Mamata Banerjee: ಮತ ಎಣಿಕೆ ಕೇಂದ್ರದಲ್ಲಿ ನನ್ನ ಮೇಲೆ ಹಲ್ಲೆ ನಡೆದಿದೆ: ಮಮತಾ ಬ್ಯಾನರ್ಜಿ ಗಂಭೀರ ಆರೋಪ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ವೇಳೆ ನಾಟಕೀಯ ಬೆಳವಣಿಗೆಗಳು ಕಂಡುಬಂದಿವೆ. ಟಿಎಂಸಿ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ ಎಣಿಕೆಯಲ್ಲಿ ಅಕ್ರಮ ನಡೆಯುತ್ತಿದೆ ಮತ್ತು ತಮ್ಮ ಮೇಲೆ ದೈಹಿಕ ಹಲ್ಲೆ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶವು ಅಂತಿಮ ಹಂತ ತಲುಪುತ್ತಿರುವಂತೆಯೇ ರಾಜಕೀಯ ಹೈಡ್ರಾಮಾ ಶುರುವಾಗಿದೆ. ರಾಜ್ಯದಲ್ಲಿ ಬಿಜೆಪಿ ಭರ್ಜರಿ ಜಯದತ್ತ ಮುನ್ನಡೆಯುತ್ತಿದ್ದರೆ, ಇತ್ತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಚುನಾವಣಾ ಪ್ರಕ್ರಿಯೆಯ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಿಜೆಪಿ ಸುಮಾರು 100ಕ್ಕೂ ಹೆಚ್ಚು ಸ್ಥಾನಗಳನ್ನು ಲೂಟಿ ಮಾಡಿದೆ ಎಂದು ಆರೋಪಿಸಿರುವ ಅವರು, ಈ ಗೆಲುವನ್ನು "ಅನೈತಿಕ ಮತ್ತು ಕಾನೂನುಬಾಹಿರ" ಎಂದು ಕರೆದಿದ್ದಾರೆ. ಚುನಾವಣಾ ಆಯೋಗವು ಸಂಪೂರ್ಣವಾಗಿ ಬಿಜೆಪಿಯ ಕೈಗೊಂಬೆಯಂತೆ ವರ್ತಿಸುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

West Bengal

ಸಿಸಿಟಿವಿ ಕ್ಯಾಮೆರಾ ಆಫ್ ಆಗಿತ್ತು

ಮತ ಎಣಿಕೆ ಕೇಂದ್ರದಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಆಕ್ರೋಶ ಹೊರಹಾಕಿರುವ ಮಮತಾ, ಮಧ್ಯಾಹ್ನ 3 ಗಂಟೆಯ ನಂತರ ವ್ಯವಸ್ಥಿತವಾಗಿ ಹಿಂಸಾಚಾರ ನಡೆಸಲಾಗಿದೆ ಎಂದು ದೂರಿದ್ದಾರೆ. ನನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ, ಮತ ಎಣಿಕೆ ಕೇಂದ್ರದ ಸಿಸಿಟಿವಿ ಕ್ಯಾಮೆರಾಗಳನ್ನು ಆಫ್ ಮಾಡಲಾಗಿತ್ತು ಮತ್ತು ನಮ್ಮ ಪಕ್ಷದ ಏಜೆಂಟರನ್ನು ಒಳಗೆ ಪ್ರವೇಶಿಸಲು ಬಿಡಲಿಲ್ಲ ಎಂದು ಅವರು ಹೇಳಿದ್ದಾರೆ. ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಮತಾ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಇಡೀ ಪ್ರಕ್ರಿಯೆಯಲ್ಲಿ ಕೇಂದ್ರ ಪಡೆಗಳು ಮತ್ತು ಪ್ರಧಾನಿ ಹಾಗೂ ಗೃಹ ಸಚಿವರ ಪಾತ್ರ ಕಾನೂನುಬಾಹಿರವಾಗಿದೆ ಎಂದು ಆರೋಪಿಸಿದ್ದಾರೆ.

ಸ್ಟಾಲಿನ್ ಭದ್ರಕೋಟೆ ಧೂಳಿಪಟ: ತಮಿಳುನಾಡು ಸಿಎಂಗೆ ಸೋಲುಣಿಸಿದ ಟಿವಿಕೆ ಅಭ್ಯರ್ಥಿ ವಿ.ಎಸ್.ಬಾಬು ಯಾರು?
ಸ್ಟಾಲಿನ್ ಭದ್ರಕೋಟೆ ಧೂಳಿಪಟ: ತಮಿಳುನಾಡು ಸಿಎಂಗೆ ಸೋಲುಣಿಸಿದ ಟಿವಿಕೆ ಅಭ್ಯರ್ಥಿ ವಿ.ಎಸ್.ಬಾಬು ಯಾರು?

ಪ್ರಸ್ತುತ ಲಭ್ಯವಿರುವ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಐತಿಹಾಸಿಕ ವಿಜಯದತ್ತ ಸಾಗುತ್ತಿದ್ದು, ಸುಮಾರು 204 ಸ್ಥಾನಗಳಲ್ಲಿ ಮುನ್ನಡೆ ಅಥವಾ ಗೆಲುವು ಸಾಧಿಸಿದೆ. ಕಳೆದ 15 ವರ್ಷಗಳಿಂದ ರಾಜ್ಯವನ್ನಾಳುತ್ತಿದ್ದ ತೃಣಮೂಲ ಕಾಂಗ್ರೆಸ್ ಕೇವಲ 81 ಸ್ಥಾನಗಳಿಗೆ ಸೀಮಿತವಾಗಿದೆ.

ಸ್ವತಃ ಮಮತಾ ಬ್ಯಾನರ್ಜಿ ಅವರೇ ಭವಾನಿಪುರ ಕ್ಷೇತ್ರದಲ್ಲಿ ತಮ್ಮ ಎದುರಾಳಿ ಸುವೇಂದು ಅಧಿಕಾರಿ ವಿರುದ್ಧ ಕೇವಲ 3,830 ಮತಗಳ ಅತ್ಯಲ್ಪ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ. ದಶಕಗಳ ಕಾಲ ಕಾಂಗ್ರೆಸ್ ಮತ್ತು ಎಡಪಕ್ಷಗಳ ಭದ್ರಕೋಟೆಯಾಗಿದ್ದ ಬಂಗಾಳದಲ್ಲಿ ಬಿಜೆಪಿ ಅಧಿಕಾರದತ್ತ ಹೆಜ್ಜೆ ಹಾಕಿರುವುದು ಭಾರತೀಯ ರಾಜಕಾರಣದ ದೊಡ್ಡ ಬದಲಾವಣೆಯ ಮುನ್ಸೂಚನೆ ನೀಡಿದೆ.

ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಬಂಗಾಳ ಸೇರಿ ವಿವಿಧ ರಾಜ್ಯಗಳ ಈ ಗೆಲುವನ್ನು ಸಂಭ್ರಮಿಸಿದ್ದು, ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸಿದ್ದಾರೆ. ನಿತಿನ್ ನಬಿನ್ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಂತರ ಎದುರಿಸಿದ ಮೊದಲ ಚುನಾವಣೆಯಲ್ಲೇ ಪಕ್ಷಕ್ಕೆ ಅಭೂತಪೂರ್ವ ಯಶಸ್ಸು ಸಿಕ್ಕಿದೆ ಎಂದು ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಶ್ಚಿಮ ಬಂಗಾಳ ಮಾತ್ರವಲ್ಲದೆ ಅಸ್ಸಾಂ, ಪುದುಚೇರಿ ಮತ್ತು ವಿವಿಧ ರಾಜ್ಯಗಳ ಉಪಚುನಾವಣೆಗಳಲ್ಲೂ ಬಿಜೆಪಿ ಪ್ರಾಬಲ್ಯ ಮೆರೆದಿದೆ. ಇಷ್ಟೆಲ್ಲಾ ಸವಾಲುಗಳ ನಡುವೆಯೂ ನಾವು ಮತ್ತೆ ಪುಟಿದೇಳುತ್ತೇವೆ ಎಂದು ಮಮತಾ ಬ್ಯಾನರ್ಜಿ ತಮ್ಮ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+