ಪಶ್ಚಿಮ ಬಂಗಾಳಕ್ಕೆ ಕೇಂದ್ರ ಪಡೆಗಳ ಎಂಟ್ರಿ, ಚುಣಾವಣೆಗೆ ಮೊದಲೇ ಭಾರಿ ಭದ್ರತೆ | West Bengal Election
ಚುನಾವಣೆ ಸದ್ದು ಮತ್ತೆ ಆರಂಭ ಆಗಲಿದ್ದು, ದೇಶದಲ್ಲಿ ಇನ್ನೇನು ಕೆಲವೇ ಕೆಲವು ದಿನಗಳಲ್ಲಿ ಒಟ್ಟು 4 ರಾಜ್ಯಗಳೂ ಸೇರಿದಂತೆ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆಗೆ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳ ರಾಜ್ಯದಲ್ಲಿ ಹೊಸ ಆಟ ಶುರುವಾಗಿದ್ದು, ಇನ್ನೇನು ಈ ರಾಜ್ಯದ ವಿಧಾನಸಭೆಯ ಚುನಾವಣೆಗೆ ಕೆಲ ದಿನಗಳು ಬಾಕಿ ಉಳಿದಿವೆ. ಅಧಿಕೃತವಾಗಿ ಚುನಾವಣೆ ದಿನಾಂಕ ಘೋಷಿಸಲು ಕೂಡ ಸಿದ್ಧತೆ ಸಾಗಿದ್ದು, ಇದಕ್ಕಾಗಿ ರಾಜಕೀಯ ನಾಯಕರು ಕಾಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದಿಢೀರ್ ಪಶ್ಚಿಮ ಬಂಗಾಳಕ್ಕೆ ಕೇಂದ್ರ ಪಡೆಗಳು ಎಂಟ್ರಿ ಕೊಡುತ್ತಿವೆ, ಹಾಗಾದ್ರೆ ಇದಕ್ಕೆ ಕಾರಣ ಏನು? ತಿಳಿಯೋಣ ಬನ್ನಿ.
ಅಂದಹಾಗೆ, ಪಶ್ಚಿಮ ಬಂಗಾಳ ಮೊದಲೇ ಸೂಕ್ಷ್ಮ ರಾಜ್ಯವಾಗಿದೆ. ಪಶ್ಚಿಮ ಬಂಗಾಳದ ಚುನಾವಣೆಗೆ ಸಕಲ ಸಿದ್ಧತೆ ಸಾಗಿದೆ. ಅದರಲ್ಲೂ ಈ ಬಾರಿ ಬಿಜೆಪಿ ನೇತೃತ್ವದ ಎನ್ಡಿಎ ಹಾಗೂ ಟಿಎಂಸಿ ನಡುವೆ ದೊಡ್ಡ ರಾಜಕೀಯ ಕದನ ಗ್ಯಾರಂಟಿ ಆಗಿದ್ದು, ಸೋಲು & ಗೆಲುವಿನ ಲೆಕ್ಕಾಚಾರ ಜೋರಾಗುತ್ತಿದೆ. ಇದೇ ಸಮಯದಲ್ಲಿ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ದಿಢೀರ್ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ 480 ತುಕಡಿಗಳನ್ನು ಮಾರ್ಚ್ 1 ರಿಂದಲೇ ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಿಯೋಜಿಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಕ್ರಮ ಕೈಗೊಂಡಿದೆ.

2 ಹಂತದಲ್ಲಿ ಭದ್ರತಾ ಸಿಬ್ಬಂದಿ ಆಗಮನ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಸಮಯದಲ್ಲಿ ಪದೇ ಪದೇ ಶಾಂತಿ ಕದಡುವ ಪ್ರಯತ್ನಗಳು ನಡೆಯುತ್ತವೆ ಎಂಬ ಆರೋಪ ಇದೆ. ಅದರಲ್ಲೂ 2026 ಚುನಾವಣೆ ಜಿದ್ದಾಜಿದ್ದಿನ ಅಖಾಡವಾಗಿದೆ, ಇದೇ ಕಾರಣಕ್ಕೆ ಪರಿಸ್ಥಿತಿ ಸೂಕ್ಷ್ಮವಾಗಿದೆ. ಹೀಗಾಗಿ ಪಶ್ಚಿಮ ಬಂಗಾಳದ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವ ಕಾರಣಕ್ಕೆ ಮುಂದಿನ ಸೋಮವಾರ, ಎಂದರೆ ಮಾರ್ಚ್ 1 ರಿಂದ ಮೊದಲ ತಂಡದ 240 ಕೇಂದ್ರ ತುಕಡಿಗಳನ್ನ ಭದ್ರತೆಗಾಗಿ ನಿಯೋಜನೆ ಮಾಡಲು ಇದೀಗ ನಿರ್ಧಾರ ಮಾಡಲಾಗಿದೆ. ಇನ್ನು ಆ ನಂತರ ಮಾ. 10ಕ್ಕೆ 2ನೇ ಹಂತದಲ್ಲಿ 240 ಕೇಂದ್ರ ತುಕಡಿಗಳನ್ನ ನಿಯೋಜನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.
ಫೆಬ್ರವರಿ 28ಕ್ಕೆ ಮತದಾರರ ಅಂತಿಮ ಪಟ್ಟಿ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಹಿನ್ನೆಲೆ ನಿಯೋಜನೆ ಆಗುತ್ತಿರುವ ಕೇಂದ್ರ ತುಕಡಿಗಳಲ್ಲಿ, ಕೇಂದ್ರ ಮೀಸಲು ಪೊಲೀಸ್ ಪಡೆಯೂ ಸೇರಿದಂತೆ, ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮತ್ತು ಇಂಡೊ-ಟಿಬೆಟಿಯನ್ ಗಡಿ ಪೊಲೀಸ್ ಮತ್ತು ಸಶಸ್ತ್ರ ಬಲದ ಸಿಬ್ಬಂದಿ ಇರಲಿದ್ದಾರೆ. ಈ ಮೂಲಕ ಚುನಾವಣಾ ಪ್ರಕ್ರಿಯೆ ಸುಗಮವಾಗಿ ನಡೆಯಲು, ಯಾವುದೇ ರೀತಿಯ ಅಶಾಂತಿ ಸೃಷ್ಟಿಸದ ರೀತಿ ಕ್ರಮ ಕೈಗೊಳ್ಳಲು ಇದೀಗ ಅಧಿಕಾರಿಗಳು ಮುಂದಾಗಿದ್ದಾರೆ. ಹೀಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂದ್ರೆ ಎಸ್ಐಆರ್ ನಂತರ, ಫೆಬ್ರವರಿ 28ಕ್ಕೆ ಮತದಾರರ ಅಂತಿಮ ಪಟ್ಟಿ ಪ್ರಕಟವಾಗುವ ನಿರೀಕ್ಷೆ ಇದೆ. ಜೊತೆಗೆ ಮಾರ್ಚ್ ತಿಂಗಳಲ್ಲಿ ಚುನಾವಣೆ ದಿನಾಂಕವೂ ಪ್ರಕಟವಾಗಲಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications