿದ ಮಳೆಯ ಮುನ್ಸೂಚನೆ ಇದೆ ಎಂದು ಐಎಂಡಿ ಹೇಳಿದೆ.

ಗುಜರಾತ್ ಮತ್ತು ಮಹಾರಾಷ್ಟ್ರದ ಕರಾವಳಿಯಲ್ಲಿ ಗುಡುಗು ಸಹಿತಿ ಮಳೆ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಗುಜರಾತ್‌ನ ಆಗ್ನೇಯ ತುದಿ, ವಾಯುವ್ಯ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದ ನೈಋತ್ಯ ತುದಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ತೆಲಂಗಾಣದಲ್ಲಿ ನವೆಂಬರ್ 28ರ ವರೆಗೂ ಮಳೆಯಾಗುವ ಸಾಧ್ಯತೆ
ಮುಂದಿನ ಐದು ದಿನಗಳಲ್ಲಿ ತೆಲಂಗಾಣದ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ತಿಳಿಸಿದೆ.

ಮುಂದಿನ ಕೆಲವು ದಿನಗಳಲ್ಲಿ ತೆಲಂಗಾಣದಲ್ಲಿ ಮಳೆಯು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ. ನಂತರ ರಾಜ್ಯದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶುಕ್ರವಾರದಂದು ಹೈದರಾಬಾದ್‌ನಲ್ಲಿ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿಯಲ್ಲಿ ಸ್ವಲ್ಪ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಉತ್ತರ, ಮಧ್ಯ ತೆಲಂಗಾಣ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಸ್ವತಂತ್ರ ಹವಾಮಾನ ತಜ್ಞ ಟಿ ಬಾಲಾಜಿ ತಿಳಿಸಿದ್ದಾರೆ.
ಕಳೆದ ವಾರದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ ಮತ್ತು ನವೆಂಬರ್ 17 ರಂದು ಪಟಂಚೇರುದಲ್ಲಿ ಕನಿಷ್ಠ ತಾಪಮಾನ 14.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ತಮಿಳುನಾಡಿನಲ್ಲಿ ಭಾರೀ ಮಳೆ
ತಮಿಳುನಾಡು ರಾಜಧಾನಿ ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯ ಮುನ್ಸೂಚನೆ ಇದೆ. ಚೆನ್ನೈನ ಎಲ್ಲಾ ಶಾಲೆಗಳಿಗೂ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.
ಹವಾಮಾನ ಇಲಾಖೆಯ ಇತ್ತೀಚಿನ ಬುಲೆಟಿನ್ ಪ್ರಕಾರ, ಶನಿವಾರ ತಮಿಳುನಾಡಿನ ಇತರ ಜಿಲ್ಲೆಗಳ ಜೊತೆಗೆ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟುಗಳಲ್ಲಿ ಮಿಂಚು ಸಹಿತ ಸಾಧಾರಣ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಪುದುಚೇರಿ ಮತ್ತು ಕಾರೈಕಾಲ್‌ನ ಹಲವು ಜಿಲ್ಲೆಗಳಿಗೂ ಹವಾಮಾನ ಇಲಾಖೆ ಇದೇ ಮುನ್ಸೂಚನೆ ನೀಡಿದೆ.
ಕೇರಳದಲ್ಲಿ ಮಳೆ
ತಿರುವನಂತಪುರಂ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ತಿರುವನಂತಪುರಂ ಜಿಲ್ಲೆಯ ಹಲವು ರಸ್ತೆಗಳು ಮತ್ತು ಗುಡ್ಡಗಾಡು ಪ್ರದೇಶಗಳು ಜಲಾವೃತಗೊಂಡಿವೆ. ಕೇರಳದ ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.
ಐಎಂಡಿ ಪತ್ರಿಕಾ ಪ್ರಕಟಣೆಯ ಪ್ರಕಾರ, ತಿರುವನಂತಪುರಂ, ಕೊಲ್ಲಂ, ಆಲಪ್ಪುಳ, ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ಸುರಿಯಬಹುದು.












Click it and Unblock the Notifications