Ajit Pawar: ನಾವು ವಿಮಾನದಲ್ಲಿ ಪ್ರಯಾಣಿಸುವಾಗ…: ಬಾರಾಮತಿ ವಿಮಾನ ಅಪಘಾತದ ಬೆನ್ನಲ್ಲೇ ಅಜಿತ್ ಪವಾರ್ ಟ್ವೀಟ್ ವೈರಲ್
ಮುಂಬೈ: ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಅವರು ಜನವರಿ 28ರ ಬುಧವಾರ ಸಂಭವಿಸಿದ್ದ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದರು. ಅಜಿತ್ ಪವಾರ್ ನಿಧನದ ನಂತರ ಅವರು ಎರಡು ವರ್ಷಗಳ ಹಿಂದೆ ಮಾಡಿದ್ದ ಟ್ವೀಟ್‌ವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಮಹಾರಾಷ್ಟ್ರದ ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದರು. ವಿಮಾನ ಲ್ಯಾಂಡ್ ಆಗುವ ಸಂದರ್ಭದಲ್ಲಿ ವಿಮಾನ ಅಪಘಾತಕ್ಕೀಡಾಗಿ ಸಾವನ್ನಪ್ಪಿದರು. ಅವರ ಅಕಾಲಿಕ ಮರಣದ ನಂತರ, ವಿಮಾನದಲ್ಲಿ ಪ್ರಯಾಣಿಸುವ ಬಗ್ಗೆ ಅವರು 2024 ರಲ್ಲಿ ಮಾಡಿದ್ದ ಟ್ವೀಟ್‌ವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಅಜಿತ್ ಪವಾರ್ ಹಳೆಯ ಟ್ವೀಟ್ ವೈರಲ್
ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಹಾಗೂ ಎನ್‌ಸಿಪಿ ನಾಯಕ ಮಾಡಿದ್ದ ಟ್ವೀಟ್ ಈಗ ವೈರಲ್ ಆಗುತ್ತಿದೆ. ನಾವು ಹೆಲಿಕಾಪ್ಟರ್ ಅಥವಾ ವಿಮಾನದಲ್ಲಿ ಪ್ರಯಾಣಿಸುವಾಗ, ನಮ್ಮ ವಿಮಾನ ಅಥವಾ ಹೆಲಿಕಾಪ್ಟರ್ ಸರಾಗವಾಗಿ ಇಳಿದರೆ ಮಹಿಳಾ ಪೈಲಟ್ ಎನ್ನುವುದು ನಮಗೆ ಖಚಿತವಾಗುತ್ತ ಎಂದು ನಮಗೆ ಅರ್ಥವಾಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದರು. 2024ರ ಜನವರಿ 18ರಂದು ಈ ಟ್ವೀಟ್ ಮಾಡಲಾಗಿದೆ. ಅಜಿತ್ ಪವಾರ್ ಅವರು ಕೊನೆಯದಾಗಿ ವಿಮಾನದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ವಿಮಾನದ ಪೈಲೆಟ್ ಸಹ ಮಹಿಳೆಯೇ ಆಗಿದ್ದರು.
When we travel by helicopter or plane, if our plane or helicopter lands smoothly, we understand that the pilot is a woman.#NCPWomenPower
— Ajit Pawar (@AjitPawarSpeaks) January 18, 2024
ಅನುಭವಿ ಕ್ಯಾಪ್ಟನ್
ಅಜಿತ್ ಪವಾರ್ ಅವರು ಪ್ರಯಾಣಿಸುತ್ತಿದ್ದ ವಿಮಾನದ ಹಾರಾಟವನ್ನು ಪೈಲಟ್, ಕ್ಯಾಪ್ಟನ್ ಸುಮಿತ್ ಕಪೂರ್ ಅವರು ಮಾಡುತ್ತಿದ್ದರು. ಈ ವಿಮಾನದಲ್ಲಿದ್ದ ಪೈಲಟ್, ಕ್ಯಾಪ್ಟನ್ ಸುಮಿತ್ ಕಪೂರ್ ಅವರು 16,000 ಗಂಟೆಗಳ ಹಾರಾಟದ ಅನುಭವವನ್ನು ಹೊಂದಿದ್ದರು. ವಿಎಸ್ಆರ್ ಏವಿಯೇಷನ್‌ನ ಉನ್ನತ ಅಧಿಕಾರಿ ವಿಕೆ ಸಿಂಗ್ ಅವರು, ಇಬ್ಬರೂ ಪೈಲಟ್‌ಗಳು ದೆಹಲಿಯಲ್ಲಿ ನೆಲೆಸಿದ್ದಾರೆ ಮತ್ತು ವ್ಯಾಪಕ ಹಾರಾಟದ ಅನುಭವವನ್ನು ಹೊಂದಿದ್ದರು ಎಂದು ಹೇಳಿದ್ದರು.
ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ
ಜನವರಿ 28, 2026 ರಂದು ಬುಧವಾರ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಹಾಗೂ ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಮತ್ತು ನಾಲ್ವರು ಸಾವನ್ನಪ್ಪಿದರು. ವಿಮಾನವು ಬಾರಾಮತಿಯಲ್ಲಿ ಲ್ಯಾಂಡಿಂಗ್ ಆಗುವ ಸಂದರ್ಭದಲ್ಲಿ ಪತನಗೊಂಡಿತ್ತು. ಈ ವಿಚಾರದಲ್ಲಿ ಇನ್ನೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಮುಂದುವರಿದಿದೆ. ರಾಜಕೀಯವಾಗಿಯೂ ಮುಂದಿನ ದಿನಗಳಲ್ಲಿ ಏನೆಲ್ಲಾ ಬದಲಾವಣೆಗಳು ಆಗಬಹುದು ಎನ್ನುವ ವಿಚಾರವಾಗಿ ಹೆಚ್ಚು ಚರ್ಚೆ ಆಗುತ್ತಿದೆ.
ಇನ್ನು ಮುಖ್ಯವಾಗಿ ಮಹಿಳಾ ಪೈಲಟ್ ಇದ್ದ ಕಾರಣಕ್ಕೆ ವಿಮಾನ ಅಪಘಾತವಾಗಿದೆ ಎಂದು ಕೆಲವರು ಟ್ರೋಲ್ ಮಾಡುತ್ತಿದ್ದು, ಈ ಟ್ರೋಲ್‌ಗೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಕೆಲವರು ಕೀಳು ಮಟ್ಟದ ಟ್ರೋಲ್ ಮಾಡುತ್ತಿದ್ದು, ಇವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications