West Bengal Assembly Elections 2026: 15 ವರ್ಷಗಳ ಮಮತಾ ಬ್ಯಾನರ್ಜಿ ದರ್ಬಾರ್ ಮುಗಿಯಲಿದೆಯೇ, ಇಲ್ಲಿದೆ ಸಂಪೂರ್ಣ ಚಿತ್ರಣ

West Bengal Assembly Elections 2026: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ತೃಣಮೂಲ ಕಾಂಗ್ರೆಸ್ ಹಾಗೂ ಭಾರತೀಯ ಜನತಾ ಪಕ್ಷದ ನಡುವೆ ನೇರ ಹಣಾಹಣಿ ಇದೆ. ಅದರಲ್ಲೂ ಈ ಬಾರಿ ಸಾತಂತ್ರ್ಯದ ನಂತರ ದಾಖಲೆಯ ಮತದಾನವಾಗಿದೆ. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಮೊದಲ ಹಂತದ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದ್ದು, ಎರಡನೇ ಹಂತದ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ವಿಧಾನಸಭಾ ಕ್ಷೇತ್ರಗಳಿವೆ. ಅದರಲ್ಲಿ ಏಪ್ರಿಲ್ 23 ರಂದು ಮೊದಲ ಹಂತದಲ್ಲಿ 152 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಏಪ್ರಿಲ್ 29ರ ಬುಧವಾರ 142 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಹೆಚ್ಚಾಗಿ ಆಡಳಿತಾರೂಢ ಟಿಎಂಸಿ ಮತ್ತು ಬಿಜೆಪಿ ನಡುವಿನ ಸ್ಪರ್ಧೆ ಏರ್ಪಟ್ಟಿದೆ. ಯಾರೇ ಅಧಿಕಾರಕ್ಕೆ ಬಂದರೂ ಅದು ಹೊಸ ದಾಖಲೆ ಆಗಲಿದೆ.

West Bengal Assembly Elections 2026

ಮಮತಾ ಬ್ಯಾನರ್ಜಿ 15 ವರ್ಷಗಳ ಆಡಳಿತ

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದ್ದ ಮಮತಾ ಬ್ಯಾನರ್ಜಿ ಅವರು ಸತತ ಮೂರು ಬಾರಿ ಅಂದರೆ ಸುದೀರ್ಘ 15 ವರ್ಷಗಳಿಂದ ಪಶ್ಚಿಮ ಬಂಗಾಳದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದ ಮಮತಾ ಬ್ಯಾನರ್ಜಿ ಅವರು, ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸ್ಥಾಪಿಸಿದ್ದರು. ಇನ್ನು ಮಮತಾ ಬ್ಯಾನರ್ಜಿ ಅವರು ಸತತ ಮೂರು ಬಾರಿ (2011, 2016, ಮತ್ತು 2021) ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿದ್ದಾರೆ. ಮಮತಾ ಗೆಲುವು ಸಿಪಿಐ(ಎಂ) ನೇತೃತ್ವದ ಎಡರಂಗದ 34 ವರ್ಷಗಳ ಸುದೀರ್ಘ ಆಳ್ವಿಕೆಯನ್ನು ಕೊನೆಗೊಳಿಸಿತು. ಇದಾದ ನಂತರ ಮೂರು ಅವಧಿಗೆ ಮಮತಾ ದರ್ಬಾರ್ ಮುಂದುವರಿದಿದೆ. ಈ ದಾಖಲೆಯನ್ನು ಮುರಿಯುವ ಪ್ರಯತ್ನದಲ್ಲಿ ಬಿಜೆಪಿ ಇದೆ. ಎಡರಂಗ ಅಥವಾ ಎಡಪಂಥೀಯ ಪಕ್ಷದ ಪ್ರಭಾವ ಇತ್ತೀಚಿನ ವರ್ಷಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ತುಸು ಇಳಿಕೆಯಾಗಿದೆ.

ಈ ಬಾರಿಯ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹೇಗಿದೆ

ಪಶ್ವಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಹೆಚ್ಚು ಚರ್ಚೆಯಾದ ವಿಷಯವೆಂದರೆ, ಟಿಎಂಸಿ ಪಕ್ಷವು ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ, ಭಾರತೀಯ ಚುನಾವಣಾ ಆಯೋಗವು ಬಿಜಪಿ ಪರವಾಗಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದ್ದರೆ. ಬಿಜೆಪಿಯು ಪಶ್ಚಿಮ ಬಂಗಾಳದಲ್ಲಿ ಟಿಎಂಸಿಯ ದುರಾಡಳಿತ ಮುಂದುವರಿದಿದೆ.

ಮಹಿಳೆಯರಿಗೆ ರಕ್ಷಣೆ ಇಲ್ಲ - ಅಭಿವೃದ್ಧಿ ಇಲ್ಲ ಎಂದು ಆರೋಪಿಸಿತ್ತು. ಬಿಜೆಪಿ ಹಾಗೂ ಟಿಎಂಸಿ ನಡುವೆ ಈ ಬಾರಿ ಹೆಚ್ಚು ಚರ್ಚೆ ಆಗಿರುವ ವಿಚಾರವೆಂದರೆ ಅದು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (Special Intensive Revision - SIR) - ಬಂಗಾಳಕ್ಕೆ ಅಕ್ರಮ ವಲಸಿಗರು ಬರುತ್ತಿದ್ದಾರೆ ಎನ್ನುವುದು. ಇದರೊಂದಿಗೆ ಹಿಂದೂ - ಮುಸ್ಲಿಂ ವಿಚಾರವೂ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚು ಚರ್ಚೆ ಆಗಿದೆ.

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೋಮವಾರ ಪ್ರಚಾರ ಕೊನೆಗೊಂಡಿದೆ. ಏಪ್ರಿಲ್ 29 ಎರಡನೇ ಹಂತದ ವಿಧಾನಸಭೆ ಚುನಾವಣೆ ನಡೆಯಲಿದೆ. ಬುಧವಾರ 142 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಏಪ್ರಿಲ್ 23 ರಂದು 152 ಸ್ಥಾನಗಳಿಗೆ ಮೊದಲ ಹಂತ ನಡೆದಿತ್ತು. ಪಶ್ಚಿಮ ಬಂಗಾಳದಲ್ಲಿ ಒಟ್ಟು 294 ವಿಧಾನಸಭಾ ಕ್ಷೇತ್ರಗಳಿದ್ದು, ಈ ರಾಜ್ಯದ ಮ್ಯಾಜಿಕ್ ನಂಬರ್ 148 ಆಗಿದೆ.

Tamilnadu Election 2026: ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಸಂಕಷ್ಟ - ಯಾರು ಬಂದರೂ ಲಾಭವಿಲ್ಲ ಯಾಕೆ
Tamilnadu Election 2026: ತಮಿಳುನಾಡಿನಲ್ಲಿ ಡಿಎಂಕೆ ಅಧಿಕಾರಕ್ಕೆ ಬಂದರೆ ಕರ್ನಾಟಕಕ್ಕೆ ಸಂಕಷ್ಟ - ಯಾರು ಬಂದರೂ ಲಾಭವಿಲ್ಲ ಯಾಕೆ

West Bengal Assembly Elections 2026: ದಾಖಲೆಯ ಮತದಾನ

ಇನ್ನು ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಮೊದಲ ಹಂತದಲ್ಲಿ ದಾಖಲೆಯ ಮತದಾನವಾಗಿದೆ. ಪಶ್ಚಿಮ ಬಂಗಾಳದ ಇತಿಹಾಸದಲ್ಲೇ ಈ ಬಾರಿ ದಾಖಲೆಯ ಮತದಾನವಾಗಿದೆ. ರಾಜ್ಯದ ಇತಿಹಾಸದಲ್ಲೇ ದಾಖಲೆಯ ಶೇ.93.19ರಷ್ಟು ಮತದಾನವಾಗಿದೆ. ಮೊದಲ ಹಂತದಲ್ಲಿ 3.36 ಕೋಟಿ ಮತದಾರರು ಮತ ಚಲಾಯಿಸಿದ್ದಾರೆ. ಮತಚಲಾಯಿಸಿದವರಲ್ಲಿ 1.65 ಕೋಟಿ ಮಹಿಳೆಯರು ಹಾಗೂ 1.71 ಕೋಟಿ ಪುರುಷರು ಇದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+