Waqf Bill: ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ; ಗದ್ದಲದ ಹಿಂದಿನ ಅಸಲಿ ಕಾರಣವೇನು ಗೊತ್ತಾ?
ನವದೆಹಲಿ, ಏಪ್ರಿಲ್ 02: ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಸಂಸತ್ತಿನಲ್ಲಿ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಇಂದು(ಬುಧವಾರ) ಪರ ವಿರೋಧ ಚರ್ಚೆ ನಡೆಯಿತು. ಪ್ರಧಾನಿ ಮೋದಿ ಸರ್ಕಾರ ಇಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನ ಮಂಡಿಸಲಾಗಿದೆ. ಕೇಂದ್ರ ಸಂಸದೀಯ ವ್ಯವಹಾರಗಳು ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಲೋಕಸಭೆಯಲ್ಲಿ ವಕ್ಫ್ ಮಸೂದೆಯನ್ನ ಮಂಡಿಸಿದರು.
ಮುಸ್ಲಿಂ ಸಂಘಟನೆಗಳು ಹಾಗೂ ವಿರೋಧ ಪಕ್ಷಗಳು ಈ ಮಸೂದೆ ಮಂಡನೆಗೆ ಭಾರೀ ವಿರೋಧ ವ್ಯಕ್ತಪಡಿಸಿವೆ. ಈ ಮಸೂದೆಗೆ ಅನುಮೋದನೆ ಪಡೆಯುವ ಮುನ್ನವೇ ಲೋಕಸಭೆಯಲ್ಲಿ ಪರ-ವಿರೋಧ ಚರ್ಚೆಗಳನ್ನ ಮಾಡಲಾಯಿತು. ಸದನದಲ್ಲಿನ ಸಂಖ್ಯಾಬಲದ ಆಟದಿಂದ, ಸರ್ಕಾರ ಅದನ್ನು ಅಂಗೀಕರಿಸುತ್ತದೆ ಎಂದು ತೋರುತ್ತದೆ. ಆದರೆ, ಪ್ರತಿಪಕ್ಷಗಳು ತಮ್ಮ ಒಗ್ಗಟ್ಟನ್ನು ಅವಲಂಬಿಸಿ ವಿಫಲಗೊಳಿಸುವುದಾಗಿ ಹೇಳಿಕೊಳ್ಳುತ್ತಿವೆ. ವಿರೋಧ ಪಕ್ಷವು ಇದನ್ನು ಅಂಗೀಕಾರವಾಗದಂತೆ ತಡೆಯುತ್ತದೆ ಎಂಬ ಭರವಸೆ ವ್ಯಕ್ತಪಡಿಸಿದೆ.

ವಕ್ಫ್ ಮಸೂದೆ ಎಂದರೇನು?
ವಕ್ಫ್ (ತಿದ್ದುಪಡಿ) ಮಸೂದೆ 2024, 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮಸೂದೆಯಾಗಿದೆ. ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆಯನ್ನ ಇಂದು ಲೋಕಸಭೆಯಲ್ಲಿ ಮಂಡಿಸಲಿದೆ. ಈ ಬಗ್ಗೆ ಚರ್ಚೆ ನಡೆದು ಅದನ್ನು ಅಂಗೀಕರಿಸಲು ಪ್ರಯತ್ನ ನಡೆಸಿದೆ. ವಕ್ಫ್ ಆಸ್ತಿಗಳ ನಿರ್ವಹಣೆ, ಪಾರದರ್ಶಕತೆ ಮತ್ತು ದುರುಪಯೋಗ ತಡೆಗಟ್ಟುವಿಕೆಗಾಗಿ ನಿಯಮಗಳನ್ನು ಬಿಗಿಗೊಳಿಸುವುದು ಇದರ ಉದ್ದೇಶವಾಗಿದೆ. ಇದು ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರು ಮತ್ತು ಮಹಿಳಾ ಸದಸ್ಯರನ್ನು ಸೇರಿಸುವುದು, ಕಲೆಕ್ಟರ್‌ಗೆ ಆಸ್ತಿಯನ್ನು ಸಮೀಕ್ಷೆ ಮಾಡುವ ಹಕ್ಕನ್ನು ನೀಡುವುದು ಮತ್ತು ವಕ್ಫ್ ನ್ಯಾಯಮಂಡಳಿಯ ನಿರ್ಧಾರಗಳನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ನಿಬಂಧನೆಯನ್ನು ಒಳಗೊಂಡಿದೆ.
ವಕ್ಫ್ ಮಸೂದೆಯ ಪರ-ವಿರೋಧ ಯಾರು?
ಪ್ರಧಾನಿ ಮೋದಿ ಸರ್ಕಾರ ಇಂದು ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನ ಮಂಡಿಸಲಾಗಿದೆ.ಇಡೀ ಮೋದಿ ಸರ್ಕಾರ ಅದನ್ನು ಅಂಗೀಕರಿಸಲು ಒಗ್ಗಟ್ಟಾಗಿದೆ. ಬಿಹಾರದ ಎನ್‌ಡಿಎ ಕೂಡ ಈಗ ಈ ಮಸೂದೆಯನ್ನು ಬೆಂಬಲಿಸುವುದಾಗಿ ಘೋಷಿಸಿದೆ. ಬಿಜೆಪಿ ಮತ್ತು ಎನ್‌ಡಿಎ ಮಿತ್ರಪಕ್ಷಗಳಾದ ಜೆಡಿಯು ಮತ್ತು ಟಿಡಿಪಿಗಳು ಮಸೂದೆಯನ್ನು ಬೆಂಬಲಿಸುತ್ತಿವೆ. ಇನ್ನೂ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷವು ಈ ಮಸೂದೆಯನ್ನು ವಿರೋಧಿಸುತ್ತಿದೆ. ಈ ಕುರಿತು ವಿರೋಧ ಪಕ್ಷವು ಸಭೆ ಕರೆದು ಲೋಕಸಭೆಯಲ್ಲಿ ಅದರ ವಿರುದ್ಧ ಮತ ಚಲಾಯಿಸುವುದಾಗಿ ಪ್ರತಿಜ್ಞೆ ಮಾಡಿತು. ಕಾಂಗ್ರೆಸ್, ಆರ್‌ಜೆಡಿ, ಟಿಎಂಸಿ, ಡಿಎಂಕೆ, ಎಐಎಂಐಎಂ, ಎಸ್‌ಪಿ ಮತ್ತು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ (ಎಐಎಂಪಿಎಲ್‌ಬಿ) ಇದನ್ನು ವಿರೋಧಿಸುತ್ತಿವೆ. ಇನ್ನೂ ಲೋಕಸಭೆಯಲ್ಲಿ NDA 293 ಸಂಸದರ ಬಹುಮತವನ್ನು ಹೊಂದಿದೆ. ವಿರೋಧ ಪಕ್ಷವಾದ ಇಂಡಿಯಾ ಬ್ಲಾಕ್ ಲೋಕಸಭೆಯಲ್ಲಿ 233 ಸಂಸದರನ್ನು ಹೊಂದಿದೆ.
ವಕ್ಫ್ ಮಸೂದೆಯನ್ನ ಯಾಕೆ ವಿರೋಧಿಸುತ್ತಿವೆ?
ವಕ್ಫ್ ಮಸೂದೆ ಬಗ್ಗೆ ಇಂಡಿಯಾ ಮೈತ್ರಿ ಕೂಟ ಧ್ವನಿ ಎತ್ತಿದೆ. ವಿರೋಧ ಪಕ್ಷಗಳು ಮತ್ತು ಮುಸ್ಲಿಂ ಸಂಘಟನೆಗಳು ಇದನ್ನು ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಪರಿಗಣಿಸುತ್ತವೆ. ಈ ಮಸೂದೆಯು ವಕ್ಫ್ ಆಸ್ತಿಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಸರ್ಕಾರದ ಹಸ್ತಕ್ಷೇಪವನ್ನು ಹೆಚ್ಚಿಸುತ್ತದೆ ಎಂದು ಹೇಳಿಕೊಳ್ಳುತ್ತಾರೆ. ಈ ಮಸೂದೆಯನ್ನು ವಿರೋಧಿಸುವಂತೆ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿಯು ವಿರೋಧ ಪಕ್ಷಗಳು ಮತ್ತು ಎನ್‌ಡಿಎ ಮಿತ್ರಪಕ್ಷಗಳಿಗೆ ಮನವಿ ಮಾಡಿದೆ. ಈ ವಕ್ಫ್ ಮಂಡಳಿಯ ಮಸೂದೆಯು ತಾರತಮ್ಯದಿಂದ ಕೂಡಿದ್ದು, ಸಂವಿಧಾನದ 14, 25 ಮತ್ತು 26 ನೇ ವಿಧಿಗಳ ಅಡಿಯಲ್ಲಿ ಮೂಲಭೂತ ಹಕ್ಕುಗಳ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಮಂಡಳಿ ವಾದಿಸುತ್ತದೆ.
ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ಎಎಪಿಯ ಸಂಜಯ್ ಸಿಂಗ್ ಸೇರಿದಂತೆ ಪ್ರತಿಪಕ್ಷಗಳ ಹಿರಿಯ ನಾಯಕರು ಮಂಗಳವಾರ ಈ ಕುರಿತು ಸಭೆ ನಡೆಸಿದ್ದು, ಈ ಮಸೂದೆಯನ್ನು ವಿರೋಧಿಸುವ ಕಾರ್ಯತಂತ್ರದ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ. ಈ ಮಸೂದೆಯೂ ಅಸಂವಿಧಾನಿಕ ಮತ್ತು ವಿಭಜಕ ಎಂಬುದು ಪ್ರತಿಪಕ್ಷಗಳ ವಾದವಾಗಿದೆ. ಪ್ರತಿಪಕ್ಷಗಳ ಶಿಫಾರಸುಗಳನ್ನು ಜಂಟಿ ಸಂಸದೀಯ ಸಮಿತಿ ನಿರ್ಲಕ್ಷಿಸಿದೆ ಎಂದು ಕಾಂಗ್ರೆಸ್ ಮುಖಂಡ ಖಲೀಕುರ್ ರೆಹಮಾನ್ ಅವರು ಹೇಳಿದ್ದಾರೆ.
ಇಡೀ ಪ್ರಕ್ರಿಯೆಯನ್ನು ಅತ್ಯಂತ ಅಸಾಂವಿಧಾನಿಕ ರೀತಿಯಲ್ಲಿ ಮಾಡಲಾಗುತ್ತಿದೆ. ವಿರೋಧ ಪಕ್ಷಗಳ ಹೆಚ್ಚಿನ ಜೆಪಿಸಿ ಸದಸ್ಯರು ಸಲ್ಲಿಸಿದ ಎಲ್ಲಾ ಶಿಫಾರಸುಗಳನ್ನು ಪರಿಗಣಿಸಲಾಗಿಲ್ಲ ಮತ್ತು ಗಣನೆಗೆ ತೆಗೆದುಕೊಳ್ಳಲಾಗಿಲ್ಲ, ಬದಲಿಗೆ, ಬಿಜೆಪಿ ವಿಷಯಗಳನ್ನು ಬುಲ್ಡೋಜರ್ ಮಾಡಲು ಮತ್ತು ಮಸೂದೆಯನ್ನು ಅಂಗೀಕರಿಸಲು ಪ್ರಯತ್ನಿಸುತ್ತಿದೆ ಎಂದು ರೆಹಮಾನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ. ತಿದ್ದುಪಡಿ ಮಸೂದೆಯ ಬಗ್ಗೆ ಒಂದು ಪ್ರಮುಖ ಕಳವಳವೆಂದರೆ, ವಿವಾದಿತ ಆಸ್ತಿಯು ವಕ್ಫ್ ಆಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡುವ ಮೂಲಕ ವಕ್ಫ್ ಮಂಡಳಿಗಳ ಅಧಿಕಾರವನ್ನು ದುರ್ಬಲಗೊಳಿಸುತ್ತದೆ.
ವಕ್ಫ್ ಮಸೂದೆಯ ಪರವಾಗಿ ಸರ್ಕಾರದ ವಾದವೇನು?
ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ವಕ್ಫ್ (ತಿದ್ದುಪಡಿ) ಮಸೂದೆ 2024, 1995 ರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಸೂದೆಯು ವಕ್ಫ್ ಆಸ್ತಿಗಳಲ್ಲಿ ಪಾರದರ್ಶಕತೆಯನ್ನು ತರುತ್ತದೆ. ದುರುಪಯೋಗವನ್ನು ತಡೆಯುತ್ತದೆ ಮತ್ತು ಮುಸ್ಲಿಂ ಮಹಿಳೆಯರು ಮತ್ತು ಬಡವರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ವಾದಿಸುತ್ತದೆ.
ಕಿರಣ್ ರಿಜಿಜು ಹೇಳಿದ್ದೇನು?
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಇಂದು (ಬುಧವಾರ) ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಿದರು. ಈ ಮಸೂದೆ ಕುರಿತು ವಿರೋಧ ಪಕ್ಷದ ಭಾರೀ ಗದ್ದಲದ ನಡುವೆ ಮಸೂದೆಯನ್ನು ಮಂಡಿಸಲಾಯಿತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೇಂದ್ರ ಸಚಿವ ಕಿರಣ್ ರಿಜಿಜು ಅವರನ್ನು ಮಸೂದೆಯನ್ನು ಮಂಡಿಸಲು ಆಹ್ವಾನಿಸಿದರು. ಇಂದಿನ ವಕ್ಫ್ ಮಂಡಳಿಯ ಕಾರ್ಯವೈಖರಿಯ ವಿರುದ್ಧ ಕಠಿಣ ನಿಲುವನ್ನು ವ್ಯಕ್ತಪಡಿಸಿದ ಕಿರಣ್ ರಿಜಿಜು, ನಾವು ಮಸೂದೆಯನ್ನು ಮಂಡಿಸದಿದ್ದರೆ ಸಂಸತ್ತಿನ ಕಟ್ಟಡವನ್ನೂ ವಕ್ಫ್ ಆಸ್ತಿ ಎಂದು ಹೇಳಿಕೊಳ್ಳುತ್ತಿದ್ದರು ಎಂದು ಹೇಳಿದ್ದಾರೆ. ನಾನು ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಎರಡೂ ಸದನಗಳ ಸದಸ್ಯರನ್ನು ಅಭಿನಂದಿಸಲು ಬಯಸುತ್ತೇನೆ. ಒಟ್ಟಾರೆಯಾಗಿ, 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದ ವಕ್ಫ್ ಮಂಡಳಿಗಳ 284 ನಿಯೋಗಗಳು ಜೆಪಿಸಿಯಲ್ಲಿ ತಮ್ಮ ಸಲ್ಲಿಕೆಗಳನ್ನು ನೀಡಿವೆ ಎಂದು ಹೇಳಿದರು.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications