• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಮಮತಾಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಹಾಗೂ ಕೇಂದ್ರ ಸಚಿವರು

|

ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷವು ಅಭೂತಪೂರ್ವ ಗೆಲುವು ಸಾಧಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಕೇಂದ್ರ ಸಚಿವರು ಮಮತಾ ಬ್ಯಾನರ್ಜಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಟ್ವೀಟ್ ಮಾಡಿರುವ ಮೋದಿ, 'ಪಶ್ಚಿಮ ಬಂಗಾಳದಲ್ಲಿನ ಗೆಲುವಿಗೆ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿ ಪಕ್ಷಕ್ಕೆ ಅಭಿನಂದನೆಗಳು. ಬಂಗಾಳದ ಜನರ ಆಶಯಗಳನ್ನು ಈಡೇರಿಸಲು ಕೇಂದ್ರ ಸರ್ಕಾರವು ಬಂಗಾಳಕ್ಕೆ ತನ್ನ ಸೇವೆಯನ್ನು ಮುಂದುವರೆಸುತ್ತದೆ. ಜೊತೆಗೆ ಕೋವಿಡ್‌ ಪರಿಸ್ಥಿತಿಯಿಂದ ಹೊರಗೆ ಬರಲು ಅವಶ್ಯ ಸಹಾಯವನ್ನು ಒದಗಿಸುತ್ತದೆ' ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, 'ಬಿಜೆಪಿಗೆ ಬೆಂಬಲಿಸಿ, ಆಶೀರ್ವದಿಸಿದ ಪಶ್ಚಿಮ ಬಂಗಾಳದ ನನ್ನ ಸಹೋದರ, ಸಹೋದರಿಯಗೆ ಧನ್ಯವಾದ. ರಾಜ್ಯದಲ್ಲಿ ಬಿಜೆಪಿಯ ಸ್ಥಾನ ಗಟ್ಟಿಯಾಗಿದೆ. ಪಕ್ಷವು ಜನರ ಸೇವೆಯನ್ನು ಮುಂದುವರೆಸಲಿದೆ. ಪಕ್ಷದ ಎಲ್ಲ ಕಾರ್ಯಕರ್ತರ ಶ್ರಮವನ್ನು ನಾನು ಗುರುತಿಸುತ್ತೇನೆ' ಎಂದಿದ್ದಾರೆ.

ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಟ್ವೀಟ್ ಮಾಡಿ, 'ಟಿಎಂಸಿ ಪಕ್ಷದ ಜಯಕ್ಕೆ ನನ್ನ ಅಭಿನಂದನೆಗಳು. ಮಮತಾ ಅವರ ಮುಂದಿನ ಆಡಳಿತ ಅವಧಿಗೆ ಶುಭ ಹಾರೈಕೆಗಳು' ಎಂದಿದ್ದಾರೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಹ ಮಮತಾ ಅವರಿಗೆ ಶುಭ ಕೋರಿದ್ದು, 'ಪಶ್ಚಿಮ ಬಂಗಾಳದಲ್ಲಿ ಪುನರಾಯ್ಕೆ ಆಗಿದ್ದಕ್ಕೆ ಅಭಿನಂದನೆಗಳು. ನಿಮ್ಮ ಮುಂದಿನ ಆಡಳಿತಾವಧಿ ಚೆನ್ನಾಗಿರಲೆಂದು ಆಶಿಸುತ್ತೇನೆ' ಎಂದಿದ್ದಾರೆ.

   ಸದ್ಯದಲ್ಲೇ ರಾಷ್ಟ್ರೀಯ ಪಕ್ಷಗಳ ವಿರುದ್ಧ JDS ಸೆಟೆದು ನಿಲ್ಲುತ್ತೆ ಅಂದ್ರು ಎಚ್ ಡಿ ಕುಮಾರಸ್ವಾಮಿ

   ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ರಾಜ್ಯಗಳ ಸಿಎಂಗಳು ಮಮತಾ ಬ್ಯಾನರ್ಜಿ ಗೆಲುವಿಗೆ ಅಭಿನಂದನೆ ಸಲ್ಲಿಸಿದ್ದಾರೆ.

   English summary
   West Bengal assembly election 2021: Narendra Modi congratulate TMC leader mamata Banerjee on election win.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X