• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಯಾವ ಮಾನದಂಡಗಳ ಮೇಲೆ ರಾಜ್ಯಗಳಿಗೆ ಕೊರೊನಾ ಲಸಿಕೆ ಹಂಚಿಕೆ?

|

ನವದೆಹಲಿ, ಏಪ್ರಿಲ್ 23: ಭಾರತದಲ್ಲಿ ಕೊರೊನಾವೈರಸ್ ನಿಯಂತ್ರಿಸುವ ಉದ್ದೇಶದಿಂದ 18 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡುವ ಅಭಿಯಾನವನ್ನು ಮೇ 1ರಿಂದ ಆರಂಭಿಸುವುದಕ್ಕೆ ಸರ್ಕಾರ ಮುಂದಾಗಿದೆ. ಈ ಹಂತದಲ್ಲಿ ಯಾವ ರಾಜ್ಯಗಳಿಗೆ ಎಷ್ಟು ಲಸಿಕೆಯನ್ನು ನೀಡಬೇಕು ಎಂಬುದನ್ನು ಕೇಂದ್ರ ಸರ್ಕಾರವೇ ತೀರ್ಮಾನಿಸಲಿದೆ.

ರಾಜ್ಯಗಳಿಗೆ ಈವರೆಗೂ ನೀಡಿರುವ ಕೊವಿಡ್-19 ಲಸಿಕೆ ಪ್ರಮಾಣ ಹಾಗೂ ಅವುಗಳ ವಿತರಣೆಯಲ್ಲಿ ರಾಜ್ಯಗಳ ಬದ್ಧತೆ ಮತ್ತು ಲಸಿಕೆ ಹಾನಿ ಮಾಡಿರುವ ಪ್ರಮಾಣವನ್ನು ಮಾನದಂಡವಾಗಿ ಇಟ್ಟುಕೊಂಡು ಲಸಿಕೆಯನ್ನು ವಿತರಿಸುವುದಕ್ಕೆ ಕೇಂದ್ರ ಸರ್ಕಾರ ಚಿಂತಿಸುತ್ತಿದೆ.

18 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆಗೆ ಹೆಸರು ನೋಂದಣಿ ಮಾಡುವುದು ಹೇಗೆ?18 ವರ್ಷ ಮೇಲ್ಪಟ್ಟವರು ಕೊರೊನಾ ಲಸಿಕೆಗೆ ಹೆಸರು ನೋಂದಣಿ ಮಾಡುವುದು ಹೇಗೆ?

ಮುಂದಿನ 15 ದಿನಗಳ ಅವಧಿಗೆ ಯಾವ ರಾಜ್ಯಗಳಿಗೆ ಎಷ್ಟು ಪ್ರಮಾಣದ ಲಸಿಕೆಯನ್ನು ಹಂಚಿಕೆ ಮಾಡಬೇಕು ಎಂಬುದನ್ನು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅದಾದ ಬಳಿಕ ಮುಂದಿನ 15 ದಿನಗಳಿಗೆ ಯಾವ ರಾಜ್ಯಕ್ಕೆ ಎಷ್ಟು ಲಸಿಕೆ ಎಂಬುದನ್ನು ನಿಗದಿಗೊಳಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ತಿಳಿಸಿದ್ದಾರೆ.

ಕೊರೊನಾ ಲಸಿಕೆ ಹಂಚಿಕೆಗೆ ಮಾನದಂಡವೇನು?

ರಾಜ್ಯಗಳು ಮೊದಲ ಏಳು ದಿನಗಳಲ್ಲಿ ಕೊರೊನಾವೈರಸ್ ಲಸಿಕೆಯ ವಿತರಣೆ ರೀತಿ ಮತ್ತು ಬಳಕೆ ಪ್ರಮಾಣದ ಆಧಾರ ಹಾಗೂ ಮಾನದಂಡದ ಮೇಲೆ ಯಾವ ರಾಜ್ಯಕ್ಕೆ ಎಷ್ಟು ಪ್ರಮಾಣದಲ್ಲಿ ಲಸಿಕೆಯನ್ನು ಹಂಚಿಕೆ ಮಾಡಬೇಕು ಎಂಬುದನ್ನು ನಿಗದಿಗೊಳಿಸಲಾಗುತ್ತದೆ. ರಾಜ್ಯದಲ್ಲಿನ ಸೋಂಕಿತ ಪ್ರಕರಣಗಳು ಲಸಿಕೆ ಹಂಚಿಕೆಯ ಎರಡನೇ ಮಾನದಂಡವಾಗಿದೆ. ಮೂರನೇಯದಾಗಿ ರಾಜ್ಯದಲ್ಲಿ ಈ ಮೊದಲು ನೀಡಿರುವ ಲಸಿಕೆಯಲ್ಲಿ ಎಷ್ಟು ಪ್ರಮಾಣದ ಲಸಿಕೆಯನ್ನು ವ್ಯರ್ಥ ಮಾಡಲಾಗಿದೆ ಎಂಬುದನ್ನು ಗಣನೆಗೆ ತೆಗೆದುಕೊಳ್ಳಲಾಗುತ್ತದೆ. ವ್ಯರ್ಥವಾಗಿ ಹಾಳು ಮಾಡಿದಷ್ಟು ಲಸಿಕೆ ಪ್ರಮಾಣವನ್ನು ಆಯಾ ರಾಜ್ಯಗಳು ಕಳೆದುಕೊಳ್ಳಲಿವೆ ಎಂದು ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಹೇಳಿದ್ದಾರೆ.

ರಾಜ್ಯವಾರು ಲಸಿಕೆ ವಿತರಣೆಗೆ ನಿರ್ಧಾರ:

ಜನವರಿ 16ರಂದು ಮೊದಲ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾದ ದಿನದಿಂದ ಈವರೆಗೂ ಹೆಚ್ಚು ಸೋಂಕಿತ ಪ್ರಕರಣಗಳು ವರದಿ ಆಗುತ್ತಿರುವ ಜಿಲ್ಲೆಗಳನ್ನು ಆಧಾರವಾಗಿ ಇಟ್ಟುಕೊಂಡು ಲಸಿಕೆ ಹಂಚಿಕೆ ಮಾಡಲಾಗಿತ್ತು. ಆದರೆ ಇದೇ ಮೊದಲ ಬಾರಿಗೆ ರಾಜ್ಯವಾರು ಲಸಿಕೆ ಹಂಚಿಕೆಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಶೇ.50ರಷ್ಟು ಲಸಿಕೆ ಮಾರಾಟಕ್ಕೆ ಕಂಪನಿ ಮುಂದು:

ಕೊರೊನಾವೈರಸ್ ಲಸಿಕೆ ಉತ್ಪಾದಕ ಕಂಪನಿಗಳು ಶೇ.50ರಷ್ಟು ಲಸಿಕೆಯನ್ನು ಸರ್ಕಾರಕ್ಕೆ ಹಾಗೂ ಶೇ.50ರಷ್ಟು ಲಸಿಕೆಯನ್ನು ದೇಶದ ತೆರೆದ ಮಾರುಕಟ್ಟೆಯಲ್ಲಿ ಸರ್ಕಾರ ನಿಗದಿಪಡಿಸಿದ ಬೆಲೆಗೆ ಮಾರಾಟ ಮಾಡುವುದಕ್ಕೆ ಮುಂದಾಗಿವೆ. ಇನ್ನೊಂದು ಕಡೆ ಜಾನ್ಸನ್ ಆಂಡ್ ಜಾನ್ಸನ್, ಫೈಜರ್ ಹಾಗೂ ಮಾಡರ್ನಾ ಲಸಿಕೆಯನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳುವುದಕ್ಕೆ ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ದೇಶದಲ್ಲಿ ಲಸಿಕೆ ವಿತರಣೆ ಪ್ರಮಾಣ:

ಭಾರತದಲ್ಲಿ ಈವರೆಗೆ 13,23,30,644 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಈವರೆಗೂ 92,41,384 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 59,03,368 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,17,27,708 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 60,73,622 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,55,10,426 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 18,91,160 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,85,01,906 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 64,97,155 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
What Is The Central Govt Criteria To Distribute Coronavirus Vaccine To States.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X