ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಚ್ಚರ ತಪ್ಪದಿರಿ: ಭಾರತದಲ್ಲಿ ಕೊರೊನಾ ಕಡಿಮೆಯಾಗಲು ಇದೇ ಕಾರಣ!?

|
Google Oneindia Kannada News

ನವದೆಹಲಿ, ಮೇ 03: ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಎರಡನೇ ಅಲೆ ಆರಂಭವಾದ ಬಳಿಕ ಮೊದಲ ಬಾರಿಗೆ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಪ್ರತಿನಿತ್ಯ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಏರುಮುಖವಾಗಿ ಸಾಗುತ್ತಿತ್ತು. 4 ಲಕ್ಷದ ಗಡಿ ದಾಟಿದ್ದ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಭಾನುವಾರ ಒಂದು ದಿನದಲ್ಲಿ 3.68 ಲಕ್ಷ ಜನರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ.

 ಕೇಂದ್ರ ಸರಕಾರದ ವಿರುದ್ದ ಕೊರೊನಾ ತಜ್ಞರ ಸಮಿತಿಯ ಗಂಭೀರ ಆರೋಪ ಕೇಂದ್ರ ಸರಕಾರದ ವಿರುದ್ದ ಕೊರೊನಾ ತಜ್ಞರ ಸಮಿತಿಯ ಗಂಭೀರ ಆರೋಪ

ಮಹಾರಾಷ್ಟ್ರ, ಕರ್ನಾಟಕ, ಕೇರಳ, ನವದೆಹಲಿ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ ಶುಕ್ರವಾರ 4.01 ಲಕ್ಷ ಹಾಗೂ ಶನಿವಾರ 3.92 ಲಕ್ಷ ರೂಪಾಯಿ ಹಾಗೂ ಭಾನುವಾರ 3.68 ಲಕ್ಷ ಕೊವಿಡ್-19 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.

ಕೊವಿಡ್-19 ಸೋಂಕಿನ ತಪಾಸಣೆ ಸಂಖ್ಯೆ

ಕೊವಿಡ್-19 ಸೋಂಕಿನ ತಪಾಸಣೆ ಸಂಖ್ಯೆ

ಕಳೆದ ಭಾನುವಾರ ಕೇವಲ 15 ಲಕ್ಷ ಮಂದಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿದೆ. ಈ ಹಿನ್ನೆಲೆ ಕೊವಿಡ್-19 ಸೋಂಕಿತ ಪ್ರಕರಣ ಸಂಖ್ಯೆ ಇಳಿಕೆಯಾಗಿದೆ ಎಂದು ಅಂದಾಜಿಸಲಾಗಿದೆ. ಕಳೆದ ಶನಿವಾರ 18 ಲಕ್ಷ ಹಾಗೂ ಶುಕ್ರವಾರ 19 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಸೋಂಕಿನ ತಪಾಸಣೆ ನಡೆಸಲಾಗಿತ್ತು. ಕೊವಿಡ್-19 ಸೋಂಕು ತಪಾಸಣೆ ಸಂಖ್ಯೆಯನ್ನು ಕಡಿಮೆ ಮಾಡುವುದರಿಂದ ಯಾವುದೇ ಪ್ರಯೋಜನೆ ಆಗುವುದಿಲ್ಲ. ಭಾನುವಾರ ಕಡಿಮೆ ಜನರನ್ನು ತಪಾಸಣೆಗೆ ಒಳಪಡಿಸಿದ್ದಲ್ಲಿ ಸೋಮವಾರ ನಡೆಸಿದ ತಪಾಸಣೆಯಲ್ಲಿ ಹೆಚ್ಚು ಸೋಂಕಿತ ಪ್ರಕರಣಗಳು ವರದಿ ಆಗುತ್ತವೆ ಎಂದು ತಜ್ಞ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಕೊವಿಡ್-19 ಸೋಂಕು ತಪಾಸಣೆ ಇಳಿಕೆ ಸರಿಯಲ್ಲ

ಕೊವಿಡ್-19 ಸೋಂಕು ತಪಾಸಣೆ ಇಳಿಕೆ ಸರಿಯಲ್ಲ

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ಸಂಖ್ಯೆಯನ್ನು ಭಾನುವಾರ ಇಳಿಕೆಯಾಗಿತ್ತು. ಇದು ಭಾನುವಾರದ ಮಟ್ಟಿಗೆ ಕೊವಿಡ್-19 ಸೋಂಕಿತ ಪ್ರಕರಣಗಳನ್ನು ತಗ್ಗಿಸುತ್ತದೆಯೇ ವಿನಃ ಮತ್ತೆ ಸೋಮವಾರ ಅತಿಹೆಚ್ಚು ಪ್ರಕರಣಗಳು ವರದಿಯಾಗುತ್ತವೆ. ಅಲ್ಲದೇ ಮುಂದಿನ ಎರಡು ದಿನಗಳಲ್ಲಿ ಅತಿಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗುತ್ತವೆ.

ಕೊವಿಡ್-19 ಸಕ್ರಿಯ ಪ್ರಕರಣಗಳಲ್ಲಿ ಏರಿಕೆ

ಕೊವಿಡ್-19 ಸಕ್ರಿಯ ಪ್ರಕರಣಗಳಲ್ಲಿ ಏರಿಕೆ

ಭಾರತದಲ್ಲಿ ಕಳೆದ ನಾಲ್ಕು ದಿನಗಳಲ್ಲಿ ಪ್ರತಿನಿತ್ಯ 1 ಲಕ್ಷ ಕೊವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಆದರೆ ಭಾನುವಾರ 63,998 ಸಕ್ರಿಯ ಪ್ರಕರಣಗಳಿದ್ದು, 20 ದಿನಗಳ ಹಿಂದೆನಲ್ಲೇ ಮೊದಲ ಬಾರಿಗೆ ಅತಿಕಡಿಮೆ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಳೆದ ಏಪ್ರಿಲ್ 13 ರಿಂದ ಏಪ್ರಿಲ್ 28ರವರೆಗೂ ಪ್ರತಿನಿತ್ಯ 1 ಲಕ್ಷಕ್ಕಿಂತ ಹೆಚ್ಚು ಕೊವಿಡ್-19 ಸಕ್ರಿಯ ಪ್ರಕರಣಗಳು ವರದಿಯಾಗಿದೆ.

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳು

ಕೊರೊನಾವೈರಸ್ ಸಾಂಕ್ರಾಮಿಕ ಅಲೆಯ ಪ್ರಮಾಣ ಕಡಿಮೆಯಾಗಿಲ್ಲ. ಆದರೆ ಕೊವಿಡ್-19 ಸೋಂಕು ತಪಾಸಣೆ ವೇಗ ತಗ್ಗಿದೆ. ಈ ಹಿನ್ನೆಲೆ ಕಳೆದ 24 ಗಂಟೆಗಳಲ್ಲಿ 3,68,147 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಂದೇ ದಿನ 3417 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 3,00,732 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 1,99,25,604 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 16,29,3003 ಸೋಂಕಿತರು ಈವರೆಗೂ ಗುಣಮುಖರಾಗಿದ್ದು,2,18,959 ಸೋಂಕಿತರು ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 34,13,642 ಕೊವಿಡ್-19 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

English summary
What Is The Reason Behind Biggest Drop In Numbers Of Second Coronavirus Wave In India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X