ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಸಚಿವರೇ ಸತ್ಯ ಹೇಳಿ'; ಕೊರೊನಾವೈರಸ್ ಲಸಿಕೆ ವಿತರಣೆ ಬಗ್ಗೆ ಪಿ ಚಿದಂಬರಂ ಪ್ರಶ್ನೆ

|
Google Oneindia Kannada News

ನವದೆಹಲಿ, ಜುಲೈ 13: ಭಾರತದಲ್ಲಿ ಕೊರೊನಾವೈರಸ್ ಲಸಿಕೆಯ ಸಮರ್ಪಕ ಪೂರೈಕೆ ಮತ್ತು ವಿತರಣೆಯಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಟೀಕಿಸಿದ್ದಾರೆ.

ನವದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು, ಕೇಂದ್ರ ಸರ್ಕಾರ ಭರವಸೆ ನೀಡಿದಂತೆ ಡಿಸೆಂಬರ್ ಅಂತ್ಯದ ವೇಳೆಗೆ ಎಲ್ಲ ವಯಸ್ಕರಿಗೆ ಕೊವಿಡ್-19 ಲಸಿಕೆ ನೀಡುವುದಕ್ಕೆ ಸಾಧ್ಯವಾಗುವುದಿಲ್ಲ ಎಂದು ಕಿಡಿ ಕಾರಿದ್ದಾರೆ.

ಸ್ಪುಟ್ನಿಕ್-ವಿ ಸೂಪರ್: ಕೊರೊನಾವೈರಸ್ ಡೆಲ್ಟಾ ರೂಪಾಂತರಕ್ಕೆ ರಷ್ಯಾ ಲಸಿಕೆಯೇ ಮದ್ದು!?ಸ್ಪುಟ್ನಿಕ್-ವಿ ಸೂಪರ್: ಕೊರೊನಾವೈರಸ್ ಡೆಲ್ಟಾ ರೂಪಾಂತರಕ್ಕೆ ರಷ್ಯಾ ಲಸಿಕೆಯೇ ಮದ್ದು!?

ದೆಹಲಿ ಹಾಗೂ ಒಡಿಶಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಈಗಾಗಲೇ ಕೊರೊನಾವೈರಸ್ ಲಸಿಕೆ ಖಾಲಿಯಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನಿಯಮಿತ ಹಾಗೂ ನಿರಂತರ ಲಸಿಕೆ ಪೂರೈಕೆ ಬಗ್ಗೆ ಯೋಜನೆ ರೂಪಿಸಲಿದೆ ಎಂದು ಚಿದಂಬರಂ ಸಲಹೆ ನೀಡಿದ್ದಾರೆ.

ಕೊವಿಡ್-19 ಲಸಿಕೆ ವಿತರಣೆ ಬಗ್ಗೆ ಚಿದಂಬರಂ ಟೀಕೆ

ಕೊವಿಡ್-19 ಲಸಿಕೆ ವಿತರಣೆ ಬಗ್ಗೆ ಚಿದಂಬರಂ ಟೀಕೆ

"ಕೊರೊನಾವೈರಸ್ ಲಸಿಕೆಯ ಕೊರತೆ ಒಂದು ಸತ್ಯವಾಗಿದೆ. ಲಸಿಕೆ ಉತ್ಪಾದನೆಯು ಉತ್ಪ್ರೇಕ್ಷೆಯಾಗಿದೆ. ಲಸಿಕೆ ಆಮದು ಪ್ರಮಾಣದ ಬಗ್ಗೆ ಎಲ್ಲವೂ ರಹಸ್ಯವಾಗಿದೆ. ಇದರ ಮಧ್ಯೆ 2021ರ ಡಿಸೆಂಬರ್ ವೇಳೆಗೆ ದೇಶದ ಪ್ರತಿಯೊಬ್ಬ ವಯಸ್ಕರಿಗೆ ಲಸಿಕೆ ನೀಡಲಾಗುವುದು ಎಂದು ಹೇಳುವುದು ಕೇವಲ ಬೂಟಾಟಿಕೆ ಆಗುತ್ತದೆ," ಎಂದು ಮಾಜಿ ಸಚಿವ ಪಿ ಚಿದಂಬರಂ ಟೀಕಿಸಿದ್ದಾರೆ.

ಲಸಿಕೆ ಸರಬರಾಜು ಮತ್ತು ವಿತರಣೆ ಕಾರ್ಯಕ್ರಮದ ಮಾಹಿತಿ

ಲಸಿಕೆ ಸರಬರಾಜು ಮತ್ತು ವಿತರಣೆ ಕಾರ್ಯಕ್ರಮದ ಮಾಹಿತಿ

"ದೇಶದಲ್ಲಿ ಮುಂದೆ ಯಾವ ರೀತಿ ಸಮರ್ಪಕ ಹಾಗೂ ನಿರಂತರವಾಗಿ ಕೊರೊನಾವೈರಸ್ ಲಸಿಕೆಯನ್ನು ಸರಬರಾಜು ಮಾಡಲಾಗುತ್ತದೆ. ಕೊವಿಡ್-19 ಲಸಿಕೆ ವಿತರಣೆ ಕಾರ್ಯಯೋಜನೆ ಹೇಗೆ ನಡೆಯಲಿದೆ. ಲಸಿಕೆ ವಿತರಣೆ ಕಾರ್ಯಕ್ರಮದ ಬಗ್ಗೆ ನೂತನ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಸತ್ಯವನ್ನು ಹೇಳುತ್ತಾರೆಯೇ," ಎಂದು ಮಾಜಿ ಸಚಿವ ಪಿ ಚಿದಂಬರಂ ಪ್ರಶ್ನೆ ಮಾಡಿದ್ದಾರೆ.

ದೇಶದಲ್ಲಿ ತಗ್ಗಿದ ಕೊವಿಡ್-19 ಲಸಿಕೆ ವಿತರಣೆ ಸಂಖ್ಯೆ

ದೇಶದಲ್ಲಿ ತಗ್ಗಿದ ಕೊವಿಡ್-19 ಲಸಿಕೆ ವಿತರಣೆ ಸಂಖ್ಯೆ

ಪ್ರತಿನಿತ್ಯ 80 ರಿಂದ 90 ಲಕ್ಷದಾಟುತ್ತಿದ್ದ ಕೊರೊನಾವೈರಸ್ ಲಸಿಕೆ ವಿತರಣೆಯ ಸಂಖ್ಯೆ ಇದೀಗ ಅರ್ಧಕ್ಕರ್ಧ ಇಳಿಕೆಯಾಗಿದೆ. ಸೋಮವಾರ ರಾತ್ರಿ 7 ಗಂಟೆ ವೇಳೆಗೆ 37,03,423 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ 178 ದಿನದಲ್ಲಿ ಒಟ್ಟು 38,11,04,836 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದ 8 ರಾಜ್ಯಗಳಲ್ಲಿ ಮಾತ್ರ 50 ಲಕ್ಷ ಜನರಿಗೆ ಲಸಿಕೆ

ದೇಶದ 8 ರಾಜ್ಯಗಳಲ್ಲಿ ಮಾತ್ರ 50 ಲಕ್ಷ ಜನರಿಗೆ ಲಸಿಕೆ

ಉತ್ತರ ಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ, ತಮಿಳುನಾಡು, ಬಿಹಾರ, ಗುಜರಾತ್, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ 18 ರಿಂದ 44 ವಯೋಮಾನದ 50 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ವಿತರಿಸಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶ, ಅಸ್ಸಾಂ, ಛತ್ತೀಸ್‌ಗಢ, ದೆಹಲಿ, ಹರಿಯಾಣ, ಜಾರ್ಖಂಡ್, ಕೇರಳ, ತೆಲಂಗಾಣ, ಹಿಮಾಚಲ ಪ್ರದೇಶ, ಒಡಿಶಾ, ಪಂಜಾಬ್, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದಲ್ಲಿ 10 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

English summary
What Is The Fact: Ex-Minister P Chidambaram Questioned About Coronavirus Vaccination Programme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X