WFI protest: ದ್ರೋಣಚಾರ್ಯ ಪ್ರಶಸ್ತಿ ವಾಪಸ್‌ ನೀಡುವ ಎಚ್ಚರಿಕೆ

ನವದೆಹಲಿ, ಮೇ 5: ಪ್ರತಿಭಟನಾ ನಿರತ ಕುಸ್ತಿಪಟುಗಳ ಬೆಂಬಲಕ್ಕೆ ನಿಂತಿರುವ ದ್ರೋಣಾಚಾರ್ಯ ಪ್ರಶಸ್ತಿ ವಿಜೇತ ಕೋಚ್ ಮಹಾವೀರ್ ಸಿಂಗ್ ಫೋಗಟ್ ಶುಕ್ರವಾರ ನ್ಯಾಯ ನೀಡದಿದ್ದರೆ ಅವರ ಪದಕಗಳನ್ನು ಹಿಂದಿರುಗಿಸುವುದಾಗಿ ಎಚ್ಚರಿಕೆ ನೀಡಿದ್ದು, ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಒಲಿಂಪಿಕ್ ಪದಕ ವಿಜೇತ ಜೋಡಿ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪೂನಿಯಾ ಮತ್ತು ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಕುಸ್ತಿಪಟುಗಳು ಏಪ್ರಿಲ್ 23 ರಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪದ ಮೇಲೆ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.

WFI protest: Mahavir Singh Phogat says we will return Dronacharya award

ಪ್ರಕರಣದಲ್ಲಿ ನ್ಯಾಯ ದೊರಕದಿದ್ದಲ್ಲಿ ನನ್ನ ಪದಕಗಳನ್ನು ಹಿಂದಿರುಗಿಸುತ್ತೇನೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಎದುರಿಸುತ್ತಿರುವ ಆರೋಪಗಳ ಪ್ರಕಾರ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಅವರನ್ನು ಬಂಧಿಸಬೇಕು" ಎಂದು ಮೂರು ವರ್ಷಗಳ ಹಿಂದೆ ಬಿಜೆಪಿ ಸೇರಿದ ಮಹಾವೀರ್ ಫೋಗಟ್ ಆಗ್ರಹಿಸಿದ್ದಾರೆ.

ಪ್ರತಿಭಟನಾನಿರತ ಕುಸ್ತಿಪಟುಗಳು ಬುಧವಾರ ರಾತ್ರಿ ದೆಹಲಿ ಪೊಲೀಸರಿಂದ ದೌರ್ಜನ್ಯಕ್ಕೊಳಗಾದ ನಂತರ ಪದ್ಮಶ್ರೀ ಸೇರಿದಂತೆ ತಮ್ಮ ಪದಕಗಳು ಮತ್ತು ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸುವುದಾಗಿ ಬೆದರಿಕೆ ಹಾಕಿದ್ದರು. ಏತನ್ಮಧ್ಯೆ, ಹರಿಯಾಣದ ಹಲವಾರು ಖಾಪ್‌ಗಳು ಸಹ ಪ್ರತಿಭಟನಾನಿರತ ಕ್ರೀಡಾಪಟುಗಳಿಗೆ ಬೆಂಬಲವಾಗಿ ಬಂದಿದ್ದಾರೆ.

WFI protest: Mahavir Singh Phogat says we will return Dronacharya award

ಗುರುವಾರ ಹಿಸಾರ್, ಭಿವಾನಿ, ಜಿಂದ್ ಮತ್ತು ರೋಹ್ಟಕ್ ಸೇರಿದಂತೆ ಅನೇಕ ಖಾಪ್‌ಗಳು ಕುಸ್ತಿಪಟುಗಳಿಗೆ ಬೆಂಬಲ ವ್ಯಕ್ತಪಡಿಸಿ ಮತ್ತು ಅವರಿಗೆ ನ್ಯಾಯ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.ಮಹಾವೀರ್ ಫೋಗಟ್ ಕುಸ್ತಿಪಟುಗಳಾದ ಬಬಿತಾ ಮತ್ತು ಗೀತಾ ಫೋಗಟ್ ಅವರ ತಂದೆಯಾಗಿದ್ದು, ಗುರುವಾರ ಜಂತರ್ ಮಂತರ್‌ನಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಭೇಟಿ ಮಾಡಲು ಪ್ರಯತ್ನಿಸಿದಾಗ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ವಿನೇಶ್ ಅವರ ಚಿಕ್ಕಪ್ಪ ಸೇರಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+