• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಸುಪ್ರೀಂಕೋರ್ಟ್ ಸಲಹೆಗಳೇನು?

|
Google Oneindia Kannada News

ನವದೆಹಲಿ, ನವೆಂಬರ್ 15: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ನೌಕರರಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಬೇಕು. ನವದೆಹಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ರೈತರು ಬೆಳೆಯ ನಂತರ ಅದರ ಹುಲ್ಲು ಸುಡದಿರುವಂತೆ ಮುನ್ನೆಚ್ಚರಿಕೆ ವಹಿಸಬೇಕು. ಆ ಮೂಲಕ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸುವುದಕ್ಕೆ ಸಾಧ್ಯ ಎಂದು ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

ನವದೆಹಲಿಯಲ್ಲಿ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿಯು ಒದಗಿಸಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾನುವಾರ 4 ಗಂಟೆಗೆ ಹೊತ್ತಿಗೆ 36 ಮೇಲ್ವಿಚಾರಣಾ ಕೇಂದ್ರಗಳಿಂದ ಪಡೆದ ಮಾಹಿತಿ ಆಧಾರದಲ್ಲಿ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) 330 ಆಗಿದೆ.

ವಾಯುಮಾಲಿನ್ಯ ನಿಯಂತ್ರಿಸಲು ದೆಹಲಿ ಲಾಕ್‌ಡೌನ್ ಕುರಿತು ಸುಪ್ರೀಂಕೋರ್ಟ್‌ಗೆ ವರದಿವಾಯುಮಾಲಿನ್ಯ ನಿಯಂತ್ರಿಸಲು ದೆಹಲಿ ಲಾಕ್‌ಡೌನ್ ಕುರಿತು ಸುಪ್ರೀಂಕೋರ್ಟ್‌ಗೆ ವರದಿ

ಶನಿವಾರ ಇದೇ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) ಪ್ರಮಾಣ 437 ಆಗಿದ್ದು, ಶುಕ್ರವಾರ 471ರ ಗಡಿ ತಲುಪಿದ್ದು, ಹೊಸ ದಾಖಲೆಯಾಗಿತ್ತು. ಮಾಲಿನ್ಯಕಾರಕಗಳನ್ನು ಚದುರಿಸುವ ಗಾಳಿಯ ವೇಗ ಹೆಚ್ಚಾಗಿದ್ದರಿಂದ ಗಾಳಿ ಗುಣಮಟ್ಟದಲ್ಲಿ ಸುಧಾರಣೆ ಕಂಡು ಬಂದಿದೆ. ನೆರೆಯ ಗಾಜಿಯಾಬಾದ್ 331, ಗುರ್ಗಾಂವ್ 287, ನೋಯ್ಡಾ 321, ಫರಿದಾಬಾದ್ 298, ಗ್ರೇಟರ್ ನೋಯ್ಡಾದಲ್ಲಿ 310 ವಾಯು ಗುಣಮಟ್ಟ ಸೂಚ್ಯಂಕ ದಾಖಲಾಗಿದೆ. ಈ ಮಧ್ಯೆ ಸುಪ್ರೀಂಕೋರ್ಟ್ ನೀಡಿರುವ ಪ್ರಮುಖ ಸೂಚನೆಗಳೇನು ಎಂಬುದನ್ನು ಮುಂದೆ ನೋಡೋಣ.

ಸುಪ್ರೀಂಕೋರ್ಟ್ ನೀಡಿದ ಪ್ರಮುಖ ಸೂಚನೆಗಳು:

* ವಿಷಕಾರಿ ಹೊಗೆಯನ್ನು ಕಡಿಮೆ ಮಾಡಲು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಲು ಮಂಗಳವಾರ ರಾಜ್ಯಗಳು ಮತ್ತು ಇತರ ಅಧಿಕಾರಿಗಳ ತುರ್ತು ಸಭೆಯನ್ನು ಕರೆಯುವಂತೆ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತು ಮತ್ತು ಮರುದಿನ ಈ ವಿಷಯವನ್ನು ಮತ್ತೆ ಆಲಿಸುವುದಾಗಿ ಹೇಳಿದೆ.

