G20 Delhi Summit 2023 concludes: ಜಿ20 ಸಮಾರೋಪ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದೇನು?
ಪ್ರಧಾನಿ ನರೇಂದ್ರ ಮೋದಿ ಅವರು ಜಿ20 ಸಮಾರೋಪ ಭಾಷಣದ ಮೂಲಕ ಭಾರತದ ರಾಜಧಾನಿ ದೆಹಲಿಯಲ್ಲಿ ನಡೆದ G20 ಶೃಂಗಸಭೆಯು ಮುಕ್ತಾಯಗೊಂಡಿದೆ ಎಂದು ಘೋಷಣೆ ಮಾಡಿದರು. ಜಿ-20 ರಾಷ್ಟ್ರಗಳ ಪ್ರಸ್ತುತ ಅಧ್ಯಕ್ಷರಾಗಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಶೃಂಗಸಭೆಯ ಸಮಾರೋಪದಲ್ಲಿ ಬ್ರೆಜಿಲ್‌ಗೆ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಿದ್ದಾರೆ. ಜಿ 20 ರ ಸಮಾರೋಪ ಭಾಷಣದಲ್ಲಿ ಪ್ರಧಾನಿ ಮೋದಿ, 'ನಾನು ಇಡೀ ಜಗತ್ತಿನಲ್ಲಿ ಭರವಸೆ ಮತ್ತು ಶಾಂತಿಯನ್ನು ಹರಡಲು ಬಯಸುತ್ತೇನೆ' ಎಂದು ಹೇಳಿದರು.
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಅವರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸುತ್ತೇನೆ ಮತ್ತು ಜಿ20 ಅಧ್ಯಕ್ಷ ಸ್ಥಾನವನ್ನು ಅವರಿಗೆ ಹಸ್ತಾಂತರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬ್ರೆಜಿಲ್ ಈ ವರ್ಷದ ನವೆಂಬರ್‌ನಿಂದ ಜಿ-20 ರಾಷ್ಟ್ರಗಳ ಅಧ್ಯಕ್ಷತೆಯನ್ನು ವಹಿಸಲಿದೆ.

ಈ ಮೂಲಕ ಜಿ20 ಶೃಂಗಸಭೆ ಮುಕ್ತಾಯವಾಗಿದೆ ಎಂದು ನಾನು ಘೋಷಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯದ ಮಾರ್ಗಸೂಚಿಯು ಆಹ್ಲಾದಕರವಾಗಿರಲಿ. ಪ್ರಪಂಚದಾದ್ಯಂತ ಭರವಸೆ ಮತ್ತು ಶಾಂತಿ ಇರಲಿ. 140 ಕೋಟಿ ಭಾರತೀಯರ ಶುಭ ಹಾರೈಕೆಗಳೊಂದಿಗೆ, ನಾನು ನಿಮಗೆಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ.
Sharing my remarks at the closing ceremony of the G20 Summit. https://t.co/WKYINiXe3U
— Narendra Modi (@narendramodi) September 10, 2023
ಪ್ರಧಾನಿ ನರೇಂದ್ರ ಮೋದಿ ಅವರು, "ನವೆಂಬರ್ ವರೆಗೆ ಜಿ20 ನೇತೃತ್ವದ ಜವಾಬ್ದಾರಿಯನ್ನು ಭಾರತ ಹೊಂದಿದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ. ಇನ್ನೂ ಎರಡೂವರೆ ತಿಂಗಳು ಬಾಕಿ ಇದೆ. ಈ ಎರಡು ದಿನಗಳಲ್ಲಿ ನೀವು ಅನೇಕ ವಿಷಯಗಳನ್ನು ಮತ್ತು ಪ್ರಸ್ತಾಪಗಳನ್ನು ಮುಂದಿಟ್ಟಿದ್ದೀರಿ. ಬರುವ ಸಲಹೆಗಳನ್ನು ತೆಗೆದುಕೊಂಡು ಅವರ ಪ್ರಗತಿಯನ್ನು ಹೇಗೆ ವೇಗಗೊಳಿಸಬಹುದು ಎಂಬುದನ್ನು ನೋಡುವುದು ನಮ್ಮ ಜವಾಬ್ದಾರಿಯಾಗಿದೆ.

ನಾವು ನವೆಂಬರ್ ಅಂತ್ಯದಲ್ಲಿ G 20 ನ ಮತ್ತೊಂದು ವರ್ಚುವಲ್ ಅಧಿವೇಶನವನ್ನು ನಡೆಸಬೇಕೆಂದು ನಾನು ಪ್ರಸ್ತಾಪಿಸುತ್ತೇನೆ. ಇದರಲ್ಲಿ ನಾವು ಈ ಶೃಂಗಸಭೆಯಲ್ಲಿ ನಿರ್ಧರಿಸಿದ ವಿಷಯಗಳನ್ನು ಪರಿಶೀಲಿಸಬಹುದು. ನಮ್ಮ ತಂಡವು ಈ ಎಲ್ಲಾ ವಿವರಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತದೆ. ಆಗಲೂ ನೀವೆಲ್ಲರೂ ಸೇರುತ್ತೀರಿ ಎಂದು ನಾನು ಭಾವಿಸುತ್ತೇನೆ" ಎಂದರು.
ಈ ಸಂದರ್ಭದಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸುವ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಿದರು. ಕಾಲಕ್ಕೆ ತಕ್ಕಂತೆ ಬದಲಾವಣೆ ಅಗತ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಸ್ತುತ ಐದು ಸದಸ್ಯರಿದ್ದಾರೆ. ಇದರಲ್ಲಿ ಅಮೆರಿಕ, ರಷ್ಯಾ, ಚೀನಾ, ಬ್ರಿಟನ್ ಮತ್ತು ಫ್ರಾನ್ಸ್ ಸೇರಿವೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯರ ಸಂಖ್ಯೆಯನ್ನು ಹೆಚ್ಚಿಸಬೇಕು ಎಂದು ಭಾರತ ಬಹಳ ದಿನಗಳಿಂದ ಒತ್ತಾಯಿಸುತ್ತಿದೆ ಎಂದರು.












Click it and Unblock the Notifications