West Bengal Elections 2026: ಪಶ್ಚಿಮ ಬಂಗಾಳ: ಮೊದಲ ಹಂತದಲ್ಲಿ ಶೇ. 91.46ರಷ್ಟು ಮತದಾನ; ಇತಿಹಾಸದಲ್ಲೇ ಮೊದಲು

West Bengal Elections 2026: ಪಶ್ವಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದೆ. ಪಶ್ಚಿಮ ಬಂಗಾಳದ ವಿಧಾನಸಭೆಯು ಒಟ್ಟು 294 ಸ್ಥಾನಗಳನ್ನು ಹೊಂದಿದ್ದು, ಮೊದಲ ಹಂತದಲ್ಲಿ ಏಪ್ರಿಲ್ 23ರ ಗುರುವಾರ 152 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮೊದಲ ಹಂತದಲ್ಲಿ ಸಂಜೆ 5 ಗಂಟೆಯವರೆಗೆ 3.60 ಕೋಟಿ ಮತದಾರರಲ್ಲಿ ಶೇ. 89.93% ರಷ್ಟು ಜನರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಮೂಲಕ ಪಶ್ವಿಮ ಬಂಗಾಳದಲ್ಲಿ ಭರ್ಜರಿ ಮತದಾನ ನಡೆದಿದೆ.

ಪಶ್ವಿಮ ಬಂಗಾಳದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳ ಸಂದರ್ಭದಲ್ಲೂ ಗಲಾಟೆ, ಹಿಂಸಾಚಾರ ಸಂಭವಿಸುವುದು ಇದೆ. ಇದೀಗ ಮೊದಲ ಹಂತದ ವಿಧಾನಸಭೆ ಚುನಾವಣೆಯಲ್ಲೂ ಅಲ್ಲಲ್ಲಿ ಅಹಿತಕರ ಘಟನೆಗಳು ನಡೆದಿರುವುದು ವರದಿಯಾಗಿದೆ. ಈ ರಾಜ್ಯದಲ್ಲಿ ಒಟ್ಟು 294 ವಿಧಾನಸಭಾ ಕ್ಷೇತ್ರಗಳಿದ್ದು, 152 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಿತು. ಒಟ್ಟು 1,478 ಅಭ್ಯರ್ಥಿಗಳ ಚುನಾವಣಾ ಭವಿಷ್ಯ ಇಂದು ನಿರ್ಧಾರವಾಗಿದೆ. ಪಶ್ವಿಮ ಬಂಗಾಳದ ಜಾರ್ಗ್ರಾಮ್ ಎನ್ನುವಲ್ಲಿ ಶೇ. 90.53% ಮತದಾನ ಆಗಿದೆ. ಕಾಲಿಂಪಾಂಗ್ ಎಂಬಲ್ಲಿ ಶೇ. 81.98% ಮತ್ತು ಮಾಲ್ಡಾ ಶೇ 89.56% ಮತದಾನ ಆಗಿರುವುದು ವರದಿಯಾಗಿದೆ. ಮೊದಲ ಹಂತದಲ್ಲಿ 16 ಜಿಲ್ಲೆಗಳಲ್ಲಿ ಮತದಾನ ನಡೆದಿದ್ದು, ಒಟ್ಟು ಶೇ.78% ಕ್ಕಿಂತ ಹೆಚ್ಚು ಮತದಾನ ಆಗಿರುವುದು ವರದಿಯಾಗಿದೆ.

West Bengal Elections 2026

West Bengal Elections 2026: ವಿವಿಧ ಭಾಗಗಳಲ್ಲಿ ಅಹಿತಕರ ಘಟನೆ

ಪಶ್ವಿಮ ಬಂಗಾಳದ ವಿವಿಧ ಭಾಗಗಳಲ್ಲಿ ಅಹಿತಕರ ಘಟನೆ ನಡೆದಿರುವುದು ವರದಿಯಾಗಿದೆ. ಬಿಜೆಪಿ ಅಭ್ಯರ್ಥಿ ಅಗ್ನಿಮಿತ್ರ ಪಾಲ್ ಅವರು ಇಲ್ಲಿನ ಅಸನ್ಸೋಲ್ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಲ್ಲಿನ ರಹಮತ್ ನಗರ ಬಳಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಾರ್‌ನ ಹಿಂಭಾಗದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಮಾರ್‌ಗಂಜ್‌ನ ಮತ್ತೊಬ್ಬ ಬಿಜೆಪಿ ಅಭ್ಯರ್ಥಿ ಸುಭೇಂದು ಸರ್ಕಾರ್ ಅವರು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಕಾರ್ಯಕರ್ತರು ತಮ್ಮ ಮೇಲೆ ದಾಳಿ ಮಾಡಿ ತಮ್ಮ ಕಾರನ್ನು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಆಮ್ ಜನತಾ ಉನ್ನಯನ್ ಪಕ್ಷದ (ಎಯುಜೆಪಿ) ಸಂಸ್ಥಾಪಕ ಹುಮಾಯೂನ್ ಕಬೀರ್ ಆ ಪ್ರದೇಶಕ್ಕೆ ಆಗಮಿಸಿದಾಗ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದರಿಂದ ಮುರ್ಷಿದಾಬಾದ್ ಪ್ರದೇಶದಲ್ಲಿ ಘರ್ಷಣೆ ಭುಗಿಲೆದ್ದಿತು. ಮುರ್ಷಿದಾಬಾದ್ ಜಿಲ್ಲೆಯ ಡೊಮ್ಕಲ್‌ನಲ್ಲಿ ಹಲವರನ್ನು ಮತ ಚಲಾಯಿಸದಂತೆ ತಡೆಯಲಾಗಿದೆ ಎಂಬ ಆರೋಪ ಕೇಳಿ ಬಂದಿದ್ದು, ಭಾರತೀಯ ಚುನಾವಣಾ ಆಯೋಗ (ಇಸಿಐ) ಅಧಿಕಾರಿಗಳಿಂದ ವರದಿ ಕೇಳಿದೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದ ಎರಡನೇ ಹಂತದ ಚುನಾವಣೆ

ಪಶ್ವಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆ - ಮತದಾನ ಪ್ರಕ್ರಿಯೆಯು ಏಪ್ರಿಲ್ 29 ರಂದು ನಡೆಯಲಿದೆ. ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ 142 ಸ್ಥಾನಗಳಿಗೆ ಮತದಾನ ನಡೆಯಲಿದೆ. ಮೇ 4 ರಂದು ಪಶ್ವಿಮ ಬಂಗಾಳದ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಪಶ್ಚಿಮ ಬಂಗಾಳದಲ್ಲೂ ದಾಖಲೆಯ ಮತದಾನ

ಇನ್ನು ಪಶ್ಚಿಮ ಬಂಗಾಳದಲ್ಲೂ ದಾಖಲೆಯ ಮತದಾನವಾಗಿದೆ. ಪಶ್ಚಿಮ ಬಂಗಾಳದಲ್ಲಿ ಇತಿಹಾಸದಲ್ಲೇ ದೊಡ್ಡ ಮಟ್ಟದ ಮತದಾನವಾಗಿದೆ. ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23ರ ಗುರುವಾರ ಬರೋಬ್ಬರಿ ಶೇ. 91.46ರಷ್ಟು ಮತದಾನವಾಗಿದೆ. ಇದು ಸ್ವಾತಂತ್ರ್ಯ ಈ ರಾಜ್ಯದಲ್ಲಿ ದಾಖಲಾದ ಗರಿಷ್ಠ ಮತದಾನ ಪ್ರಮಾಣವಾಗಿದೆ ಎಂದು ಹೇಳಲಾಗಿದೆ. ಈ ಬಾರಿ ತಮಿಳುನಾಡು - ಪಶ್ಚಿಮ ಬಂಗಾಳ ಎರಡೂ ರಾಜ್ಯದಲ್ಲೂ ಯುವ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿರುವುದು ವಿಶೇಷವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+