ಸಂಸತ್ತಿನ ವಿಶೇಷ ಅಧಿವೇಶನ: ಐತಿಹಾಸಿಕ ಮಸೂದೆಗಳ ಮಂಡನೆಗೆ ಮುಂದಾದ ಕೇಂದ್ರ ಸರ್ಕಾರ- ಯಾವುವು ತಿಳಿಯಿರಿ
ನವದೆಹಲಿ, ಸೆಪ್ಟೆಂಬರ್ 07: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನ ಕರೆದಿದೆ. ಈ ಅಧಿವೇಶನವು ಸೆಪ್ಟೆಂಬರ್ 18 ರಿಂದ ಆರಂಭವಾಗಲಿದ್ದು 5 ದಿನಗಳ ಕಾಲ ನಡೆಯಲಿದೆ. ಈ ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ಮೋದಿ ಸರ್ಕಾರದ ಅವಧಿ ಮುಂದಿನ ವರ್ಷ ಮೇ ತಿಂಗಳಿನಲ್ಲಿ ಕೊನೆಗೊಳ್ಳಲಿದೆ. ಇದಕ್ಕೂ ಮುನ್ನ ಅಧಿವೇಶನ ಕರೆದಿರುವುದರ ಕುರಿತು ಹಲವಾರು ಚರ್ಚೆಗಳು ಮುನ್ನೆಲೆಗೆ ಬಂದಿವೆ.

ಸಂಸತ್ತಿನ ವಿಶೇಷ ಅಧಿವೇಶನವನ್ನು ಸೆಪ್ಟೆಂಬರ್ 18 ರಿಂದ 22 ರ ವರೆಗೆ ನಡೆಸಲಾಗುತ್ತಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ ನೀಡಿದ್ದಾರೆ. ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಫಲಪ್ರದ ಚರ್ಚೆಗಳಾಬೇಕೆಂದು ನಾವು ಆಶಿಸುತ್ತೇವೆ ಎಂದು ಜೋಶಿ ಹೇಳಿದ್ದಾರೆ.
ಈ ಅಧಿವೇಶನವನ್ನು ಹೊಸ ಸಂಸತ್ ಭವನದಲ್ಲಿ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ. ಈ ವಿಶೇಷ ಅಧಿವೇಶನದಲ್ಲಿ ಮಹತ್ವದ ಮಸೂದೆಗಳನ್ನು ಮುಂಡಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ, ಶುಕ್ರವಾರದಂದು 'ಒಂದು ರಾಷ್ಟ್ರ, ಒಂದು ಚುನಾವಣೆ', ಶನಿವಾರದಂದು 'ಏಕರೂಪ ನಾಗರಿಕ ಸಂಹಿತೆ ಮಸೂದೆ', ಭಾನುವಾರದಂದು 'ಮಹಿಳಾ ಮೀಸಲಾತಿ ಮಸೂದೆ', ಸೋಮವಾರದಂದು 'ಹಿಂದುಳಿದ ವರ್ಗಗಳ ಉಪ ವರ್ಗೀಕರಣ ಮಸೂದೆ', ಮಂಗಳವಾರದಂದು 'ಇಂಡಿಯಾ-ಭಾರತ್ ಹೆಸರು ಬದಲಾವಣೆ' ಗಳನ್ನು ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಪ್ರತಿಪಕ್ಷಗಳ ವಿರೋಧ
ಇಂಡಿಯಾ-ಭಾರತ್ ಹೆಸರು ಬದಲಾವಣೆ ಹಾಗೂ ಒಂದು ದೇಶ, ಒಂದು ಚುನಾವಣೆ ಮಸೂದೆಗಳನ್ನು ಕೇಂದ್ರ ಸರ್ಕಾರ ಮಂಡಿಸಬಹುದೆಂದು ವಿರೋಧ ಪಕ್ಷಗಳು ಹೇಳಿವೆ. ಇಂಡಿಯಾ ಹೆಸರನ್ನು ಭಾರತ್ ಎಂದು ಬದಲಾವಣೆ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿವೆ.
ಒಂದು ದೇಶ, ಒಂದು ಚುನಾವಣೆ ಮೂಲಕ ರಾಜ್ಯ ಸರ್ಕಾರಗಳ ಪರಮಾಧಿಕಾರವನ್ನು ಕಿತ್ತುಕೊಳ್ಳಲು ಕೇಂದ್ರ ಸರ್ಕಾರ ತಂತ್ರ ರೂಪಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
ಕೇಂದ್ರ ಸರ್ಕಾರದ ನಡೆಯ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಲೋಕಸಭೆ ಚುನಾವಣೆಯನ್ನು ಅವಧಿಗೂ ಮೊದಲೇ ನಡೆಸುವುದು ಮೋದಿ ಸರ್ಕಾರದ ಕುತಂತ್ರವಾಗಿದೆ. ಈ ಮೂಲಕ ಪ್ರತಿಪಕ್ಷಗಳ ಮೈತ್ರಿಕೂಟ 'ಇಂಡಿಯಾ'ಗೆ ಸಮಯ ಕೊಡದೇ ಚುನಾವಣೆಗೆ ಹೋಗುವುದಕ್ಕೆ ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದ್ದಾರೆ.
ಈ ವರ್ಷದ ಡಿಸೆಂಬರ್‌ನಲ್ಲಿ ಭಾರತೀಯ ಜನತಾ ಪಕ್ಷವು ಲೋಕಸಭೆ ಚುನಾವಣೆಯನ್ನು ನಡೆಸಬಹುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.
ಈ ವರ್ಷದ ಡಿಸೆಂಬರ್‌ನಲ್ಲಿ ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್‌ಗಡ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ಚುನಾವಣಾ ಸಮೀಕ್ಷೆಗಳ ಪ್ರಕಾರ ಬಿಜೆಪಿಗೆ ಹಿನ್ನೆಡೆಯಾಗಲಿದೆ ಎಂದು ತಿಳಿದುಬಂದಿದೆ. ಈ ಫಲಿತಾಂಶಗಳು ಲೋಕಸಭೆ ಚುನಾವಣೆ ಮೇಲೆ ಪರಿಣಾಮ ಬೀರಲಿವೆ ಎಂಬುದು ಬಿಜೆಪಿ ನಾಯಕರ ಅಭಿಪ್ರಾಯವಾಗಿದೆ ಎಂದು ತಜ್ಞರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅವಧಿಗೂ ಮುನ್ನ ಲೋಕಸಭೆ ಚುನಾವಣೆ ನಡೆಸಬಹುದು ಎಂಬ ಮಾತುಗಳು ಕೇಳಿಬಂದಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications