Union Budget: ಕೇಂದ್ರ ಬಜೆಟ್‌ನಲ್ಲಿ ಯಾವ ರಾಜ್ಯಕ್ಕೆ ಹೆಚ್ಚು ಆದ್ಯತೆ?

Union Budget 2025: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು (ಫೆಬ್ರವರಿ 1) 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಇದು ಅವರು ಮಂಡಿಸಿದ 8ನೇ ಬಜೆಟ್‌ ಆಗಿದ್ದು, ಈ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಹಾಗಾದರೆ ಈ ಬಜೆಟ್‌ನಲ್ಲಿ ಯಾವ ರಾಜ್ಯಕ್ಕೆ ಹೆಚ್ಚು ಪ್ರಾಶಸ್ತ್ಯವನ್ನು ನೀಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

2025-26ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ್ದು, ಬಜೆಟ್‌ನಲ್ಲಿ ಬಿಹಾರಕ್ಕೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಿರುವುದು ಕಂಡು ಬಂದಿದೆ. ಈ ವರ್ಷದ ಕೊನೆಯಲ್ಲಿ ಚುನಾವಣೆ ನಡೆಯಲಿರುವ ಬಿಹಾರಕ್ಕೆ ಕೇಂದ್ರ ಬಜೆಟ್‌ನಲ್ಲಿ ಹಲವಾರು ಯೋಜನೆಗಳನ್ನು ಘೋಷಿಸಲಾಗಿದೆ. ಬಿಹಾರಕ್ಕೆ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಮಂಜೂರು, ಪಾಟ್ನಾ ಐಐಟಿ ವಿಸ್ತರಣೆಗೆ ಅನುದಾನ ಘೋಷಣೆಯನ್ನು ಮಾಡಿದ್ದಾರೆ.

Which State Gets the Most Priority in Union Budget

ಬಿಹಾರದಲ್ಲಿ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಸಂಸ್ಥೆ ಸ್ಥಾಪನೆ ಮಾಡಲಾಗುವುದು. ಇದು ಪೂರ್ವ ಭಾರತದಲ್ಲಿ ಆಹಾರ ಸಂಸ್ಕರಣೆಯನ್ನು ಉತ್ತೇಜಿಸುತ್ತದೆ. ಇದರಿಂದ ಯುವಕರಿಗೆ ಉದ್ಯೋಗ ಸೃಷ್ಟಿಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಕೇಂದ್ರದ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿಯುಗೆ ಕೇಂದ್ರ ಸರ್ಕಾರ ತನ್ನ ಬಜೆಟ್ ಮೂಲಕ ಬಂಪರ್ ಉಡುಗೊರೆ ನೀಡಿದೆ. ಕೇಂದ್ರ ಸರ್ಕಾರದ ಬಹುನಿರೀಕ್ಷಿತ ಯೋಜನೆಯಾದ ಜಲ್‌ಜೀವನ್‌ ವಿಷನ್‌ ಯೋಜನೆಯನ್ನು 2028ರವರೆಗೂ ವಿಸ್ತರಣೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಇದೇ ವೇಳೆ ಮುಂದಿನ 4 ವರ್ಷಗಳಲ್ಲಿ ಟರ್, ಉರಾದ್, ಮಸೂರ್ ಖರೀದಿಸಲು 6 ಕೇಂದ್ರ ಸಂಸ್ಥೆಗಳು ತಲೆ ಎತ್ತಲಿವೆ. ಸಂಸ್ಕರಣೆ, ಮೌಲ್ಯವರ್ಧನೆ ಸುಧಾರಿಸಲು ಬಿಹಾರದಲ್ಲಿ ಮಖಾನಾ ಮಂಡಳಿಯನ್ನು ರಚಿಸಲಾಗುವುದು. ಈ ಉಪಕ್ರಮವು ರಾಜ್ಯದಲ್ಲಿ ಮಖಾನಾದ ಉತ್ಪಾದನೆ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

ಅಲ್ಲದೆ, ರಾಜ್ಯಗಳಿಗೆ ಬಂಡವಾಳ ಹೂಡಿಕೆ ಮತ್ತು ಮೂಲಸೌಕರ್ಯಕ್ಕಾಗಿ 50 ವರ್ಷಗಳ ಬಡ್ಡಿರಹಿತ ಸಾಲಕ್ಕಾಗಿ 1.5 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡುವುದಾಗಿ ಘೋಷಣೆ ಮಾಡಿದ್ದಾರೆ. ನಗರಗಳನ್ನು ಬೆಳವಣಿಗೆಯ ಕೇಂದ್ರಗಳನ್ನಾಗಿ ಮಾಡುವ ಪ್ರಸ್ತಾಪಗಳನ್ನು ಕಾರ್ಯಗತಗೊಳಿಸಲು ಸರ್ಕಾರವು 1 ಲಕ್ಷ ಕೋಟಿ ರೂಪಾಯಿಗಳ ನಗರ ಸವಾಲು ನಿಧಿಯನ್ನು ಸ್ಥಾಪನೆ ಮಾಡಲಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಭಾಷಣದಲ್ಲಿ ಹೇಳಿದರು.

ಮೂಲಸೌಕರ್ಯ ಸಂಬಂಧಿತ ಪ್ರತಿಯೊಂದು ಸಚಿವಾಲಯವು 3 ವರ್ಷಗಳ ಪಿಪಿಪಿ ಮೂಲಸೌಕರ್ಯ ಯೋಜನೆಗಳನ್ನು ರೂಪಿಸಲಿದೆ. ಹೊಸ ಯೋಜನೆಗಳಲ್ಲಿ 10 ಲಕ್ಷ ಕೋಟಿ ಯೂರೋ ಬಂಡವಾಳವನ್ನು ಮರುಪಡೆಯಲು 2025-30ರ ಎರಡನೇ ಆಸ್ತಿ ಹಣಗಳಿಸುವ ಯೋಜನೆಯನ್ನು ಘೋಷಿಸಲಾಗುವುದು. ಬ್ಯಾಂಕಬಲ್ ಯೋಜನೆಗಳಲ್ಲಿ ಶೇಕಡ 25ರಷ್ಟು ಹಣಕಾಸು, ಶೇಕಡ 50ರಷ್ಟು ಬಾಂಡ್‌ಗಳು, ಬ್ಯಾಂಕ್‌ಗಳು ಮತ್ತು ಪಿಪಿಪಿಯಿಂದ ಹಣವನ್ನು ಒದಗಿಸಬೇಕು. ಹೆಚ್ಚಿನ ಒಟ್ಟು ವೆಚ್ಚದೊಂದಿಗೆ ಜಲ ಜೀವನ್ ಮಿಷನ್ ಅನ್ನು 2028ರ ವರೆಗೆ ವಿಸ್ತರಿಸುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+