ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಕುರಿತು ಎಲ್ಲ ಪ್ರಶ್ನೆಗಳಿಗೆ ಒಂದು ಕ್ಲಿಕ್ ನಲ್ಲಿ ಉತ್ತರ!

|
Google Oneindia Kannada News

ನವದೆಹಲಿ, ಏಪ್ರಿಲ್ 19: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಪ್ರತಿನಿತ್ಯ 2 ಲಕ್ಷದ ಗಡಿ ದಾಟುತ್ತಿದೆ. ಕೊವಿಡ್-19 ಸೋಂಕಿತರಿಗೆ ಅಗತ್ಯವಿರುವ ವೈದ್ಯಕೀಯ ಸೇವೆ ಹಾಗೂ ಸೌಲಭ್ಯಗಳೇ ಸಿಗುತ್ತಿಲ್ಲ.

ಭಾರತದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಬೆಡ್ ಸಿಗುತ್ತಿಲ್ಲ. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ಆಕ್ಸಿಜನ್ ಸಿಗುತ್ತಿಲ್ಲ. ದೇಶದ ಅದೆಷ್ಟು ಕಡೆಗಳಲ್ಲಿ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಸೋಂಕಿತರಿಗೆ ಐಸಿಯು ಹಾಸಿಗೆಗಳೂ ಸಿಗುತ್ತಿಲ್ಲ.

Explainer: ಕೊರೊನಾವೈರಸ್ ಅಲೆಗಳ ಆಯುಷ್ಯದ ಮೇಲೆ ಭಾರತದ ಭವಿಷ್ಯ!?Explainer: ಕೊರೊನಾವೈರಸ್ ಅಲೆಗಳ ಆಯುಷ್ಯದ ಮೇಲೆ ಭಾರತದ ಭವಿಷ್ಯ!?

ಕೊರೊನಾವೈರಸ್ ಸೋಂಕಿನಿಂದ ಪಾರಾಗುವುದಕ್ಕೆ ಅಗತ್ಯವಿರುವ ರೆಮ್ಡೆಸಿವಿರ್ ಲಸಿಕೆ ಕೊರತೆ ಎದುರಿಸಲಾಗುತ್ತಿದೆ. ಇನ್ನೊಂದು ಕಡೆಯಲ್ಲಿ ವೈದ್ಯಕೀಯ ಸಿಬ್ಬಂದಿ, ಮೊದಲ ಶ್ರೇಣಿ ಕಾರ್ಮಿಕರು ಹಾಗೂ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ನೀಡುವ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಯೂ ಖಾಲಿಯಾಗಿದೆ. ಇಂಥ ನೂರೂರು ಸಮಸ್ಯೆಗಳ ಮಧ್ಯೆ ಕೊವಿಡ್-19 ಸೋಂಕಿತರಿಗೆ ಬೆಡ್ ಎಲ್ಲಿ ಸಿಗುತ್ತೆ, ಆಮ್ಲಜನಕದ ವ್ಯವಸ್ಥೆ ಯಾವ ಆಸ್ಪತ್ರೆಯಲ್ಲಿ ಇರುತ್ತೆ. ಆಕ್ಸಿಜನ್ ಸಿಲಿಂಡಲ್ ಲಭ್ಯತೆ ಯಾವ ಆಸ್ಪತ್ರೆಯಲ್ಲಿ ಎಷ್ಟಿದೆ ಎಂಬ ಎಲ್ಲಾ ಪ್ರಶ್ನೆಗಳಿಗೆ ಸರ್ಕಾರವು ತನ್ನ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ಮಾಹಿತಿ ನೀಡುತ್ತಿದೆ.

 Where and how to find Covid-19 bed, Plasma, oxygen cylinders, Remdesivir injections in India

ಒಂದು ದಾಖಲೆಯಲ್ಲೇ ಎಲ್ಲ ಮಾಹಿತಿ ಲಭ್ಯ:

ಭಾರತದ ಎಲ್ಲ ರಾಜ್ಯಗಳು, ಪ್ರಮುಖ ನಗರಗಳು, ಜಿಲ್ಲಾ ಕೇಂದ್ರಗಳು ಹಾಗೂ ತಾಲೂಕು ಕೇಂದ್ರಗಳಲ್ಲಿ ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಯಾವ ರೀತಿಯ ಸೌಲಭ್ಯಗಳು ಲಭ್ಯವಿದೆ ಎಂಬುದನ್ನು ಪ್ರತಿ ಐದು ನಿಮಿಷಗಳಿಗೊಮ್ಮೆ ಈ ದಾಖಲೆಯಲ್ಲಿ ನಮೂದಿಸುತ್ತಿದೆ. ಕೊರೊನಾವೈರಸ್ ಸೋಂಕಿತರು ಹಾಗೂ ವೈದ್ಯಕೀಯ ಸಮಸ್ಯೆಗಳನ್ನು ಎದುರಿಸುತ್ತಿರುವ ಪ್ರತಿಯೊಬ್ಬರಿಗೆ ಇದೊಂದು ಲಿಂಕ್ ನಲ್ಲಿ ಸಂಪೂರ್ಣ ಮಾಹಿತಿ ಲಭ್ಯವಾಗಲಿದೆ.

ಕೊವಿಡ್ 19 ಸೋಂಕಿತರಿಗೆ ಬೆಡ್, ಆಕ್ಸಿಜನ್ ರೆಮ್‌ಡೆಸಿವಿರ್ ಎಲ್ಲಿ ಸಿಗುತ್ತೆ?ಕೊವಿಡ್ 19 ಸೋಂಕಿತರಿಗೆ ಬೆಡ್, ಆಕ್ಸಿಜನ್ ರೆಮ್‌ಡೆಸಿವಿರ್ ಎಲ್ಲಿ ಸಿಗುತ್ತೆ?

ಭಾರತದಲ್ಲಿ ಕೈಮೀರಿ ಹೋಗುತ್ತಿರುವ ಕೊರೊನಾವೈರಸ್:

ಭಾರತದಲ್ಲಿ ದೇಶದಲ್ಲಿ ಒಂದೇ ದಿನ 273810 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ 1,619 ಮಂದಿ ಪ್ರಾಣ ಬಿಟ್ಟಿದ್ದು, 1,44,178 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 1,50,61,919 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈವರೆಗೆ 1,29,53,821 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,78,769 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉಳಿದಂತೆ 19,29,329 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ.

English summary
COVID-19 second wave : Here is where and how to find covid-19 bed, medical oxygen cylinders, beds, hospitals, ramdesivir injection in India. Here is the state wise details. Take a look.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X