ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ: 8 ಹಂತಗಳಿಂದ 2ಕ್ಕೆ ಇಳಿಕೆ, ಕಾರಣ ಏನು?
West Bengal Assembly Election 2026: ಭಾರತೀಯ ಚುನಾವಣಾ ಆಯೋಗವು ಇಂದು (ಮಾರ್ಚ್ 15) ಮಹತ್ವದ ಸುದ್ದಿಗೋಷ್ಠಿ ನಡೆಸಿ, ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣಾ ದಿನಾಂಕಗಳನ್ನು ಘೋಷಿಸಿದೆ. ಇದರೊಂದಿಗೆ ಇಂದಿನಿಂದಲೇ ಈ ರಾಜ್ಯಗಳಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ಪಶ್ಚಿಮ ಬಂಗಾಳದಲ್ಲಿ ಈ ಬಾರಿ 294 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 2021ರಲ್ಲಿ ಇಲ್ಲಿ 8 ಹಂತಗಳಲ್ಲಿ ಚುನಾವಣೆ ನಡೆದಿದ್ದು ದಾಖಲೆಯಾಗಿತ್ತು. ಈ ಬಾರಿ ಹಂತಗಳನ್ನು ಗಣನೀಯವಾಗಿ ಕಡಿತಗೊಳಿಸಲಾಗಿದೆ. ಈ ಬಾರಿ ಏಪ್ರಿಲ್ 23 ಹಾಗೂ ಏಪ್ರಿಲ್ 29ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಮೇ 4ರಂದು ನಡೆಯಲಿದೆ ಎಂದು ಘೋಷಣೆ ಮಾಡಿದೆ.

ಮತದಾನ, ಫಲಿತಾಂದ ವಿವರ
* ಮೊದಲ ಹಂತ: ಏಪ್ರಿಲ್ 23, 2026
* ಎರಡನೇ ಹಂತ: ಏಪ್ರಿಲ್ 29, 2026
* ಫಲಿತಾಂಶ: ಮೇ 4, 2026
8 ಹಂತಗಳಿಂದ 2ಕ್ಕೆ ಇಳಿಕೆ; ಕಾರಣ ಏನು?
ಈ ಬಾರಿ ಪಶ್ಚಿಮ ಬಂಗಾಳದಲ್ಲಿ 8 ಹಂತಗಳಿಂದ 2 ಹಂತಕ್ಕೆ ಇಳಿಸಿರುವುದು ಅತಿ ದೊಡ್ಡ ವಿಶೇಷವಾಗಿದೆ. ಭದ್ರತಾ ದೃಷ್ಟಿಯಿಂದ ಎರಡು ಹಂತಗಳಲ್ಲಿ ಚುನಾವಣೆ ನಡೆಸಲು ಆಯೋಗ ನಿರ್ಧರಿಸಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಮೊದಲನೇ ಹಂತದ ಚುನಾವಣೆ ಏಪ್ರಿಲ್ 23ಕ್ಕೆ ನಡೆದರೆ, ಎರಡನೇ ಹಂತದ ಚುನಾವಣೆ ಏಪ್ರಿಲ್ 29ಕ್ಕೆ ನಡೆಯಲಿದೆ. ಫಲಿತಾಂಶ ಮೇ 4 ರಂದು ಘೋಷಣೆ ಮಾಡಲಿದ್ದಾರೆ. ಇಲ್ಲಿ ಒಟ್ಟು 6.44 ಕೋಟಿ ಮತದಾರರು ಇದ್ದಾರೆ ಎಂದು ತಿಳಿದುಬಂದಿದೆ.
4 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 824 ಕ್ಷೇತ್ರಗಳಲ್ಲಿ ಒಟ್ಟು 17.4 ಕೋಟಿ ಮತದಾರರು ತಮ್ಮ ಮತದಾನದ ಹಕ್ಕನ್ನು ಚಲಾಯಿಸಲಿದ್ದಾರೆ. 2.19 ಲಕ್ಷ ಮತಗಟ್ಟೆಗಳಿದ್ದು, ಮುಕ್ತ ಮತ್ತು ನ್ಯಾಯಯುತ ಚುನಾವಣೆಯನ್ನು ಖಚಿತಪಡಿಸಿಕೊಳ್ಳಲು ಒಟ್ಟು 25 ಲಕ್ಷ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ.
ಮತ್ತೊಂದೆಡೆ, ಕರ್ನಾಟಕ ಸೇರಿ 6 ರಾಜ್ಯಗಳಲ್ಲಿನ 8 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗಳೂ ನಡೆಯಲಿವೆ. ಕರ್ನಾಟಕ, ನಾಗಾಲ್ಯಾಂಡ್, ತ್ರಿಪುರಾ ಮತ್ತು ಗೋವಾ ರಾಜ್ಯಗಳಲ್ಲಿನ 5 ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪಚುನಾವಣೆ ನಡೆಯಲಿದೆ. ಉಳಿದ ರಾಜ್ಯಗಳಲ್ಲಿನ ಉಪಚುನಾವಣೆ ಏಪ್ರಿಲ್ 23ರಂದು ನಡೆಯಲಿದೆ ಎಂದು ತಿಳಿದುಬಂದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications