ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವೆಂಬರ್ 3ರಂದು ಸಿಗುತ್ತಾ ಕೊವ್ಯಾಕ್ಸಿನ್ ಲಸಿಕೆಗೆ WHO ಅನುಮೋದನೆ?

|
Google Oneindia Kannada News

ನವದೆಹಲಿ, ನವೆಂಬರ್ 2: ಭಾರತ್ ಬಯೋಟೆಕ್ ಸಂಸ್ಥೆಯು ಉತ್ಪಾದಿಸುವ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವಂತೆ ವಿಶ್ವ ಆರೋಗ್ಯ ಸಂಸ್ಥೆಗೆ ಶಿಫಾರಸ್ಸು ಮಾಡಲು ತಾಂತ್ರಿಕ ಸಲಹಾ ಸಮಿತಿಯು ನವೆಂಬರ್ 3ರಂದು ಅಂತಿಮ ಸಭೆ ನಡೆಸಲಿದೆ.

ನವೆಂಬರ್ 3ರ ಬುಧವಾರ ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೆ ಸಂಬಂಧಿಸಿದಂತೆ ಅಂತಿಮ ಮೌಲ್ಯಮಾಪನ ಪ್ರಕ್ರಿಯೆ ನಡೆಸಲಿದೆ. ತದನಂತರದಲ್ಲಿ ಲಸಿಕೆಯ ತುರ್ತು ಬಳಕೆ ಕುರಿತು ಅನುಮೋದನೆ ನೀಡಬೇಕೇ ಬೇಡವೇ ಎಂಬ ಬಗ್ಗೆ ಅಧಿಕೃತವಾಗಿ ತಿಳಿಸಲಿದೆ ಎಂದು ಸಮಿತಿ ಹೇಳಿದೆ.

ಆಸ್ಟ್ರೇಲಿಯಾದ ಅನುಮೋದಿತ ಲಸಿಕೆಗಳ ಪಟ್ಟಿಗೆ ಕೊವ್ಯಾಕ್ಸಿನ್ ಸೇರ್ಪಡೆ ಆಸ್ಟ್ರೇಲಿಯಾದ ಅನುಮೋದಿತ ಲಸಿಕೆಗಳ ಪಟ್ಟಿಗೆ ಕೊವ್ಯಾಕ್ಸಿನ್ ಸೇರ್ಪಡೆ

ಉತ್ತಮ ಗುಣಮಟ್ಟದ ಲಸಿಕೆಯನ್ನು ಉತ್ಪಾದಿಸುವ ಭಾರತೀಯ ಉದ್ಯಮದ ಮೇಲೆ ವಿಶ್ವಾಸವಿದೆ. ಕೊವ್ಯಾಕ್ಸಿನ್ ಲಸಿಕೆಯನ್ನು ತುರ್ತು ಬಳಕೆ ಪಟ್ಟಿಗೆ ಸೇರಿಸಲು ಶಿಫಾರಸ್ಸು ಮಾಡುವ ತಾಂತ್ರಿಕ ಸಲಹಾ ಸಮಿತಿಯು ಮುಂದಿನ ವಾರದಲ್ಲಿ ಅಂತಿಮ ಸುತ್ತಿನ ಸಭೆ ನಡೆಸಲಿದೆ ಎಂದು ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಏಪ್ರಿಲ್ 19ರಂದು ವಿಶ್ವ ಆರೋಗ್ಯ ಸಂಸ್ಥೆಗೆ ಅರ್ಜಿ

ಏಪ್ರಿಲ್ 19ರಂದು ವಿಶ್ವ ಆರೋಗ್ಯ ಸಂಸ್ಥೆಗೆ ಅರ್ಜಿ

ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ಕೊರೊನಾವೈರಸ್ ಸೋಂಕಿನ ವಿರುದ್ಧ ತುರ್ತು ಬಳಕೆಯ ಲಸಿಕೆಗಳ ಪಟ್ಟಿಗೆ ಸೇರಿಸಲು ಆಸಕ್ತಿ ತೋರಿಸಿತ್ತು. ಈ ಕುರಿತು ಕಂಪನಿಯು ಕಳೆದ 2021ರ ಏಪ್ರಿಲ್ 19ರಂದು ವಿಶ್ವ ಆರೋಗ್ಯ ಸಂಸ್ಥೆಗೆ ಮನವಿ ಮಾಡಿಕೊಂಡಿದ್ದು, ಅಗತ್ಯ ದಾಖಲೆಗಳೊಂದಿಗೆ ಅನುಮೋದನೆ ಶಿಫಾರಸ್ಸು ಮಾಡುವಂತೆ ಅರ್ಜಿ ಸಲ್ಲಿಸಿತ್ತು.

ತಾಂತ್ರಿಕ ಸಲಹಾ ಸಮಿತಿ ಅಂತಿಮ ಸಭೆಯಲ್ಲಿ ನಿರ್ಧಾರ

ತಾಂತ್ರಿಕ ಸಲಹಾ ಸಮಿತಿ ಅಂತಿಮ ಸಭೆಯಲ್ಲಿ ನಿರ್ಧಾರ

ಕೊವ್ಯಾಕ್ಸಿನ್ ಲಸಿಕೆ ಉತ್ಪಾದಿಸುವ ಭಾರತ್ ಬಯೋಟೆಕ್ ಕಂಪನಿಯಿಂದ ಸ್ಪಷ್ಟೀಕರಣಗಳನ್ನು ತಾಂತ್ರಿಕ ಸಲಹಾ ಸಮಿತಿ ಸ್ವೀಕರಿಸಿದೆ. ಬುಧವಾರ ಅಂತಿಮ ಹಂತದ ಸಭೆ ನಡೆಸಲಿದ್ದು, ಲಸಿಕೆಯಿಂದ ಆಗುವ ಅಪಾಯ ಮತ್ತು ಪ್ರಯೋಜನಗಳ ಬಗ್ಗೆ ಮೌಲ್ಯಮಾಪನ ನಡೆಸಲಾಗುತ್ತದೆ," ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಇತ್ತೀಚಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ್ದ WHO ವಕ್ತಾರ ಡಾ ಮಾರ್ಗರೇಟ್ ಹ್ಯಾರಿಸ್, ಕೊವ್ಯಾಕ್ಸಿನ್ ಅನ್ನು ಸಂಭಾವ್ಯ ತುರ್ತು ಬಳಕೆಯ ಪಟ್ಟಿಗೆ ಸೇರಿಸುವುದಕ್ಕೆ ಸಂಬಂಧಿಸಿದಂತೆ ಎಲ್ಲಾ ದತ್ತಾಂಶವನ್ನು ತಾಂತ್ರಿಕ ಸಲಹಾ ಸಮಿತಿಯು ಪರಿಶೀಲಿಸುತ್ತಿದೆ ಎಂದು ಹೇಳಿದ್ದರು.

ಲಸಿಕೆ ಅನುಮೋದನೆಗೆ ಸಂಬಂಧಿಸಿದಂತೆ ಶಿಫಾರಸ್ಸು

ಲಸಿಕೆ ಅನುಮೋದನೆಗೆ ಸಂಬಂಧಿಸಿದಂತೆ ಶಿಫಾರಸ್ಸು

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಕಾಲದಲ್ಲಿ ಯಾವ ಲಸಿಕೆಯನ್ನು ತುರ್ತು ಬಳಕೆಗೆ ಅನುಮೋದಿಸಬೇಕು ಎಂಬುದನ್ನು ನಿರ್ಧರಿಸುವ ತಾಂತ್ರಿಕ ಸಲಹಾ ಸಮಿತಿಯು ಒಂದು ಸ್ವತಂತ್ರ ಸಲಹಾ ಸಮಿತಿ ಆಗಿದೆ. ತುರ್ತು ಬಳಕೆ ಪಟ್ಟಿಯಲ್ಲಿ ಸೇರಿಸುವುದಕ್ಕೆ ಸಂಬಂಧಿಸಿದಂತೆ ಇರುವ ಕಾರ್ಯ ವಿಧಾನದ ಅಡಿಯಲ್ಲಿ ಸಮಿತಿಯು ಕೆಲಸ ಮಾಡುತ್ತದೆ. ಯಾವ ಲಸಿಕೆಯನ್ನು ತುರ್ತು ಬಳಕೆ ಪಟ್ಟಿಗೆ ಸೇರ್ಪಡೆ ಮಾಡುವುದು ಸೂಕ್ತ ಎಂಬ ಬಗ್ಗೆ ಈ ತಾಂತ್ರಿಕ ಸಲಹಾ ಸಮಿತಿಯು ವಿಶ್ವ ಆರೋಗ್ಯ ಸಂಸ್ಥೆಗೆ ಶಿಫಾರಸ್ಸು ಮಾಡಲಿದೆ.

ಕೊವ್ಯಾಕ್ಸಿನ್ ಲಸಿಕೆ ಪರಿಣಾಮ ಎಷ್ಟು?

ಕೊವ್ಯಾಕ್ಸಿನ್ ಲಸಿಕೆ ಪರಿಣಾಮ ಎಷ್ಟು?

ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯು ಕೊರೊನಾವೈರಸ್ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿಯಾಗಿದೆ. ಅಲ್ಲದೇ ಕೊವಿಡ್-19 ರೂಪಾಂತರ ಡೆಲ್ಟಾ ವೈರಸ್ ವಿರುದ್ಧ ಶೇ.65.2ರಷ್ಟು ಪರಿಣಾಮಕಾರಿಯಾಗಿದೆ. ಜೂನ್ ತಿಂಗಳಿನಲ್ಲಿ 3ನೇ ಹಂತದ ವೈದ್ಯಕೀಯ ಪ್ರಯೋಗಗಳಿಗೆ ಸಂಬಂಧಿಸಿದಂತೆ ಅಂತಿಮ ವಿಶ್ಲೇಷಣೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಭಾರತ್ ಬಯೋಟೆಕ್ ಕಂಪನಿ ಹೇಳಿದೆ.

English summary
WHO Final Meeting about Bharat Biotech's Covaxin Approval; Decision Maybe Announced on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X