ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಕುರಿತು ಪ್ರಧಾನಿ ಮೋದಿ ಸಭೆಗೆ ಮಮತಾ ಬ್ಯಾನರ್ಜಿ ಗೈರು

|
Google Oneindia Kannada News

ನವದೆಹಲಿ, ಏಪ್ರಿಲ್ 23: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಎರಡನೇ ಅಲೆಯಿಂದ ಸೃಷ್ಟಿಯಾಗಿರುವ ಆತಂಕಕಾರಿ ಪರಿಸ್ಥಿತಿ ಕುರಿತು ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸಿದ ಸಭೆಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಗೈರು ಹಾಜರಾಗಿದ್ದರು ಎಂದು ತಿಳಿದು ಬಂದಿದೆ.

ಶುಕ್ರವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲ್ಫಾನೋ ಬಂಡೋಪಾಧ್ಯಾಯ ಪಶ್ಚಿಮ ಬಂಗಾಳವನ್ನು ಪ್ರತಿನಿಧಿಸಿದ್ದಾರೆ ಎಂದು ಗೊತ್ತಾಗಿದೆ.

Explained: ಕುಟುಂಬದಲ್ಲಿ ಒಬ್ಬರಿಗೆ ಕೊರೊನಾ ಅಂಟಿದರೆ ಉಳಿದವರ ಕಥೆ!?Explained: ಕುಟುಂಬದಲ್ಲಿ ಒಬ್ಬರಿಗೆ ಕೊರೊನಾ ಅಂಟಿದರೆ ಉಳಿದವರ ಕಥೆ!?

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈ ಹಿಂದೆಯೂ ನಡೆದ ಹಲವು ಸಭೆಗಳಲ್ಲಿ ಗೈರಾಗಿದ್ದರು. ರಾಜ್ಯದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಯಲ್ಲೇ ಅವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

West Bengal CM Mamata Banerjee Skips PM Modis Corona Meeting With CMs

ಪಶ್ಚಿಮ ಬಂಗಾಳದಲ್ಲಿ 6 ಸದಸ್ಯರ ಕಾರ್ಯಪಡೆ:

ಪಶ್ಚಿಮ ಬಂಗಾಳದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಮತ್ತು ಅದರ ಪ್ರಭಾವದ ಬಗ್ಗೆ ಅವಲೋಕನ ಮತ್ತು ಪರಿಶೀಲನೆ ನಡೆಸುವುದಕ್ಕೆ ವಿಶೇಷ ಕಾರ್ಯಪಡೆಯನ್ನು ರಚಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಅಲ್ಫಾನೋ ಬಂಡೋಪಾಧ್ಯಾಯ ನೇತೃತ್ವದ ತಂಡದಲ್ಲಿ ಆರು ಮಂದಿ ಸದಸ್ಯರಿದ್ದಾರೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಒಟ್ಟು 7,00,904 ಕೊವಿಡ್-19 ಸೋಂಕಿತ ಪ್ರಕರಣಗಳು ವರದಿಯಾಗಿದ್ದು, 10,766 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

English summary
West Bengal CM Mamata Banerjee Skips PM Modi's Corona Meeting With CMs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X