* ದೆಹಲಿಯಲ್ಲಿ ವಾಯುಮಾಲಿನ್ಯ ಬಿಕ್ಕಟ್ಟು ನಿವಾರಿಸುವ ದೃಷ್ಟಿಯಲ್ಲಿ ದೀರ್ಘಾವಧಿ ಗುರಿಗಳಿಗಿಂತ ತುರ್ತು ಕ್ರಮಗಳು ಮುಖ್ಯವಾಗಿರುತ್ತವೆ ಎಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಖಡಕ್ ಸೂಚನೆ ನೀಡಿದೆ.

* ಕೃಷಿಕರು ಸುಡುವ ಕಸದಿಂದ ವರ್ಷದಲ್ಲಿ ಸರಾಸರಿ ಶೇಕಡಾ 10 ರಷ್ಟು ವಾಯು ಮಾಲಿನ್ಯ ಸಂಭವಿಸುತ್ತದೆ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

* ವಿಚಾರಣೆಯ ಮೊದಲು ಸಲ್ಲಿಸಿದ ಅಫಿಡವಿಟ್‌ನಲ್ಲಿ, ವಾಯು ಮಾಲಿನ್ಯದ ವಿರುದ್ಧ ಹೋರಾಡಲು ಸಂಪೂರ್ಣ ಲಾಕ್‌ಡೌನ್‌ನಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಿದ್ಧವಾಗಿದೆ ಎಂದು ದೆಹಲಿ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಿದೆ, ಆದರೂ ಇದು ಸೀಮಿತ ಪರಿಣಾಮವನ್ನು ಬೀರುತ್ತದೆ. ರಾಷ್ಟ್ರೀಯ ರಾಜಧಾನಿ ಪ್ರದೇಶ (ಎನ್‌ಸಿಆರ್) ಅಡಿಯಲ್ಲಿ ಬರುವ ದೆಹಲಿಯ ನೆರೆಯ ಪ್ರದೇಶಗಳಿಗೂ ಇದೇ ರೀತಿಯ ನಿರ್ಬಂಧಗಳು ಬೇಕಾಗುತ್ತವೆ ಎಂದು ಉಲ್ಲೇಖಿಸಲಾಗಿತ್ತು.

* "ಸ್ಥಳೀಯ ಕಲುಷಿತ ಗಾಳಿ ಹೊರಸೂಸುವಿಕೆ ನಿಯಂತ್ರಿಸಲು ಸಂಪೂರ್ಣ ಲಾಕ್‌ಡೌನ್‌ನಂತಹ ಕ್ರಮಗಳನ್ನು ತೆಗೆದುಕೊಳ್ಳಲು ದೆಹಲಿ ಸರ್ಕಾರ ಸಿದ್ಧವಾಗಿದೆ. ಆದರೆ, ನೆರೆಯ ರಾಜ್ಯಗಳ ಎನ್‌ಸಿಆರ್ ಪ್ರದೇಶಗಳಲ್ಲಿ ಇದನ್ನು ಜಾರಿಗೊಳಿಸಿದರೆ ಅಂತಹ ಕ್ರಮವು ಅರ್ಥಪೂರ್ಣವಾಗಿರುತ್ತದೆ. ದೆಹಲಿಯ ದಟ್ಟ ಹೊಗೆಯನ್ನು ಗಮನಿಸಿದರೆ, ಲಾಕ್‌ಡೌನ್ ಗಾಳಿಯ ಗುಣಮಟ್ಟವು ಆಡಳಿತದ ಮೇಲೆ ಸೀಮಿತ ಪರಿಣಾಮ ಬೀರುತ್ತದೆ" ಎಂದು ಅಫಿಡವಿಟ್ ಹೇಳುತ್ತದೆ.

