HDK Ayodhya Visit: ಅಯೋಧ್ಯೆ ರಾಮ ಮಂದಿರ ಭೇಟಿ ಬಳಿಕ ಹೆಚ್‌ಡಿ ಕುಮಾರಸ್ವಾಮಿ ಹೇಳಿದ್ದೇನು?
ಉತ್ತರಪ್ರದೇಶ ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ ವೇಳೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಸೇರಿದಂತೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಕೂಡ ಭಾಗವಹಿಸಿದ್ದರು. ಈ ವೇಳೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಸ್ವಾಗತಿಸಿದರು. ಈ ಅದ್ಭುತ ಕ್ಷಣದ ಅನುಭವವನ್ನು ಹೆಚ್ ಡಿ ಕುಮಾರಸ್ವಾಮಿ ತಮ್ಮ 'X' (ಹಿಂದಿನ ಟ್ವಿಟರ್)ನಲ್ಲಿ ಹಂಚಿಕೊಂಡಿದ್ದಾರೆ.
ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಸಮಾರಂಭಕ್ಕೆ ದೇಶ ಹಾಗೂ ವಿದೇಶದ ಹಲವಾರು ಗಣ್ಯರನ್ನು ಆಹ್ವಾನಿಸಲಾಗಿತ್ತು. ಕರ್ನಾಟದಲ್ಲೂ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಲಾಗಿತ್ತು. ಇವರಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಗೂ ಬಿಜೆಪಿ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಯಲ್ಲಿ ಭಾಗವಹಿಸಿಲು ಆಹ್ವಾನಿಸಿತ್ತು.

ಜನವರಿ 22ರಂದು ಶ್ರೀರಾಮ ಮಂದಿರದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ರಾಮ ಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನೆ ಮಾಡಲಾಯಿತು. ಇದೇ ದಿನ ಹೆಚ್‌ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿಯ ಹುಟ್ಟಿದ ದಿನವೂ ಆಗಿದ್ದರಿಂದ ಅಯೋಧ್ಯೆದಲ್ಲಿಯೇ ಅವರ ಜನ್ಮದಿನವನ್ನು ಆಚರಿಸಲಾಯಿತು. ಆ ಬಳಿಕ ಅಯೋಧ್ಯೆಯಲ್ಲಿ ಕಳೆದ ತಮ್ಮ ಸಂತೋಷದ ಕ್ಷಣವನ್ನು ಹೆಚ್ ಡಿ ಕುಮಾರಸ್ವಾಮಿ ತಮ್ಮ 'X' (ಹಿಂದಿನ ಟ್ವಿಟರ್)ನಲ್ಲಿ ಹಂಚಿಕೊಂಡಿದ್ದಾರೆ.
'ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನಂತರ ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಯೋಗಿ ಆದಿತ್ಯನಾಥ್ ಅವರಿಗೆ ಶುಭ ಕೋರಲಾಯಿತು.
|| ಜೈ ಶ್ರೀರಾಮ್ ||
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 22, 2024
ಅಯೋಧ್ಯೆಯಲ್ಲಿ ನಡೆದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ನಂತರ ಉತ್ತರ ಪ್ರದೇಶದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @myogiadityanath ಅವರಿಗೆ ಶುಭ ಕೋರಲಾಯಿತು. ಪೂಜ್ಯ ತಂದೆ-ತಾಯಿ ಅವರಿಬ್ಬರೂ ಅಯೋಧ್ಯೆಗೆ ಬಂದಿದ್ದಕ್ಕೆ ಯೋಗಿ ಜೀ ಅವರು ಸಂತಸ ವ್ಯಕ್ತಪಡಿಸಿದರು.… pic.twitter.com/RpxDz1pGBR
ಪೂಜ್ಯ ತಂದೆ-ತಾಯಿ ಅವರಿಬ್ಬರೂ ಅಯೋಧ್ಯೆಗೆ ಬಂದಿದ್ದಕ್ಕೆ ಯೋಗಿ ಜೀ ಅವರು ಸಂತಸ ವ್ಯಕ್ತಪಡಿಸಿದರು. ಮಾಜಿ ಸಂಸದರಾದ ಶ್ರೀ ಕುಪೇಂದ್ರ ರೆಡ್ಡಿ ಅವರು, ರಾಜ್ಯ ಯುವ ಜನತಾದಳದ ಅಧ್ಯಕ್ಷ ಶ್ರೀ ನಿಖಿಲ್ ಕುಮಾರ ಸ್ವಾಮಿ ಅವರು ಜತೆಯಲ್ಲಿದ್ದರು' ಎಂದು ಬರೆದಿದ್ದಾರೆ.
'ಅಯೋಧ್ಯೆಯಲ್ಲಿ ಇಂದು ನಡೆದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾದ ಪುಣ್ಯ ನನ್ನದಾಯಿತು. ಈ ದೈವ ಕಾರ್ಯದಲ್ಲಿ ಪೂಜ್ಯ ತಂದೆ-ತಾಯಿ ಅವರೊಂದಿಗೆ ಭಾಗವಹಿಸಿದ್ದು ನನಗೆ ಧನ್ಯತೆಯ ಅನುಭೂತಿ ನೀಡಿದೆ. ಶ್ರೀ ನಿಖಿಲ್ ಕುಮಾರಸ್ವಾಮಿ ಅವರು ಈ ದಿವ್ಯಕ್ಷಣಕ್ಕೆ ಸಾಕ್ಷಿಯಾದರು. ಜೈಶ್ರೀರಾಮ್' ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.
|| ಜೈ ಶ್ರೀರಾಮ್ ||
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 22, 2024
ಅಯೋಧ್ಯೆಯಲ್ಲಿ ಇಂದು ನಡೆದ ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ ಶ್ರೀ ಬಾಲರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾದ ಪುಣ್ಯ ನನ್ನದಾಯಿತು. ಈ ದೈವ ಕಾರ್ಯದಲ್ಲಿ ಪೂಜ್ಯ ತಂದೆ-ತಾಯಿ ಅವರೊಂದಿಗೆ ಭಾಗವಹಿಸಿದ್ದು ನನಗೆ ಧನ್ಯತೆಯ ಅನುಭೂತಿ ನೀಡಿದೆ. ಶ್ರೀ @Nikhil_Kumar_k ಅವರು ಈ ದಿವ್ಯಕ್ಷಣಕ್ಕೆ… pic.twitter.com/r3c2PVP4vp
ಭಾನುವಾರವೇ ದೇವೇಗೌಡರೊಂದಿಗೆ ಧರ್ಮಪತ್ನಿ ಚನ್ನಮ್ಮನವರು, ಮಾಜಿ ಮುಖ್ಯಮಂತ್ರಿಗಳಾದ ಎಚ್‌ಡಿ ಕುಮಾರಸ್ವಾಮಿ ಅವರು ಹಾಗೂ ರಾಜ್ಯ ಯುವ ಜನತಾದಳ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅಯೋಧ್ಯೆಗೆ ತೆರಳಿದ್ದರು. ಅತಿ ಗಣ್ಯರ ಗ್ಯಾಲರಿಯಲ್ಲಿ ಆಸೀನರಾಗಿದ್ದ ಮಾಜಿ ಪ್ರಧಾನಿಗಳ ಕುಟುಂಬದವರು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಹಾಗೂ ಭವ್ಯ ಶ್ರೀರಾಮ ಮಂದಿರವನ್ನು ಕಣ್ತುಂಬಿಕೊಂಡರು.
ಪ್ರಾಣ ಪ್ರತಿಷ್ಠಾಪನೆ ಮುಗಿದ ನಂತರ ಗಣ್ಯರಿಗೆ ಶುಭ ಕೋರಲು ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಧನ್ಯವಾದ ಹೇಳಿದರು. ಇದಕ್ಕೆ ಪ್ರತಿಯಾಗಿ ದೇವೇಗೌಡರು, ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರು ಪ್ರಧಾನಿಗಳಿಗೆ ಅಭಿವಂದನೆ ಸಲ್ಲಿಸಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications