ಪಶ್ಚಿಮ ಬಳಗಾಳ ವಿಧಾನಸಭೆ ಚುನಾವಣೆ 2026: ಟಿಎಂಸಿ-ಬಿಜೆಪಿ ನಡುವೆ ನೇರ ಪೈಪೋಟಿ

West Bengal Assembly Election 2026: ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏಪ್ರಿಲ್ 23, ಗುರುವಾರ) ಆರಂಭಗೊಂಡಿದೆ. 294 ಕ್ಷೇತ್ರಗಳ ಪೈಕಿ ಇಂದು ಅರ್ಧಕ್ಕಿಂತ ಹೆಚ್ಚು ಅಂದರೆ 152 ಸ್ಥಾನಗಳಿಗೆ ಮೊದಲ ಹಂತದ ಮತದಾನ ಆರಂಭವಾಗಿದೆ. ಹಾಗಾದ್ರೆ, ಯಾವ್ಯಾವ ಪಕ್ಷಗಳ ನಡುವೆ ನೇರಪೈಪೋಟಿ ಇದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಮೊದಲ ಹಂತದಲ್ಲಿ ಸುಮಾರು 3.60 ಕೋಟಿಗೂ ಅಧಿಕ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇದರಲ್ಲಿ 1.75 ಕೋಟಿ ಮಹಿಳಾ ಮತದಾರರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಇವರು ಕಣದಲ್ಲಿರುವ 1,478 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಬರೆಯಲಿದ್ದಾರೆ.

West Bengal Assembly Election 2026 Phase 1 Voting Begins TMC vs BJP High-Stakes Battle Know detail

ಹಿಂಸಾಚಾರದ ಮುನ್ನೆಚ್ಚರಿಕೆಯಾಗಿ ಚುನಾವಣಾ ಆಯೋಗವು ಈ ಬಾರಿ ಭಾರೀ ಪ್ರಮಾಣದ ಭದ್ರತೆ ಒದಗಿಸಿದೆ. ಸುಮಾರು 2,450 ಕಂಪನಿಗಳ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ಸಿಸಿಟಿವಿ ಕಣ್ಗಾವಲಿನಲ್ಲಿ ಚುನಾವಣೆ ನಡೆಯುತ್ತಿದೆ.

ಇಲ್ಲಿ ಟಿಎಂಸಿ ಪಕ್ಷದ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿಯ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ಅವರಂತಹ ವಿಐಪಿ ಅಭ್ಯರ್ಥಿಗಳ ಕ್ಷೇತ್ರಗಳಲ್ಲಿ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿಯ ದಿಲೀಪ್ ಘೋಷ್, ಅಗ್ನಿಮಿತ್ರಾ ಪಾಲ್ ಮತ್ತು ಕಾಂಗ್ರೆಸ್‌ನ ಪ್ರಬಲ ನಾಯಕ ಅಧೀರ್ ರಂಜನ್ ಚೌಧರಿ ಅವರ ಭವಿಷ್ಯವೂ ಇಂದು ನಿರ್ಧಾರವಾಗಲಿದೆ. ಎರಡನೇ ಹಂತದ ಮತದಾಮ ಏಪ್ರಿಲ್ 29ರಂದು ಉಳಿದ 142 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನಂತರ ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ಸೇರಿದಂತೆ ಪಶ್ಚಿಮ ಬಂಗಾಳದ ಅಂತಿಮ ಫಲಿತಾಂಶ ಮೇ 4ರಂದು ಪ್ರಕಟವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+