Jharkhand Election 2024: ಈ ರಾಜ್ಯದ ಮೇಲೆ 'ಕಮಲ' ಕಣ್ಣು: ಮೋದಿ ಲೆಕ್ಕಾಚಾರವೇನು?

ಈಗಾಗಲೇ 2024ರ ಲೋಕಸಭಾ ಚುನಾವಣೆ ಮುಗಿದಿದ್ದು, ಹೀನಾಯವಾಗಿ ಸೋಲನುಭವಿಸಿದ ಬಿಜೆಪಿ ತನ್ನ ಮಿತ್ರ ಪಕ್ಷಗಳೊಂದಿಗೆ 3ನೇ ಬಾರಿ ಸರ್ಕಾರ ರಚಿಸಿದೆ. ಈ ಮೂಲಕ ನರೇಂದ್ರ ಮೋದಿ ಅವರೇ ಮೂರನೇ ಬಾರಿಗೆ ಪ್ರಧಾನಿ ಆಗಿದ್ದಾರೆ. ಇದೀಗ ಮತ್ತೆ ಬಿಜೆಪಿಗೆ ಅಗ್ನಿಪರೀಕ್ಷೆ ಎದುರಾಗುತ್ತಿದೆ. ಪ್ರಮುಖ ನಾಲ್ಕು ರಾಜ್ಯಗಳಿಗೆ ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್‌ನಲ್ಲಿ ಚುನಾವಣೆಗಳು ನಡೆಯಲಿದ್ದು, ಬಿಜೆಪಿಗೆ ಇವು ದೊಡ್ಡ ಸವಾಲುಗಳಾಗಿವೆ.

ಈಗಾಗಲೇ ಜಮ್ಮು ಮತ್ತು ಕಾಶ್ಮೀರ, ಹರಿಯಾಣ ರಾಜ್ಯಗಳಿಗೆ ಚುನಾವಣಾ ಆಯೋಗ ಚುನಾವಣೆಯ ದಿನಾಂಕ ಘೋಷಣೆ ಮಾಡಿದೆ. ಜಮ್ಮು-ಕಾಶ್ಮೀರದ 90 ಕ್ಷೇತ್ರಗಳಿಗೆ ಸೆಪ್ಟಂಬರ್ 18, ಸೆಪ್ಟಂಬರ್ 25 ಹಾಗೂ ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ಹರಿಯಾಣದ 90 ಕ್ಷೇತ್ರಗಳಿಗೆ ಅಕ್ಟೋಬರ್ 5ರಂದು ಒಂದೇ ಹಂತದ ಮತದಾನ ನಡೆಯಲಿದ್ದು, ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

What is BJP s plan to win assembly election in these four states

ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳಿಗೆ ಬಹುತೇಕ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಈ ನಾಲ್ಕು ರಾಜ್ಯಗಳ ಪೈಕಿ, ಜಮ್ಮು-ಕಾಶ್ಮೀರದಲ್ಲಿ ಯಾವುದೇ ಚುನಾಯಿತ ಸರ್ಕಾರವಿಲ್ಲ. ಅಲ್ಲಿ, ರಾಷ್ಟ್ರಪತಿ ಆಳ್ವಿಕೆ ಇದ್ದು, ರಾಜ್ಯಪಾಲರ ಅಡಳಿತ ನಡೆಯುತ್ತಿದೆ. ಹರಿಯಾಣ ಮತ್ತು ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಅದರ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿವೆ. ಜಾರ್ಖಂಡ್‌ನಲ್ಲಿ ಸ್ಥಳೀಯ ಪಕ್ಷಗಳ ಆಳ್ವಿಕೆಯಿದೆ.

ಈ ನಾಲ್ಕೂ ರಾಜ್ಯಗಳು ಬಿಜೆಪಿ ಪಾಲಿಗೆ ಸವಾಲಿನ ರಾಜ್ಯಗಳೇ ಆಗಿವೆ. ಜಮ್ಮು-ಕಾಶ್ಮೀರದ ಜನರು ತಮ್ಮ ಪರವಾಗಿದ್ದಾರೆ ಎಂದು ಬಿಜೆಪಿ ಹೇಳಿಕೊಳ್ಳುತ್ತಿದೆ. ವಾಸ್ತವದಲ್ಲಿ ಅಲ್ಲಿನ ಜನರು ಬಿಜೆಪಿ ವಿರುದ್ಧ ಕೆಂಡ ಕಾರುತ್ತಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು 2019ರಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿತ್ತು. ಅಲ್ಲದೆ, ರಾಜ್ಯವನ್ನು ಇಬ್ಬಾಗಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತು. ನಿಷೇಧಾಜ್ಞೆಗಳು, ಗೃಹ ಬಂಧನಗಳನ್ನು ವಿಧಿಸಿ ಅಲ್ಲಿನ ಜನರ ಧ್ವನಿಯನ್ನು ಹತ್ತಿಕ್ಕಿತ್ತು. ಇದೀಗ ಜಮ್ಮು-ಕಾಶ್ಮೀರದ ಆಡಳಿತ ಮತ್ತು ಪೋಲೀಸ್ ಇಲಾಖೆಯ ಪ್ರತಿಯೊಂದು ಹಿರಿಯ ಹುದ್ದೆಗಳಲ್ಲಿ ಕಾಶ್ಮೀರೇತರ ಅಧಿಕಾರಿಗಳೇ ತುಂಬಿದ್ದಾರೆ.

ಸತ್ಯಕ್ಕೆ ಸಿಕ್ಕ ಜಯ: ಮತ್ತೊಂದೆಡೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ನಿನ್ನೆಯಷ್ಟೇ (ಸೆಪ್ಟೆಂಬರ್‌ 13) ಜಾಮೀನು ಸಿಕ್ಕಿದ್ದು, ಇದಕ್ಕೆ ಟ್ವೀಟ್‌ ಮೂಲಕ ಸಂತಸ ವ್ಯಕ್ತಪಡಿಸಿರುವ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಇದು ಸತ್ಯಕ್ಕೆ ಸಿಕ್ಕ ಜಯ ಎಂದು ಬರೆದುಕೊಂಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿದ್ದ ನವದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದು, ಇದೇ ವಿಚಾರವಾಗಿ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಪ್ರತಿಕ್ರಿಯೆ ನೀಡಿ ಸಂತಸ ವ್ಯಕ್ತಪಡಿಸಿದ್ದಾರೆ.

"ಹಿರಿಯ ಸಹೋದರ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರ್ಖಂಡ್ ಪ್ರಜೆಗಳಿಂದ ಅಭಿನಂದನೆಗಳು. ಇದು ಸತ್ಯದ ಗೆಲುವು ಮತ್ತು ಸುಳ್ಳಿನ ಸೋಲು. ಇಂದು, ಸುಳ್ಳು ಮತ್ತು ಪಿತೂರಿಯನ್ನು ಸೋಲಿಸುವ ಮೂಲಕ ಸತ್ಯ ಗೆದ್ದಿದೆ," ಟ್ವೀಟ್‌ನಲ್ಲಿ ಬರೆದುಕೊಳ್ಳುವ ಮೂಲಕ ಬಣ್ಣಿಸಿದ್ದಾರೆ.

ಇದಕ್ಕೂ ಮುನ್ನ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+