* ಇಲ್ಲಿಯವರೆಗೆ ದೆಹಲಿಯು ಈ ವಾರ ಶಾಲೆಗಳಲ್ಲಿ ಯಾವುದೇ ದೈಹಿಕ ತರಗತಿಗಳನ್ನು ನಡೆಸುವುದಿಲ್ಲ ಮತ್ತು ಸರ್ಕಾರಿ ಅಧಿಕಾರಿಗಳು ಮನೆಯಿಂದಲೇ ಕೆಲಸ ಮಾಡುತ್ತಾರೆ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಖಾಸಗಿ ಕಚೇರಿಗಳಿಗೂ ಮನೆಯಿಂದಲೇ ಕೆಲಸ ಮಾಡಲು ಸೂಚಿಸಲಾಗಿದೆ. ಮೂರು ದಿನಗಳ ಕಾಲ ನಿರ್ಮಾಣ ಚಟುವಟಿಕೆಗಳಿಗೂ ನಿರ್ಬಂಧ ವಿಧಿಸಲಾಗಿದೆ ಎಂದು ಹೇಳಲಾಯಿತು.

* ಕಳೆದ ಶನಿವಾರ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಅವರು, ಅಪಾಯಕಾರಿ ಹೊಗೆಯನ್ನು ನಿಭಾಯಿಸಲು ತುರ್ತು ಯೋಜನೆಯನ್ನು ರೂಪಿಸುವಂತೆ ಕೇಂದ್ರ ಸರ್ಕಾರವನ್ನು ಕೇಳಿದ್ದು, ಪರಿಸ್ಥಿತಿಯನ್ನು "ತುಂಬಾ ಗಂಭೀರವಾಗಿದೆ" ಎಂದು ಎಚ್ಚರಿಸಿದ್ದರು.

* "ತುರ್ತು ಕ್ರಮಗಳನ್ನು ತೆಗೆದುಕೊಳ್ಳಲು ನೀವು ಹೇಗೆ ಯೋಜಿಸುತ್ತೀರಿ ಎಂದು ನಮಗೆ ತಿಳಿಸಿ? ಎರಡು ದಿನಗಳ ಲಾಕ್‌ಡೌನ್? AQI (ವಾಯು ಗುಣಮಟ್ಟ ಸೂಚ್ಯಂಕ) ಮಟ್ಟವನ್ನು ಕಡಿಮೆ ಮಾಡಲು ನಿಮ್ಮ ಯೋಜನೆ ಏನು?," ಎಂದು ಕೋರ್ಟ್ ಪ್ರಶ್ನಿಸಿತ್ತು. ದೆಹಲಿ ಮತ್ತು ಸುತ್ತಮುತ್ತಲಿನ ನಗರಗಳಲ್ಲಿ ಹೊಗೆ ಆವರಿಸಿ ಒಂದು ವಾರವೇ ಕಳೆದಿದೆ. ಕೇಂದ್ರ ಸರ್ಕಾರ ವಾಯು ಗುಣಮಟ್ಟ ಸೂಚ್ಯಂಕವನ್ನು ನಿಯಂತ್ರಿಸುವುದಕ್ಕೆ ದೀರ್ಘಾವಧಿ ಕ್ರಮಗಳಿಗೂ ಮೊದಲು ತುರ್ತು ಕ್ರಮ ಕೈಗೊಳ್ಳುವುದಕ್ಕೆ ಆದ್ಯತೆ ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದ ಪೀಠವು ಸೂಚನೆ ನೀಡಿತ್ತು.

* ಪ್ರಪಂಚದ ಅತ್ಯಂತ ಕಲುಷಿತ ರಾಜಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೆಹಲಿಯಲ್ಲಿನ ಗಾಳಿಯ ಗುಣಮಟ್ಟವು ಕೊಳೆತ ಬೆಳೆಗಳು ಹಾಗೂ ಬೆಳೆಯ ನಂತರದ ಹುಲ್ಲು ಸುಡುವಿಕೆ, ಸಾರಿಗೆಯಿಂದ ಹೊರಸೂಸುವಿಕೆ, ನಗರ ಮತ್ತು ಇತರ ಕೈಗಾರಿಕೆಗಳ ಹೊರಗಿನ ಕಲ್ಲಿದ್ದಲು ಸ್ಥಾವರಗಳು, ಹಾಗೆಯೇ ತೆರೆದ ಕಸವನ್ನು ಸುಡುವುದು ಮತ್ತು ಧೂಳಿನ ಕಾರಣದಿಂದ ಕುಸಿದಿದೆ.

English summary
WFH For Till Next one Week, Supreme Court Judges Indicated On Delhi Pollution: Here Read Major 10 Points.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X