Siddaramaiah meet Modi: ಪ್ರಧಾನಿ ಮೋದಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?
ದೆಹಲಿ ಡಿಸೆಂಬರ್ 19: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿ ವಿವರ ನೀಡಿದರು. ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದರು.
ಮೊದಲ ಮನವಿ ಸಲ್ಲಿಸಿ ಈಗಾಗಲೇ ಮೂರು ತಿಂಗಳು ಕಳೆದಿದ್ದು, ರೈತರು ಅತ್ಯಂತ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಬೆಳೆ ವಿಫಲವಾಗಿರುವ ಹಿನ್ನೆಲೆಯಲ್ಲಿ ರೈತರಿಗೆ ಇನ್ಪುಟ್ ಸಬ್ಸಿಡಿ ನೀಡುವುದು ಅತ್ಯಗತ್ಯವಾಗಿದೆ ಎಂದು ಪ್ರಧಾನ ಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟಿದ್ದೇನೆ.
— CM of Karnataka (@CMofKarnataka) December 19, 2023
ಬರದಿಂದ ಸಂಕಷ್ಟದಲ್ಲಿರು ಕರ್ನಾಟಕದ ರೈತರ ಹಿತರಕ್ಷಣೆಯ ದೃಷ್ಟಿಯಿಂದ… pic.twitter.com/CbZcGBwCzO
ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದರು.

ಹೈಲೈಟ್ಸ್:-
*ಬರ ಪರಿಹಾರ ಶೀಘ್ರ ಬಿಡುಗಡೆ
*ನರೇಗಾ ಕೆಲಸವನ್ನು 150 ದಿನಗಳಗೆ ಹೆಚ್ಚಿಸಬೇಕು.
*ಭದ್ರಾ ಮೇಲ್ದಂಡೆಗೆ ಕೊಟ್ಟ ಮಾತಿನಂತೆ ಹಣ ಬಿಡುಗಡೆ ಮಾಡಬೇಕು.
*ಮಹದಾಯಿ ಯೋಜನೆಗೆ ಪರಿಸರ ಕ್ಲಿಯರೆನ್ಸ್ ಶೀಘ್ರವಾಗಿ ನೀಡಬೇಕು.
*ಮೇಕೆದಾಟು ಯೋಜನೆ ಕಾರ್ಯಾರಂಭಕ್ಕೆ ಅನುಮತಿಸಬೇಕು
ಈ ಐದು ಬೇಡಿಕೆಗಳ ಈಡೇರುಕೆಗೆ ಮನವಿ ಅರ್ಪಿಸಿದ್ದೇವೆ.
*ಬರ ಪರಿಹಾರ ಸಂಬಂಧ ಇವತ್ತಿನವರೆಗೂ ಹೈಲೆವೆಲ್ ಕಮಿಟಿ ಮೀಟಿಂಗ್ ಮಾಡಿಲ್ಲ. ಇದರಿಂದ ರಾಜ್ಯದ ರೈತರ ಸಂಕಷ್ಟಕ್ಕೆ ಕೇಂದ್ರದಿಙದ ಬರಬೇಕಾದ ಪರಿಹಾರ ಬರುತ್ತಿಲ್ಲ.
*ಪ್ರಧಾನಿ ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿದರು. ಅಮಿತ್ ಶಾ ಅವರಿಗೆ ಸೂಚನೆ ನೀಡಲು ಮನವಿ ಮಾಡಿದ್ದೇವೆ.
*ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100 ರಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಹೆಚ್ಚಿಸಲು 3 ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಈ ಮನವಿಯನ್ನು ಮಾಡಿದ್ದೇವೆ. ಈ ಮನವಿ ಈಡೇರಿಲ್ಲ. ಈ ಬಗ್ಗೆಯೂ ತುರ್ತಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇವೆ.
*ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ಕೂಡ ಆಗಿದೆ. ಬೇರೆ ಅಡೆ ತಡೆ ಏನೂ ಇಲ್ಲ. ಪರಿಸರ ಕ್ಲಿಯರೆನ್ಸ್ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರವೇ ಕೊಡಬೇಕು. ಇದುವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು. ಆದ್ದರಿಂದ ಬೇಗ ಕ್ಲಿತರೆನ್ಸ್ ಕೊಡಿಸುವಂತೆ ಒತ್ತಾಯಿಸಿದ್ದೇವೆ.
ರಾಜ್ಯದಲ್ಲಿ 236 ತಾಲೂಕುಗಳ ಪೈಕಿ 223 ತಾಲ್ಲೂಕುಗಳು ಬರಪೀಡಿತವಾಗಿದ್ದು, ಅದರಲ್ಲಿ 196 ತಾಲ್ಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯ ಸಣ್ಣ ಮತ್ತು ಅತಿ ಸಣ್ಣ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಎನ್…
— CM of Karnataka (@CMofKarnataka) December 19, 2023
*ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ 5300 ಕೋಟಿ ಘೋಷಿಸಿದ್ದರು. ಇವರ ಘೋಷಣೆ ಆಧಾರದಲ್ಲಿ ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರೂ ಕೂಡ 5300 ಕೋಟಿ ಘೋಷಿಸಿದ್ದರು. ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಕಮಿಟ್ ಮೆಂಟ್. ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದೇವೆ.
*ಮೇಕೆದಾಟು, ಕುಡಿಯುವ ನೀರಿನ ಯೋಜನೆ. ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವ ಯೋಜನೆ. ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಇದರಿಂದ ತಮಿಳುನಾಡಿಗೇ ಹೆಚ್ಚು ಅನುಕೂಲ. ನಮಗೆ ಕುಡಿಯುವ ನೀರಿನ ಜತೆಗೆ 400 ಮೆಘಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತದೆ. ವಿದ್ಯುತ್ ಉತ್ಪಾದನೆ ಬಳಿಕ ಈ ನೀರು ಕೂಡ ತಮಿಳುನಾಡಿಗೇ ಹೋಗ್ತದೆ. ಇದರಿಂದಲೂ ಅವರಿಗೇ ಅನುಕೂಲ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ @narendramodi ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177 ಕೋಟಿ ರೂ. ಪರಿಹಾರ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.
— CM of Karnataka (@CMofKarnataka) December 19, 2023
ಇದರಲ್ಲಿ 4,663 ಕೋಟಿ ರೂ. ಇನ್ಪುಟ್ ಸಬ್ಸಿಡಿ, 12,577 ಕೋಟಿ ರೂ. ತುರ್ತು ಪರಿಹಾರ, 566 ಕೋಟಿ ರೂ.… pic.twitter.com/Wq6GPj2sJe
*ಮೇಕೆದಾಟು ಆದರೆ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗತ್ತೆ. ಆದ್ದರಿಂದ ಮೇಕೆದಾಟುಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿಗಳ ಗಮನಕ್ಕೆ ತಂದು ಒತ್ತಾಯಿಸಿದ್ದೇವೆ.
*ಮಹದಾಯಿ, ಮೇಕೆದಾಟು, ಭದ್ರಾ ಮೇಲ್ಸಂಡೆ ಯೋಜನೆಗಳಿಗಾಗಿ ನಾವು ಸರ್ವ ಪಕ್ಷ ನಿಯೋಗದ ಜತೆ ಕೇಂದ್ರಕ್ಕೆ ಬರಲು ಸಿದ್ದರಿದ್ದೇವೆ.
*ಆದಷ್ಟು ಬೇಗ ನಿಗಮ ಮಂಡಳಿ ಅಂತಿಮ. ಮೊದಲ ಹಂತದಲ್ಲಿ MLA ಗಳದ್ದು. Next ಕಾರ್ಯಕರ್ತರದ್ದು.
ಪ್ರಜಾಪ್ರಭುತ್ವ ವಿರೋಧಿ ಕ್ರಮ
*ಸಂಸತ್ತಿನ ಇತಿಹಾದಲ್ಲೇ ಮೊದಲ ಬಾರಿಗೆ 141 ಸಂಸದರನ್ನು ಒಂದೇ ಬಾರಿಗೆ ಅಮಾನತ್ತು ಮಾಡಿದ ಉದಾಹರಣೆ ಇಲ್ಲ. 141 ಮಂದಿ ಸಂಸದರನ್ನು ಅಮಾನತ್ತು ಮಾಡಿರುವುದು ಸರ್ವಾಧಿಕಾರವನ್ನೂ ಮೀರಿದ ಕ್ರಮ. ಇದನ್ನು ಪ್ರಜಾಪ್ರಭುತ್ವ ಅಂತ ಕರೆಯಲು ಸಾಧ್ಯವಿಲ್ಲ.
*ಚರ್ಚೆ ಪ್ರಜಾಪ್ರಭುತ್ವದ ಮೂಲ. ಒಳ್ಳೆ ಸರ್ಕಾರ strong ವಿರೋಧ ಪಕ್ಷ ಇದ್ದಾಗ ಮಾತ್ರ ಸಾಧ್ಯ.
*ಸರ್ಕಾರದ ತಪ್ಪುಗಳನ್ನು ಹೇಳುವಂಥಾ ಆರೋಗ್ಯಪೂರ್ಣ ವಾತಾವರಣ ಇರಬೇಕು. ಅವರ ಪಕ್ಷದ MP ಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ನಡೆಸುವುದು ನಾಚಿಕೆಗೇಡು.
*ಜಾತಿ ಗಣತಿ ವರದಿ ಇನ್ನೂ ಕೊಟ್ಟಿಲ್ಲ. ಕೆಲವರು ಊಹೆ ಮಾಡಿಕೊಂಡು ವಿರೋಧ ಮಾಡ್ತಿದ್ದಾರೆ. ಅವರು ವರದಿ ಯಾವಾಗ ಕೊಡ್ತಾರೆ ಎನ್ನುವುದು ಖಚಿತವಾಗಿ ಕೊಟ್ಟಿಲ್ಲ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications