ಆಯುಷ್ಮಾನ್ ಭಾರತ್ ಅಥವಾ ಮೋದಿಕೇರ್ ಎಂದರೇನು?

ನವದೆಹಲಿ, ಆಗಸ್ಟ್ 15: 72ನೇ ಸ್ವಾತಂತ್ರ್ಯ ದಿನ ಸಂಭ್ರಮಾಚರಣೆ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೊಸದೊಂದು ಮಹತ್ವದ ಯೋಜನೆ ಬಗ್ಗೆ ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್ 25ರಿಂದ ದೇಶದೆಲ್ಲೆಡೆ ಜಾರಿಗೆ ಬರಲಿರುವ ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ವಿವರ ಇಲ್ಲಿದೆ...

ಸೆಪ್ಟೆಂಬರ್ 25ರಂದು ಪಂಡಿತ್ ದೀನ ದಯಾಳ್ ಉಪಾಧ್ಯಾಯ್ ಹುಟ್ಟುಹಬ್ಬದ ಅಂಗವಾಗಿ ಜನ ಆರೋಗ್ಯ ಯೋಜನೆ ಜಾರಿಗೆ ಬರಲಿದೆ.

ಈ ಯೋಜನೆಯಡಿ ದೇಶದ 50 ಕೋಟಿ ಜನಕ್ಕೆ 5 ಲಕ್ಷ ರೂಪಾಯಿ ಆರೋಗ್ಯ ವಿಮೆ ಸಿಗಲಿದೆ. ಇದು ನಗದು ರಹಿತ ಯೋಜನೆಯಾಗಿರುವುದು ವಿಶೇಷ. ಈ ಮೂಲಕ ವಿಶ್ವದ ಅತಿದೊಡ್ಡ ಯೋಜನೆ ಎಂದು ಪರಿಗಣಿತವಾಗಿದೆ. ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಪ್ರತಿಯೊಂದು ರೋಗಕ್ಕೂ ಒಂದು ದರ ನಿರ್ಧರಿಸಲಾಗಿದೆ. ಈ ದರ ಪಟ್ಟಿಯಂತೆ ನೇರವಾಗಿ ಆಸ್ಪತ್ರೆಗಳಿಗೆ ಹಣ ಪಾವತಿಯಾಗಲಿದೆ.

ಆಗಸ್ಟ್ 15ರ ನಂತ್ರ 5-6 ವಾರಗಳ ಕಾಲ ಪರೀಕ್ಷೆ ನಡೆಯಲಿದ್ದು, ಇದಾದ ನಂತ್ರ ಆಯುಷ್ಮಾನ್ ಯೋಜನೆ ಜಾರಿಗೆ ಬರಲಿದೆ ಎಂದು ಮೋದಿ ಹೇಳಿದ್ದಾರೆ. ಉದ್ಯೋಗಾಂಕ್ಷಿಗಳಿಗೆ ಉದ್ಯೋಗ ಸಿಗಲಿದೆ. ಅನೇಕ ಆಸ್ಪತ್ರೆಗಳು ತಲೆ ಎತ್ತಲಿವೆ.

ಮೊದಲ ಹಂತವಾಗಿ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಯೋಜನೆಯನ್ನು ಜಾರಿಗೆ ತರಲಾಗುತ್ತದೆ.

ಮೊದಲ ಹಂತದ ಯೋಜನೆ

ಮೊದಲ ಹಂತದ ಯೋಜನೆ

ಇನ್ನು ಮೊದಲ ಹಂತದಲ್ಲಿ ಈ ಯೋಜನೆ ಛತ್ತೀಸ್​​ಗಢ, ತ್ರಿಪುರ, ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ದಮನ್ ಮತ್ತು ದಿಯು, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಜಾರಿಯಾಗಲಿದೆ.

50 ಕೋಟಿ ಜನರಿಗೆ ಉಪಯೋಗ

50 ಕೋಟಿ ಜನರಿಗೆ ಉಪಯೋಗ

* ಆಯುಷ್ಮಾನ್ ಭಾರತ್ ಯೋಜನೆಯಿಂದ ಸುಮಾರು 50 ಕೋಟಿ ಜನರಿಗೆ ಅಥವಾ 10 ಕೋಟಿ ಕುಟುಂಬಗಳಿಗೆ ಅನುಕೂಲವಾಗಲಿದೆ.
* ವಾರ್ಷಿಕವಾಗಿ 5 ಲಕ್ಷದವರೆಗೆ ಆಸ್ಪತ್ರೆ ಖರ್ಚು ರೂ. 1200 ಕೋಟಿ ಮೀಸಲು ಈಡಲಾಗಿದೆ. ಈ ಯೋಜನೆಯ ಆರೋಗ್ಯದ ಭಾಗವಾಗಿ ಆರೋಗ್ಯ ಕ್ಷೇಮ ಕೇಂದ್ರಗಳಿಗೆ ರೂ. 1200 ಕೋಟಿ ಮೀಸಲಿಡಲಾಗಿದೆ.

ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ

ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ

ಕ್ಷಯ ರೋಗಿಗಳ ಪೌಷ್ಟಿಕತೆಗಾಗಿ 600 ಕೋಟಿ ತೆಗೆದಿರಿಸಲಾಗಿದೆ. ಕೇಂದ್ರ ಬಜೆಟ್ 2018 ಪ್ರಮುಖ ಜನಪ್ರಿಯ ಯೋಜನೆಗಳ ವಿವರ. 30 ಸಾವಿರ ಕೋಟಿ ರೂ. ಅನುದಾನವನ್ನ ರಾಷ್ಟ್ರೀಯ ಆರೋಗ್ಯ ಯೋಜನೆ ಮೂಲಕ ನೀಡಲಾಗುತ್ತದೆ. ಇನ್ನು ಉತ್ತಮ ಆರೋಗ್ಯ ಸೌಲಭ್ಯಕ್ಕಾಗಿ ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆಗೆ 30 ಸಾವಿರ ಕೋಟಿ ಅನುದಾನ ನೀಡಲಾಗಿದೆ.

ಒಡಿಶಾದಿಂದ ವಿರೋಧ

ಒಡಿಶಾದಿಂದ ವಿರೋಧ

ಪ್ರಸಕ್ತ ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ ಕೇವಲ ಬಡ ಭಾರತೀಯ ಕುಟುಂಬಗಳಿಗೆ 30,000 ರೂ. ಮಾತ್ರ ಒದಗಿಸುತ್ತಿದೆ.ತಮಿಳುನಾಡು, ಒಡಿಶಾ, ಪಂಜಾಬ್​, ಕೇರಳ, ಮಹಾರಾಷ್ಟ್ರ, ಕರ್ನಾಟಕ ಹಾಗೂ ನವದೆಹಲಿ ಈ ಯೋಜನೆಗೆ ಒಳಪಡುವುದಿಲ್ಲ. ತದನಂತರ ಈ ರಾಜ್ಯಗಳು ಈ ಯೋಜನೆಗೆ ಒಳಪಡುವ ಸಾಧ್ಯತೆಯಿದೆ. ಒಡಿಶಾ ಹಾಗೂ ತಮಿಳುನಾಡು ವಿರೋಧ ವ್ಯಕ್ತಪಡಿಸಿವೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+