ಮಮತಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಹಾಗೂ ಕೇಂದ್ರ ಸಚಿವರು
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷವು ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರು ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ಮಾಡಿರುವ ಮೋದಿ, 'ಪಶ್ಚಿಮ ಬಂಗಾಳದಲ್ಲಿನ ಗೆಲುವಿಗೆ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪಕ್ಷಕ್ಕೆ ಅಭಿನಂದನೆಗಳು. ಬಂಗಾಳದ ಜನರ ಆಶಯಗಳನ್ನು ಈಡೇರಿಸಲು ಕೇಂದ್ರ ಸರ್ಕಾರವು ಬಂಗಾಳಕ್ಕೆ ತನ್ನ ಸೇವೆಯನ್ನು ಮುಂದುವರೆಸುತ್ತದೆ. ಜೊತೆಗೆ ಕೋವಿಡ್ ಪರಿಸ್ಥಿತಿಯಿಂದ ಹೊರಗೆ ಬರಲು ಅವಶ್ಯ ಸಹಾಯವನ್ನು ಒದಗಿಸುತ್ತದೆ' ಎಂದಿದ್ದಾರೆ.
ಮತ್ತೊಂದು ಟ್ವೀಟ್ನಲ್ಲಿ, 'ಬಿಜೆಪಿಗೆ ಬೆಂಬಲಿಸಿ, ಆಶೀರ್ವದಿಸಿದ ಪಶ್ಚಿಮ ಬಂಗಾಳದ ನನ್ನ ಸಹೋದರ, ಸಹೋದರಿಯಗೆ ಧನ್ಯವಾದ. ರಾಜ್ಯದಲ್ಲಿ ಬಿಜೆಪಿಯ ಸ್ಥಾನ ಗಟ್ಟಿಯಾಗಿದೆ. ಪಕ್ಷವು ಜನರ ಸೇವೆಯನ್ನು ಮುಂದುವರೆಸಲಿದೆ. ಪಕ್ಷದ ಎಲ್ಲ ಕಾರ್ಯಕರ್ತರ ಶ್ರಮವನ್ನು ನಾನು ಗುರುತಿಸುತ್ತೇನೆ' ಎಂದಿದ್ದಾರೆ.

ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಟ್ವೀಟ್ ಮಾಡಿ, 'ಟಿಎಂಸಿ ಪಕ್ಷದ ಜಯಕ್ಕೆ ನನ್ನ ಅಭಿನಂದನೆಗಳು. ಮಮತಾ ಅವರ ಮುಂದಿನ ಆಡಳಿತ ಅವಧಿಗೆ ಶುಭ ಹಾರೈಕೆಗಳು' ಎಂದಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಹ ಮಮತಾ ಅವರಿಗೆ ಶುಭ ಕೋರಿದ್ದು, 'ಪಶ್ಚಿಮ ಬಂಗಾಳದಲ್ಲಿ ಪುನರಾಯ್ಕೆ ಆಗಿದ್ದಕ್ಕೆ ಅಭಿನಂದನೆಗಳು. ನಿಮ್ಮ ಮುಂದಿನ ಆಡಳಿತಾವಧಿ ಚೆನ್ನಾಗಿರಲೆಂದು ಆಶಿಸುತ್ತೇನೆ' ಎಂದಿದ್ದಾರೆ.
Recommended Video
ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ರಾಜ್ಯಗಳ ಸಿಎಂಗಳು ಮಮತಾ ಬ್ಯಾನರ್ಜಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications