ಪೆಗಾಸಸ್ ಸಾಫ್ಟ್‌ವೇರ್ ಎಂದರೇನು? ಮೊಬೈಲ್ ಮೇಲಿನ ದಾಳಿ ಹೇಗಿರುತ್ತೆ?
ನವದೆಹಲಿ, ಜುಲೈ 19: ಪೆಗಾಸಸ್ ತಂತ್ರಾಂಶದ ಮೂಲಕ ಭಾರತ ಪತ್ರಕರ್ತರು ಹಾಗೂ ಪ್ರಭಾವಿಗಳ ವಿರುದ್ಧ ಬೇಹುಗಾರಿಕೆ ನಡೆಸಲಾಗುತ್ತಿದೆ ಎನ್ನುವ ಸುದ್ದಿ ಹೊರಬಿದ್ದಿದೆ.
ಟಾರ್ಗೆಟ್ ಪಟ್ಟಿಯಲ್ಲಿದ್ದ ಕೆಲವೊಂದು ಮೊಬೈಲ್ ಡಿವೈಸ್ ಗಳಲ್ಲಿ ಪೆಗಾಸಸ್ ಸ್ಪೈವೇರ್ ಅಸ್ತಿತ್ವವಿರುವುದು ವಿಧಿವಿಜ್ಞಾನ ಪರೀಕ್ಷೆಗಳಿಂದ ಸ್ಪಷ್ಟವಾಗಿದೆ ಎಂದು ದಿ ವೈರ್ ವರದಿ ಪ್ರಕಟಿಸಿದೆ.
ಕಳೆದ ಲೋಕಸಭೆ ಚುನಾವಣೆಗೂ ಒಂದು ವರ್ಷ ಮೊದಲು ಭಾರತದ 300ಕ್ಕೂ ಅಧಿಕ ಗಣ್ಯರ ಮೊಬೈಲ್‌ಗಳನ್ನು ಇಸ್ರೇಲ್ ಅಭಿವೃದ್ಧಿಪಡಿಸಿದ ಪೆಗಾಸಸ್ ಎಂಬ ಬೇಹುಗಾರಿಕೆ ಸಾಫ್ಟ್‌ವೇರ್ ಬಳಸಿ ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗಿದೆ.
ಪೆಗಾಸಸ್ ಒಮ್ಮೆ ಫೋನ್‌ನಲ್ಲಿ ಇನ್‌ಸ್ಟಾಲ್ ಆದರೆ, ಬಳಕೆದಾರರ ಸಂಪೂರ್ಣ ಮಾಹಿತಿಯನ್ನು ಬೇಹುಗಾರಿಕೆ ಮಾಡುತ್ತದೆ. ವಾಟ್ಸಾಪ್‌ನಲ್ಲಿ ಮಾಡಿದ ಸಂಪೂರ್ಣ ಚಾಟ್ಸ್ ಅನ್ನು ಪೆಗಾಸಸ್ ಎನ್‌ಕ್ರಿಪ್ಟ್ ಮಾಡುತ್ತದೆ.
ಹಾಗಾದರೆ ಪೆಗಾಸಸ್ ಸಾಫ್ಟ್‌ವೇರ್ ಎಂದರೇನು, ಅದು ಹೇಗೆ ಕೆಲಸ ಮಾಡುತ್ತೆ ಎಂಬುದನ್ನು ತಿಳಿಯಲು ಮುಂದೆ ಓದಿ..

ಸಚಿವರ ಬಗ್ಗೆ ಬೇಹುಗಾರಿಕೆ
ಲೋಕಸಭೆ ಚುನಾವಣೆಗೂ ಮುನ್ನ, ಅಂದರೆ 2018ರಿಂದ 2019ರ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿದ್ದ ಇಬ್ಬರು ಸಚಿವರು ಸೇರಿದಂತೆ 40 ಪತ್ರಕರ್ತರು,ಮೂರು ವಿರೋಧ ಪಕ್ಷದ ನಾಯಕರು, ಉದ್ಯಮಿಗಳು, ಸರಕಾರಿ ಅಧಿಕಾರಿಗಳು, ವಿಜ್ಞಾನಿಗಳು, ಸಾಮಾಜಿಕ ಹಕ್ಕುಗಳ ಹೋರಾಟಗಾರರ ಮೊಬೈಲ್ ಸಂಖ್ಯೆಗಳನ್ನು ಹ್ಯಾಕ್ ಮಾಡಿರುವುದು ಬಯಲಿಗೆ ಬಂದಿದೆ. ಪ್ಯಾರಿಸ್ ಮೂಲದ ಎನ್‌ಜಿಒ ಫಾರ್ಬಿಡನ್ ಸ್ಟೋರೀಸ್ ಹಾಗೂ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಜಂಟಿಯಾಗಿ ನಡೆಸಿದ ತನಿಖೆ 'ಪೆಗಾಸಸ್ ಪ್ರಾಜೆಕ್ಟ್' ಮೂಲಕ ಹ್ಯಾಕಿಂಗ್ ಬಯಲಾಗಿದ್ದು, ಈ ತನಿಖಾ ವರದಿಯನ್ನು ಅಂತಾರಾಷ್ಟ್ರೀಯ ಮತ್ತು ಭಾರತೀಯ ಮಾಧ್ಯಮ ಸಂಸ್ಥೆಗಳಿಗೆ ನೀಡಲಾಗಿದೆ.

ಪೆಗಾಸಸ್ ಬಗ್ಗೆ ಮಾಹಿತಿ
2019ರಲ್ಲಿ ಸುಮಾರು 20 ದೇಶಗಳಲ್ಲಿ 1400 ಪೆಗಾಸಸ್ ವಾಟ್ಸಾಪ್, ಫೇಸ್‌ಬುಕ್ ಮೆಸೆಜಿಂಗ್ ಸರ್ವೀಸ್‌ನ ಖಾತೆಗಳನ್ನು ಹ್ಯಾಕ್ ಮಾಡಲಾಗಿತ್ತು, ಅದರಲ್ಲಿ ಭಾರತೀಯ ಪತ್ರಕರ್ತರು ಹಾಗೂ ಕಾರ್ಯಕರ್ತರು ಕೂಡ ಇದ್ದರು.
ಹಲವು ದಿನಗಳ ಬಳಿಕ ಆವಿಷ್ಕಾರದ ನಂತ ಆಪಲ್ ಕಂಪನಿ ತನ್ನ ಐಒಎಸ್‌ನ ನಬವೀಕರಣದ ಆವೃತ್ತಿಯನ್ನು ಬಿಡುಗಡೆ ಮಾಡಲಾಗಿತ್ತು.ಪೆಗಾಸಸ್ ಸೃಷ್ಟಿ ಮಾಡಿರುವ ಕುರಿತು ಎನ್‌ಎಸ್‌ಒ ಗ್ರೂಪ್ ವಿರುದ್ಧ ಫೇಸ್‌ಬುಕ್ 2019ರಲ್ಲಿ ದೂರು ನೀಡಿತ್ತು.ಪೆಗಾಸಸ್ ಬೇಹುಗಾರಿಕಾ ಸಾಫ್ಟ್‌ವೇರ್‌ನ್ನು ಇಸ್ರೇಲ್ ಕಂಪನಿ ಎನ್‌ಎಸ್ ಒ ಅಭಿವೃದ್ಧಿಪಡಿಸಿದೆ. ಸೈಬರ್ ಶಸ್ತ್ರಾಸ್ತ್ರ ತಯಾರಿಸುವಲ್ಲಿ ಈ ಕಂಪನಿ ಮುಂದಿದೆ. ಇದಕ್ಕೆ ದಿ ಪೆಗಾಸಸ್ ಪ್ರಾಜೆಕ್ಟ್ ಎಂದು ನಾಕರಣ ಮಾಡಲಾಗಿದೆ.
2016ರಲ್ಲಿ ಮೊದಲಿಗೆ ಇದು ಮುಖ್ಯವಾಹಿನಿಗೆ ಬಂದಿತ್ತು. ಅರಬ್ ಕಾರ್ಯಕರ್ತರೊಬ್ಬರು ಸಂಶಯಾಸ್ಪದ ಸಂದೇಶವನ್ನು ಸ್ವೀಕರಿಸಿದ್ದರು. ಈ ವೇಳೆ ಪೆಗಾಸಸ್ ಐಫೋನ್ ಬಳಕೆದಾರರನ್ನು ಗುರಿಯಾಗಿಸಿಕೊಂಡಿದೆ ಎಂದು ನಂಬಲಾಗಿತ್ತು.

ಪೆಗಾಸಸ್ ಏನು ಮಾಡುತ್ತದೆ?
ಕಾಲ್ ಟ್ರ್ಯಾಕಿಂಗ್, ರೀಡಿಂಗ್, ಬಳಕೆದಾರರ ಚಟಿವಟಿಕೆ ಮೇಲೆ ನಿಗಾ ಇರಿಸಲಾಗುತ್ತದೆ. ಫೋನ್‌ನಲ್ಲಿರುವ ಕ್ಯಾಮರಾ ವಿಡಿಯೋಗಳನ್ನು ಲಭ್ಯವಾಗುವಂತೆ ಮಾಡುತ್ತದೆ. ಹಾಗೂ ಪೈಕ್ರೋಫೋನ್ ಮೂಲಕ ಎಲ್ಲಾ ಚಟುವಟಿಕೆಗಳ ಮೇಲೆ ಕಣ್ಣಿರಿಸುತ್ತದೆ.
ಪೆಗಾಸಸ್ ಒಂದು ಬಾರಿ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಮಾಡಿದರೆ, ಬಳಕೆದಾರರ ಸಂಪೂರ್ಣ ಮಾಹಿತಿಯನ್ನು ಬೇಹುಗಾರಿಕೆ ಮಾಡುತ್ತದೆ. ವಾಟ್ಸಾಪ್‌ನಲ್ಲಿ ಮಾಡಿದ ಸಂಪೂರ್ಣ ಚಾಟ್ಸ್ ಅನ್ನು ಪೆಗಾಸಸ್ ಎನ್‌ಕ್ರಿಪ್ಟ್ ಮಾಡುತ್ತದೆ.

ಫೋನ್ ಅನ್ನು ಹೇಗೆ ಹ್ಯಾಕ್ ಮಾಡುತ್ತೆ?
ಬಳಕೆದಾರ ಲಿಂಕ್ ಮಾಡಿದಾಗ ಗೊತ್ತಿಲ್ಲದಂತೆ ಪೆಗಾಸಸ್ ಆತನ ಮೊಬೈಲ್‌ನಲ್ಲಿ ಇನ್‌ಸ್ಟಾಲ್ ಆಗುತ್ತದೆ. ಬಳಿಕ ವಾಟ್ಸಾಪ್‌ನಂತಹ ಅಪ್ಲಿಕೇಷನ್‌ಮೂಲಕ ವಾಯ್ಸ್ ಕಾಲ್ಸ್‌ನಲ್ಲಿರುವ ಸೆಕ್ಯೂರಿಟಿ ಬಸ್ ಮೂಲಕ ಇನ್‌ಸ್ಟಾಲ್ ಮಾಡಲಾಗುತ್ತದೆ. ಅಲ್ಲದೆ, ಕೇವಲ ಮಿಸ್ಡ್‌ಕಾಲ್ ಕೊಡುವ ಮೂಲಕವೂ ಸಾಫ್ಟ್‌ವೇರ್ ಇನ್‌ಸ್ಟಾಲ್ ಆಗಲಿದೆ.
ಪೆಗಾಸಸ್ ದಾಳಿ ಮಾಡುವುದು ಕಣ್ಣಿಗೆ ಕಾಣುವುದಿಲ್ಲ, ತನ್ನ ಫೋನ್ ಪೆಗಾಸಸ್‌ನೊಂದಿಗೆ ರಾಜಿ ಮಾಡಿಕೊಂಡಿದೆ ಎಂಬ ಸಣ್ಣ ಸುಳಿವು ಕೂಡ ಬಳಕೆದಾರರಿಗೆ ಬಿಟ್ಟುಕೊಡುವುದಿಲ್ಲ. ಯಾವ ಫೋನ್‌ಗೆ ಹ್ಯಾಕ್ ಮಾಡಬೇಕೆಂದು ಹ್ಯಾಕರ್ ನಿರ್ಧರಿಸುತ್ತಾರೋ, ಆ ಫೋನ್‌ಗೆ ಮೊದಲು ದುರುದ್ದೇಶಪೂರಿತ ವೆಬ್‌ಸೈಟ್ ಲಿಂಕ್‌ಗಳನ್ನು ಕಳುಹಿಸಲಾಗುತ್ತದೆ.-
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್‌ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ












Click it and Unblock the Notifications